Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಮಿಳುನಾಡಿಗೆ ಕಾವೇರಿ ನೀರು : ಖಾಲಿ ಕೊಡ ಪ್ರದರ್ಶಿಸಿದ ವಾಟಾಳ್

ಸುದ್ದಿಮೂಲ ವಾರ್ತೆ

ಮೈಸೂರು, ಸೆ.17:ತಮಿಳುನಾಡಿಗೆ ಕಾವೇರಿ ನೀರನ್ನು ಬಿಡುಗಡೆ ಮಾಡುವ ಮೂಲಕ ರಾಜ್ಯದ ಜನರನ್ನು ಸಂಕಷ್ಟಕ್ಕೆ ಸಿಲುಕಿಸಲಾಗಿದೆ ಎಂದು ಖಂಡಿಸಿ ಭಾನುವಾರ ಕನ್ನಡ ಚಳವಳಿಗಾರ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ಖಾಲಿ ಕೊಡಗಳನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ತಮಿಳುನಾಡು ಸಿಎಂ ಸ್ಟ್ಯಾಲಿನ್‌ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಘೋಷಣೆ ಕೂಗಲಾಯಿತು. ಈ ವೇಳೆ ಕೂಡಲೇ ಕದ್ದುಮುಚ್ಚಿ ನೀರು ಹರಿಸುವುದನ್ನು ನಿಲ್ಲಿಸದಿದ್ದರೆ ತೀವ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಲಾಯಿತು.

ಆಡಳಿತ ಮತ್ತು ವಿರೋಧ ಪಕ್ಷಗಳ ರಾಜಕೀಯ

ವಾಟಾಳ್‌ ನಾಗರಾಜ್‌ ಅವರು ಮಾತನಾಡಿ, ಕಾವೇರಿ ವಿಚಾರದಲ್ಲಿ ಸರ್ಕಾರ ಹಾಗೂ ವಿಪಕ್ಷಗಳು ಎರಡು ರಾಜಕೀಯ ಮಾಡುತ್ತಿವೆ.ಒಬ್ಬೊಬ್ಬರು ಒಂದೊಂದು ದಿಕ್ಕಿನಲ್ಲಿ ಮಾತನಾಡುತ್ತಿದ್ದಾರೆ. ರಾಜ್ಯದ ಹಿತ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಲ್ಲ. ಕಾಂಗ್ರೆಸ್‌ನವರು ಪಾಳೇಗಾರಿಕೆ ಮಾಡುತ್ತಿದ್ದಾರೆ. ನೀರು ಬಿಡುವ ಇಂತ ಪಾಳೆಗಾರರನ್ನು ನಾನು ಹಿಂದೆ ನೋಡಿಲ್ಲ ನೀರು ಬಿಡಬೇಕಾಗತ್ತೆ ಬಿಡ್ತೀವಿ ಎಂದು ಡಿ.ಕೆ ಶಿವಕುಮಾರ್ ಹೇಳುತ್ತಾರೆ. ಇಂತಹ ಹೇಳಿಕೆಯಿಂದ ನನಗೆ ನೋವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಮಿಳರನ್ನು ವಾಪಸ್ ಕಳಿಸಿ

ಬೆಂಗಳೂರು, ಮೈಸೂರು, ಮಂಡ್ಯದಲ್ಲಿರುವ ತಮಿಳರನ್ನು ವಾಪಸ್ ಕಳುಹಿಸಬೇಕಾಗುತ್ತೆ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಗೆ ನೇರ ಎಚ್ಚರಿಕೆ ಕೊಟ್ಟ ವಾಟಾಳ್ ನಾಗರಾಜ್, ತಮಿಳರು ಇಲ್ಲಿ ಇರಬಾರದು ಇವರಿಗೆ ಇಲ್ಲಿ ಎಲ್ಲಿಂದ ನೀರು ಕೊಡೋಣ ? ಎಚ್ಚರ ಮುಂದಿನ ದಿನಗಳಲ್ಲಿ ತಮಿಳುನಾಡು ಸರ್ಕಾರದ ಹಾಗೂ ಸ್ಟಾಲಿನ್ ವಿರುದ್ಧ ಕರ್ನಾಟಕದ್ಯಾಂತ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಯಡಿಯೂರಪ್ಪನವರು ತಮಿಳರಿಗೋಸ್ಕರ ತಿರುವಳ್ಳುವರ್ ಪ್ರತಿಮೆ ನಿರ್ಮಾಣ ಮಾಡಿದರು. ಬೊಮ್ಮಾಯಿ ವಿಧಾನಸೌಧಕ್ಕೆ ಕನ್ನಡ ವಿರೋಧಿ ರಜನಿಕಾಂತ್ ಕರೆಸಿ ಸಮಾರಂಭ ಮಾಡಿದರು. ಈಗ ರಜನಿಕಾಂತ್ ಗೆ ನಿಜವಾಗಲೂ ಎದೆಗಾರಿಕೆ, ಪ್ರಾಮಾಣಿಕತೆ ಇದ್ದರೆ ಸ್ಟಾಲಿನ್ ನಿರ್ಧಾರವನ್ನು ಖಂಡಿಸಬೇಕು. ಕಮಲ್ ಹಾಸನ್ ಕೂಡ ಎಂದು ಆಗ್ರಹಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ