Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶೇಷಚೇತನರು ಸುಲಲಿತವಾಗಿ ಮತದಾನ ಮಾಡಲು ವಾಹನ ವ್ಯವಸ್ಥೆ: ಜಿಲ್ಲಾಧಿಕಾರಿ

ಸುದ್ದಿಮೂಲ ವಾರ್ತೆ
ತುಮಕೂರು, ಏ.3: ಜಿಲ್ಲೆಯಲ್ಲಿ ಸುಮಾರು 29,700 ವಿಶೇಷಚೇತನ ಮತದಾರರಿದ್ದು, ಇವರೆಲ್ಲರೂ ಮೇ 10ರ ಮತದಾನಹಬ್ಬದ ದಿನ ಮತದಾನ ಮಾಡಲು ಅನುಕೂಲವಾಗುವಂತೆ ಅಂದು ಪ್ರತಿ ಗ್ರಾಮಪಂಚಾಯಿತಿಗೆ ಒಂದರಂತೆ ವಾಹನ ಸೌಲಭ್ಯ ಕಲ್ಪಿಸಲಿದ್ದು, ಈ ಸೌಲಭ್ಯವನ್ನು ಬಳಸಿಕೊಂಡು ವಿಶೇಷಚೇತನರು ತಮ್ಮ ವ್ಯಾಪ್ತಿಯ ಮತಗಟ್ಟೆಗೆ ತೆರಳಿ ತಪ್ಪದೆ ಮತದಾನ ಮಾಡುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಮನವಿ ಮಾಡಿದರು.

ವಿಕಲಚೇತನ ಮತದಾರರು ತಮ್ಮ ಹಕ್ಕನ್ನು ಚಲಾಯಿಸುವುದಕ್ಕಾಗಿ ಮತಗಟ್ಟೆಗಳಿಗೆ ತಲುಪಲು ಪ್ರತಿ ಗ್ರಾಮ ಪಂಚಾಯಿತಿ 6-8 ಕಿಲೋ ಮೀಟರ್ ವ್ಯಾಪ್ತಿಗೆ ಒಂದು ಆಟೋವನ್ನು ನೀಡಲಾಗುವುದು ಎಂದು ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸ್ವೀಪ್ ಸಮಿತಿ ವತಿಯಿಂದ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ‘ಕರ್ನಾಟಕ ವಿಧಾನ ಸಭಾ ಚುನಾವಣೆ 2023ರ’ ವಿಕಲಚೇತನರ ಹಾಗೂ ತೃತೀಯ ಲಿಂಗಿ ಮತದಾರರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಲೆ ಮತ್ತು ಸಂಗೀತಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಅತ್ಯುತ್ತಮ ಕಲಾವಿದರನ್ನು ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ.

ಅವರು ತಮ್ಮ ಸಂಗೀತ ಗಾಯನದ ಮೂಲಕ ಮತದಾರರಲ್ಲಿ ಅರಿವು ಮೂಡಿಸಬೇಕು. ತೃತೀಯ ಲಿಂಗಿ ಮತದಾರರು ತಮ್ಮ ಹಕ್ಕನ್ನು ಕಡ್ಡಾಯವಾಗಿ ಚಲಾಯಿಸುವುದರ ಕುರಿತು ತೃತೀಯ ಲಿಂಗಿಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಮತದಾನದ ದಿನವನ್ನು ಹಬ್ಬದ ರೀತಿಯಲ್ಲಿ ಆಚರಿಬೇಕು ಹಾಗೂ ಯಾವ ಮತದಾರ ಮತಗಟ್ಟೆಗೆ ಬರಲು
ಸಾಧ್ಯವಿಲ್ಲವೋ ಅಂತಹ ಮತದಾರ ನಮೂನೆ 12ಡಿ ಅನ್ನು ಪಡೆದು ಅಂಚೆಮತ ಚಲಾಯಿಸಬೇಕು. ಉಳಿದವರು ಮತಗಟ್ಟೆಗಳಿಗೆ ಬಂದು ಮತ ಚಲಾಯಿಸಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ:ಕೆ. ವಿದ್ಯಾಕುಮಾರಿ ಮಾತನಾಡಿ, ವಿಧಾನಸಭಾ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಶೇ.82ರಷ್ಟು ಮತದಾನವಾಗಿರುತ್ತದೆ. ಈ ಬಾರಿ ಶೇ.100ರಷ್ಟು ಮತದಾನ ಆಗಬೇಕಿದೆ. ನಗರ ಭಾಗದಲ್ಲಿ ಶೇಕಡಾ 65ರಷ್ಟು ಮತದಾನ ಪ್ರಮಾಣ ಇದ್ದು, ಇದೂ ಸಹ ಶೇ.100ಕ್ಕೆ ಹೆಚ್ಚಳವಾಗಬೇಕಿದೆ ಎಂದು ಹೇಳಿದರು.

ಯುವ ಮತದಾರರು ಮತಗಟ್ಟೆಗಳಿಗೆ ಬಂದು ಮತಚಲಾವಣೆ ಮಾಡದೆ ಮತದಾನದಿಂದ ಹೊರಗೆ
ಉಳಿಯುತ್ತಿದ್ದಾರೆ. ಆದ್ದರಿಂದ ಯುವ ಮತದಾರರು ಮತ ಚಲಾವಣೆ ಮಾಡುವ ಹಾಗೇ ಅವರಲ್ಲಿ ಮತದಾನದ ಪ್ರಾಮುಖ್ಯತೆಯ ಬಗ್ಗೆ ತಿಳಿಸಬೇಕು. ತೃತೀಯ ಲಿಂಗಿಗಳು ಮತಗಟ್ಟೆಗಳಿಗೆ ಬರಲು ಹಿಂದೇಟು ಹಾಕುವ ಮೂಲಕ ಮತದಾನದಿಂದ ದೂರ ಉಳಿಯುತ್ತಿದ್ದಾರೆ ಎಂದರು.

ವಿಕಲಚೇತನರು ಇಂದು ನಗರದ ಜ್ಯೂನಿಯರ್ ಕಾಲೇಜು ಮೈದಾನದಿಂದ ಜಿಲ್ಲಾ ಪಂಚಾಯತ್ ಆವರಣದವರೆಗೆ ಮೂರು ಚಕ್ರದ ಬೈಕ್ ಹಾಗೂ ಸೈಕಲ್ ಮೂಲಕ ಮತದಾನದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಜಾಥಾ ಮೂಲಕ ಮತದಾನದ ಮಹತ್ವ ಕುರಿತು ಎಲ್ಲರಲ್ಲಿ ಅರಿವು
ಮೂಡಿಸಲಾಯಿತು ಎಂದರು.

ಭಾರತದ ಸಂವಿಧಾನದಲ್ಲಿ ಎಲ್ಲರಿಗೂ ಮತ ಚಲಾಯಿಸುವ ಹಕ್ಕು ಇದೆ. ಜಿಲ್ಲೆಯ ಎಲ್ಲಾ ಮತದಾರರು ತಮ್ಮ ಹಕ್ಕನ್ನು ಚಲಾಯಿಸುವುದರ ಮೂಲಕ ಜಿಲ್ಲೆಯ ಮತದಾನದ ಪ್ರಮಾಣ ಶೇಕಡಾ ನೂರರಷ್ಟು ಆಗಬೇಕು ಎಂದರಲ್ಲದೇ, ಮತದಾನದ ಮಹತ್ವವನ್ನು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸವನ್ನು ಸ್ವೀಪ್ ಸಮಿತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಜಿಲ್ಲಾ ಚುನಾವಣಾ ರಾಯಭಾರಿ ಕಥಾಕೀರ್ತನ ಗಾಯಕರಾದ ಲಕ್ಷ್ಮಣ್ ದಾಸ್ ಮಾತನಾಡಿ, ಚುನಾವಣಾ ಆಯೋಗವು ರಾಯಭಾರಿಗಳಿಗೆ ನೀಡಿದ ಜವಾಬ್ದಾರಿಯನ್ನು ಪ್ರಾಮಾಣಿಕತೆಯಿಂದ ನಿರ್ವಹಿಸುತ್ತೇವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಚುನಾವಣಾ ರಾಯಭಾರಿಗಳಾದ ಗಾಯಕ ಕಂಬದ ರಂಗಯ್ಯ, ಬುಡಕಟ್ಟು ಹಾಡುಗಾರರಾದ ಮೋಹನ್‌ಕುಮಾರ್, ಸಮಾಜ ಸೇವಕಿ ಲಿಲ್ಲಿ, ಹಾಡುಗಾರರಾದ ಮಂಜಮ್ಮ ಹಾಗೂ ರತ್ನಮ್ಮ ಅವರುಗಳು ಮಾತನಾಡಿ, ಮತದಾನ ಮಾಡುವಂತೆ ಕೋರುತ್ತಾ, ತಮ್ಮ ಕಲಾ ಪ್ರಕಾರಗಳನ್ನು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಚುನಾವಣಾ ರಾಯಭಾರಿಗಳನ್ನು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ
ಹಾಗೂ ಜಿಲ್ಲಾ ಪಂಚಾಯತ್ ಸಿಇಓ ಡಾ: ಕೆ. ವಿದ್ಯಾಕುಮಾರಿ ಅವರು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ಕುಮಾರ್ ಶಹಾಪೂರ್‌ವಾಡ್ ಉಪಸ್ಥಿತರಿದ್ದರು

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ