Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೊರಗುತ್ತಿಗೆ ಕಾರ್ಮಿಕರಿಗೆ ವಿವಿಧ ಸೌಲಭ್ಯ: ಅರಿವು ಕಾರ್ಯಕ್ರಮ

ಸುದ್ದಿಮೂಲವಾರ್ತೆ

ಕೊಪ್ಪಳ,ಜು.25 :ಗುತ್ತಿಗೆ ಕಲ ಕಾರ್ಮಿಕ ಕಾಯ್ದೆಗಳನ್ವಯ ಕ್ರಮಗಳನ್ನು ಕೈಗೊಳ್ಳುವಾಗ ಕಾರ್ಮಿಕ ಇಲಾಖೆಯ ಮಾರ್ಗಸೂಚಿಗಳ ಪಾಲನೆ ಮಹತ್ವದ್ದಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಹೊರಗುತ್ತಿಗೆ ಕಾರ್ಮಿಕರಿಗೆ ಕನಿಷ್ಟ ವೇತನ ಹಾಗೂ ಇಎಸ್ ಐ ಮತ್ತು ಪಿಎಫ್ ಸೌಲಭ್ಯಗಳನ್ನು ಪಾವತಿಸುವ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುವ ಹೊರಗುತ್ತಿಗೆ ಕಾರ್ಮಿಕರಿಗೆ ಕನಿಷ್ಠ ವೇತನ, ಇತರ ಸೌಲಭ್ಯಗಳು ಸರಿಯಾಗಿ ದೊರಕುವಂತೆ ವ್ಯವಸ್ಥೆ ಮಾಡಬೇಕು.

ಹೊರಗುತ್ತಿಗೆ ಕಾರ್ಮಿಕರಿಗೆ ಕನಿಷ್ಠ ವೇತನ ಹಾಗೂ ಇ.ಎಸ್.ಐ ಮತ್ತು ಪಿ.ಎಫ್ ಸೌಲಭ್ಯಗಳು ಸಿಗುತ್ತಿರುವುದರ ಬಗ್ಗೆ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು.

ಟೆಂಡರ್ ಕರೆಯುವ ಮುನ್ನ ಸರ್ಕಾರದ ಮಾರ್ಗಸೂಚಿಯನ್ವಯ ಏಜೆನ್ಸಿಯವರಿಗೆ ಷರತ್ತುಗಳನ್ನು ವಿದಿಸಿ ಪ್ರಕ್ರಿಯೆ ನಡೆಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿನ ವಿವಿಧ ಇಲಾಖೆಗಳು, ನಗರ ಸ್ಥಳೀಯ ಸಂಸ್ಥೆಗಳು, ಪಂಚಾಯತ್ ಹಾಗೂ ಇತರ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ಸಿಬ್ಬಂದಿಯ ವಿವರದ ಮಾಹಿತಿಯ ಪಟ್ಟಿ ಸಿದ್ಧಪಡಿಸಲು ಕಾರ್ಮಿಕ ಇಲಾಖೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ಸಂಬಂಧಪಟ್ಟ ಅಧಿಕಾರಿಗಳು ತಮ್ಮ ಕಚೇರಿಯಲ್ಲಿನ ಹೊರಗುತ್ತಿಗೆ ಕಾರ್ಮಿಕರ ಮಾಹಿತಿಯನ್ನು ಕಾರ್ಮಿಕ ಇಲಾಖೆಗೆ ನೀಡುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದಕ್ಕು ಮೊದಲು ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಸುಧಾ ಗರಗ ಅವರು, ಹೊರಗುತ್ತಿಗೆ ನೌಕರರಿಗೆ ವಿವಿಧ ಸೌಲಭ್ಯಗಳ ಪಾವತಿಗೆ ಸಂಬಂಧಿಸಿದಂತೆ ಕಾರ್ಮಿಕ ಕಾಯಿದೆಯಗಳ ಬಗ್ಗೆ ಅಧಿಕಾರಿಗಳಿಗೆ ಸಮಗ್ರ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಜಿಪಂ ಮುಖ್ಯ ಯೋಜನಾಧಿಕಾರಿಗಳಾದ ಡಿ.ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ