Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ವ್ಯಾಜ್ಯಗಳ ನಿರ್ವಹಣೆಗೆ ವಿಷಯ ಪರಿಣತಿ ಅತ್ಯಗತ್ಯ : ವೆಂಕಟ ಸುದರ್ಶನ್

ಸುದ್ದಿಮೂಲ ವಾರ್ತೆ

ತುಮಕೂರು, ಆ.11: ಖಾಸಗಿಯವರು ಅಕ್ರಮವಾಗಿ ಒತ್ತುವರಿ ಮಾಡದಂತೆ ಸರ್ಕಾರಿ ಆಸ್ತಿಯನ್ನು ಸಂರಕ್ಷಿಸಿ ನ್ಯಾಯಾಲಯದಲ್ಲಿ ವ್ಯಾಜ್ಯಗಳನ್ನು ನಿರ್ವಹಿಸಲು ಸರ್ಕಾರಿ ನೌಕರರು ಕಾನೂನು ವಿಷಯದಲ್ಲಿ ಪರಿಣತಿ ಹೊಂದಿರುವುದು ಅತ್ಯಗತ್ಯ ಎಂದು ನಿವೃತ್ತ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಬೆಂಗಳೂರು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಾಜಿ ಅಧ್ಯಕ್ಷರಾದ ವೆಂಕಟ ಸುದರ್ಶನ್ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಸಹಯೋಗದಲ್ಲಿ ನಗರದ ಕನ್ನಡ ಭವನದಲ್ಲಿಂದು ಸರ್ಕಾರಿ ನೌಕರರಿಗಾಗಿ “ಸರ್ಕಾರದ ಹಾಗೂ ಸಾರ್ವಜನಿಕ ಆಸ್ತಿಗಳ ಸಂರಕ್ಷಣೆ” ಕುರಿತು ಆಯೋಜಿಸಿದ್ದ ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದರು.

ಸರ್ಕಾರಿ ಹಾಗೂ ಸಾರ್ವಜನಿಕ ಆಸ್ತಿ ಸಂರಕ್ಷಣೆಗಾಗಿ ನೌಕರರು ಕಾಲ- ಕಾಲಕ್ಕೆ ಹೊರಡಿಸಲಾಗುವ ಕಾನೂನು ತಿದ್ದುಪಡಿಗಳ ಬಗ್ಗೆ ತಿಳಿದುಕೊಂಡಿರಬೇಕು. ಸರ್ಕಾರದ ವಿರುದ್ಧ ಯಾವುದೇ ವ್ಯಕ್ತಿಗಳು ನ್ಯಾಯಾಲಯದಲ್ಲಿ ದಾವೆ ಹೂಡಿದಾಗ ಯಾವ ರೀತಿ ಕ್ರಮಗಳನ್ನು ಅನುಸರಿಸಬೇಕೆಂದು ಮಾಹಿತಿ ನೀಡಿದರು.

ಎಷ್ಟೇ ಉನ್ನತ ಅಧಿಕಾರಿಗಳಾಗಿದ್ದರೂ ಕಾನೂನು ವಿಷಯದಲ್ಲಿ ಅರಿವು ಇಲ್ಲದಿದ್ದರೆ ಸರ್ಕಾರದ ವ್ಯಾಜ್ಯಗಳು ನ್ಯಾಯಾಲಯದಲ್ಲಿ ಬಗೆಹರಿಯದೆ ಬಾಕಿ ಉಳಿದುಕೊಳ್ಳುವ ಸಾಧ್ಯತೆ ಹೆಚ್ಚು ಎಂದು ತಿಳಿಸಿದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷೆ ಕೆ.ಬಿ.ಗೀತಾ ಮಾತನಾಡಿ, ಸ್ವಂತ ಆಸ್ತಿ ಹೇಗೆ ಕಾಪಾಡಿಕೊಳ್ಳುತ್ತೇವೆಯೋ ಅದೇ ರೀತಿ ಸರ್ಕಾರದ ಅನ್ನ ತಿನ್ನುತ್ತಿರುವ ನಾವೆಲ್ಲಾ ಸರ್ಕಾರಿ ಹಾಗೂ ಸಾರ್ವಜನಿಕರ ಆಸ್ತಿಯನ್ನು ಸಂರಕ್ಷಿಸುವಲ್ಲಿ ಆಸಕ್ತಿವಹಿಸಬೇಕು.

ಸರ್ಕಾರದ ವ್ಯಾಜ್ಯಗಳ ಬಗ್ಗೆ ಕಾಳಜಿಯಿಂದ ಕ್ರಮಕೈಗೊಂಡಲ್ಲಿ ಮೌಲ್ಯಯುತವಾದ ಸರ್ಕಾರಿ ಸ್ಥಳಗಳನ್ನು ಉಳಿಸಿಕೊಳ್ಳಬಹುದಾಗಿದೆ. ಇಲ್ಲದಿದ್ದಲ್ಲಿ ಸರ್ಕಾರಿ ಆಸ್ತಿಯನ್ನು

ಲಪಟಾಯಿಸುವವರ ಸಂಖ್ಯೆಯನ್ನು ನಿಯಂತ್ರಿಸಲು ಕಷ್ಟಸಾಧ್ಯವಾಗುತ್ತದೆ ಎಂದರಲ್ಲದೆ, ಇಂಥ ಕೃತ್ಯಗಳಿಗೆ ಒಂದು ರೀತಿಯಲ್ಲಿ ನಾವೂ ಸಹ ಪರೋಕ್ಷವಾಗಿ ಕಾರಣರಾಗುತ್ತೇವೆ ಎಂದು ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಮಾತನಾಡಿ, ಈ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ

ವೆಂಕಟ್ ಸುದರ್ಶನ್ ಅವರು ಸಿವಿಲ್ ದಾವೆಗಳಲ್ಲಿನ ಹಂತಗಳು ಹಾಗೂ ಸರ್ಕಾರಿ ವ್ಯಾಜ್ಯಗಳಲ್ಲಿ ಸರ್ಕಾರಿ ನೌಕರರ ಪಾತ್ರದ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದರಲ್ಲದೆ ಸರ್ಕಾರಿ ಆಸ್ತಿ ಕಾಪಾಡುವಲ್ಲಿ ಉದಾಸೀನ ಬೇಡ. ಸರ್ಕಾರಿ ವ್ಯಾಜ್ಯಗಳು ಶೀಘ್ರ ವಿಲೇವಾರಿಯಾಗಲು ಅಧಿಕಾರಿಗಳು ಸಹಕರಿಸಬೇಕು. ಸರ್ಕಾರಿ ಸೇವೆಯಲ್ಲಿರುವವರೆಲ್ಲರೂ ಭಾಗ್ಯಶಾಲಿಗಳು. ಸರ್ಕಾರಿ ಆಸ್ತಿ ಸಂರಕ್ಷಣೆಯಲ್ಲಿ ಕೈಜೋಡಿಸುವ ಮೂಲಕ ಸರ್ಕಾರದ ಋಣ ತೀರಿಸಿ ಋಣಮುಕ್ತರಾಗಬೇಕು ಎಂದು ಕರೆ ನೀಡಿದರು.

ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮಾತನಾಡಿ, ಸರ್ಕಾರಿ/ಸಾರ್ವಜನಿಕರ ಆಸ್ತಿಗೆ ಸರ್ಕಾರಿ ನೌಕರರು ಕಾವಲುಗಾರರಾಗಿರಬೇಕು. ಆಸ್ತಿ ಉಳಿಸುವಲ್ಲಿ ಕಾಳಜಿ ಹೊಂದಿರಬೇಕು. ಜಿಲ್ಲೆಯ ನ್ಯಾಯಾಲಗಳಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕರ ಕೊರತೆ ನೀಗಿಸುವ ದೃಷ್ಟಿಯಿಂದ ಆ.16 ಹುದ್ದೆಗಳನ್ನು ಭರ್ತಿ ಮಾಡಲು ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ.

ನ್ಯಾಯಾಲಯದಲ್ಲಿ ಸರ್ಕಾರಿ ವ್ಯಾಜ್ಯಗಳನ್ನು ಪ್ರತಿನಿಧಿಸಲು ಈ ನೇಮಕಾತಿ ಅನುಕೂಲವಾಗಲಿದೆ. ಸರ್ಕಾರಿ ನೌಕರರು ಅಧಿಕಾರಿಗಳು ಕೋರ್ಟ್ ಆದೇಶಗಳನ್ನು ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಬಾಕಿ ಇರುವ ವ್ಯಾಜ್ಯಗಳ ಬಗ್ಗೆ 15 ದಿನಗಳಿಗೊಮ್ಮೆ ಪರಿಶೀಲಿಸಿ ವಿಲೇವಾರಿಗೆ ಕ್ರಮವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಬಳಕೆಯಾಗುವ ಆಸ್ತಿಯನ್ನು ಭೂಕಬಳಿಕೆದಾರರು ಅನುಭವಿಸದಂತೆ ಅಧಿಕಾರಿಗಳು ಕಟ್ಟೆಚ್ಚರವಹಿಸಬೇಕೆಂದು ಸೂಚನೆ ನೀಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ