Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಿಂಗಳ ಅಂತರದಲ್ಲಿ ಪತಿ-ಪತ್ನಿ ಅಗಲಿಕೆ ವೀಣಾ ಧ್ರುವನಾರಾಯಣ್ ನಿಧನ

ಸುದ್ದಿಮೂಲ ವಾರ್ತೆ
ಚಾಮರಾಜನಗರ, ಏ.8:  ಕಾಂಗ್ರೆಸ್ ಹಿರಿಯ ನಾಯಕರಾಗಿದ್ದ ದಿವಂಗತ ಧ್ರುವನಾರಾಯಣ ಅವರ ಪತ್ನಿ ವೀಣಾ ಧ್ರುವನಾರಾಯಣ (50) ಅವರು ಶುಕ್ರವಾರ ನಿಧನರಾಗಿದ್ದು, ಒಂದೇ ತಿಂಗಳ ಅಂತರದಲ್ಲಿ ಪತಿ-ಪತ್ನಿ ಅಗಲಿಕೆ ಕುಟುಂಬಕ್ಕೆ ತೀವ್ರ ಶೋಕ ಉಂಟುಮಾಡಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ ಕಳೆದ ಮಾ.11ರಂದು ಅಕಾಲಿಕ ನಿಧನರಾಗಿದ್ದರು. ಇದರಿಂದ ತೀವ್ರವಾಗಿ ನೊಂದಿದ್ದ ಅವರ ಪತ್ನಿ ಸಹ ಆರೋಗ್ಯ ಹದಗೆಟ್ಟು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿ ಆಗದೆ ಮೃತಪಟ್ಟಿದ್ದಾರೆ. ಮೃತರ ಅಂತ್ಯಕ್ರಿಯೆ ಚಾಮರಾಜನಗರ ತಾಲ್ಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ಧ್ರುವನಾರಾಯಣ ಅವರ ಸಮಾಧಿ ಪಕ್ಕದಲ್ಲಿಯೇ ನೆರವೇರಿದೆ.

ಕಳೆದ 10 ವರ್ಷಗಳಿಂದ ಬ್ರೇನ್ ಟ್ಯೂಮರ್‌ನಿಂದ ಬಳಲುತ್ತಿದ್ದರು. ಪತಿಯ ಸಾವಿನ ಬಳಿಕ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿತ್ತು. ಕೆಲವು ದಿನಗಳಿಂದ ಹಾಸಿಗೆ ಹಿಡಿದಿದ್ದ ವೀಣಾ ಧ್ರುವನಾರಾಯಣ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ವೀಣಾ ಧೃವನಾರಾಯಣ ಅವರ ನಿಧನಕ್ಕೆ ಹಲವು ರಾಜಕೀಯ ಮುಖಂಡರು ಶೋಖ ವ್ಯಕ್ತಪಡಿಸಿದ್ದಾರೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, 'ಆತ್ಮೀಯರು, ಮಾಜಿ ಸಂಸದರು ಆಗಿದ್ದ ದಿವಂಗತ ಧ್ರುವನಾರಾಯಣ ಅವರ ಪತ್ನಿ ವೀಣಾ ಧ್ರುವನಾರಾಯಣ ಅವರ ಸಾವು ಆಘಾತಕಾರಿಯಾದುದು. ವೀಣಾ ಅವರ ಅಗಲಿಕೆಯ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಮಗ ದರ್ಶನ್ ಸೇರಿದಂತೆ ಆ ಕುಟುಂಬ ಪಡೆಯಲಿ ಎಂದು ಪ್ರಾರ್ಥಿಸುತ್ತೇನೆ,' ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಮಗಮನಿಗೆ ಕಾಂಗ್ರೆಸ್ ಟಿಕೆಟ್:
ನಂಜನಗೂಡು ಕ್ಷೇತ್ರದಿಂದ ಸ್ಪರ್ಧಿಸಲು ದಿವಂಗತ ಧ್ರುವನಾರಾಯಣ್ ಇಚ್ಚಿಸಿದ್ದರು. ಆದರೆ, ಅವರ ನಿಧನದಿಂದ ಅವರ ಪುತ್ರ ದರ್ಶನ್ ಧ್ರುವನಾರಾಯಣ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು. ತಂದೆಯ ಸಾವಿನ ಆಘಾತದಿಂದ ನೊಂದಿದ್ದ ದರ್ಶನ್ ಕಾರ್ಯಕರ್ತರ ಒತ್ತಾಯದ ಮೇರೆಗೆ ಏ. 3ರಿಂದ ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಶುರು ಮಾಡಿದ್ದರು. ಹಳ್ಳಿಹಳ್ಳಿಗಳಿಗೂ ತೆರಳಿ ಮತಯಾಚನೆ ಮಾಡಿದ್ದರು. ಆದರೆ, ಪ್ರಚಾರ ಆರಂಭಿಸಿದ ಮೂರನೇ ದಿನಗಳಲ್ಲಿ ತಾಯಿಯ ಸಾವಿನ ಬರಸಿಡಿಲು ಅವರಿಗೆ ತಟ್ಟಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ