Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾಲ್ಮೀಕಿ ರಚಿತ ರಾಮಾಯಣ ಎಲ್ಲರಿಗೂ ಮಾದರಿ - ಸಚಿವ ರಹೀಂ ಖಾನ್

ಸುದ್ದಿಮೂಲ ವಾರ್ತೆ ಬೀದರ್, ಅ.07:
ಶ್ರೀ ಮಹರ್ಷಿ ವಾಲ್ಮೀಕಿ ಬರೆದ ರಾಮಾಯಣ ಎಲ್ಲರಿಗೂ ಮಾದರಿಯಾಗಿದೆ. ಇವರ ಇತಿಹಾಸದ ಬಗ್ಗೆೆ ಎಲ್ಲರೂ ಅರಿತುಕೊಂಡು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ ಹೇಳಿದರು.
ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಾಣ ಇಲಾಖೆ ಸಹಯೋಗದಲ್ಲಿ ನಗರದ ಡಾ.ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಹಮ್ಮಿಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯೋೋತ್ಸವ ಕಾರ್ಯಕ್ರಮ ಉದ್ಘಾಾಟಿಸಿ ಮಾತನಾಡಿದರು.
ಮಹರ್ಷಿ ವಾಲ್ಮೀಕಿ ಭವನ ನಿರ್ಮಾಣಕ್ಕೆೆ ಬೇಕಾದ ಅನುದಾನ ಬಗ್ಗೆೆ ಮುಖ್ಯಮಂತ್ರಿಿಗಳ ಬಳಿ ಮನವಿ ಮಾಡಿದ್ದಾಾಗಿ ಹೇಳಿದರು.
ಬೀದರ ಸಂಸದ ಸಾಗರ ಈಶ್ವರ ಖಂಡ್ರೆೆ ಮಾತನಾಡಿ, ಮಹರ್ಷಿ ವಾಲ್ಮೀಕಿಯನ್ನು ಆದಿ ಕವಿ ಎಂದು ಕರೆಯುತ್ತಾಾರೆ. ಇವರು ಬರೆದಿರುವ ರಾಮಾಯಣ ಗ್ರಂಥ ಇಡೀ ವಿಶ್ವಕ್ಕೆೆ ಮಾದರಿಯಾಗಿದೆ ಎಂದರು.
ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಬೆಲ್ದಾಾಳೆ ಅವರು ಮಾತನಾಡಿ, ಮಹರ್ಷಿ ವಾಲ್ಮೀಕಿ ಅವರು ಬರೆದ ರಾಮಾಯಣದಿಂದ ಹೊಸ ಯುಗಕ್ಕೆೆ ನಾಂದಿ ಹಾಡಿತು. ಜಗತ್ತಿಿನ ಶ್ರೇೇಷ್ಠ ಗ್ರಂಥಗಳಲ್ಲಿ ರಾಮಾಯಣ ಕೂಡ ಒಂದಾಗಿದೆ. ಮಹಾತ್ಮರನ್ನು ನಾವೆಲ್ಲರೂ ಯಾವುದೇ ಒಂದು ಜಾತಿ ಅಥವಾ ಸಮುದಾಯಕ್ಕೆೆ ಸಿಮೀತಗೊಳಿಸಬಾರದು ಏಕೆಂದರೆ ಅವರ ಇಡೀ ಸಮಾಜಕ್ಕೆೆ ಕೊಡುಗೆ ನೀಡಿದ್ದಾರೆ ಎಂದರು.
ಸಾಮಾಜಿಕ ಚಿಂತಕ ಶಿವಾನಂದ ನಿಡವಂಚಾ ಅವರು ಶ್ರೀ ಮಹರ್ಷಿ ವಾಲ್ಮೀಕಿ ಅವರ ಕುರಿತು ಅತಿಥಿ ಉಪನ್ಯಾಾಸ ನೀಡಿದರು.
ಇದೇ ಸಂದರ್ಭದಲ್ಲಿ ಅತೀ ಹೆಚ್ಚು ಅಂಕ ಪಡೆದ ಸಮಾಜದ ವಿದ್ಯಾಾರ್ಥಿಗಳಿಗೆ ಎಲ್ಲಾ ಗಣ್ಯರು ಸನ್ಮಾಾನಿಸಿದರು.
ಕಾರ್ಯಕ್ರಮಕ್ಕೂ ಮುಂಚಿತವಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆೆ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್, ಬೀದರ ದಕ್ಷಿಣ ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಾಳೆ ಹಾಗೂ ಜಿಲ್ಲಾಧಿಕಾರಿ ಶಿಲ್ಪಾಾ ಶರ್ಮಾ ಅವರು ಪೂಜೆ ಸಲ್ಲಿಸಿ ನಂತರ ಮೆರವಣಿಗೆಗೆ ಚಾಲನೆ ನೀಡಿದರು.
ಈ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಮಹ್ಮದ ಗೌಸ್, ಜಿಲ್ಲಾ ಗ್ಯಾಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಅಮೃತರಾವ ಚಿಮಕೋಡೆ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಾಣಾಧಿಕಾರಿ ಗಿರೀಶ್ ರಂಜೋಳಕರ ಸಮಾಜದ ಮುಖಂಡರಾದ ಜಗನ್ನಾಾಥ ಜಮಾದಾರ, ಸುನೀಲ್ ಕಾಶಂಪೂರ್, ರಾಜಕುಮಾರ ಕರಣಿ, ನಂದುಕುಮಾರ ಜಮಗಿಕರ್, ಸುನಿಲ ಭಾವಿಕಟ್ಟಿಿ, ಮಾರುತಿ ಮಾಸ್ಟರ ಸೇರಿದಂತೆ ಸಮಾಜದ ಮುಖಂಡರು ಹಾಗೂ ಬಾಂಧವರು ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ