Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿಸಿ, ಸಿಇಓಗಳ ಜೊತೆ ವಿಡಿಯೋ ಸಭೆ: ಪ್ರತಿದಿನ ಶೇ.10ರಷ್ಟು ಪ್ರಗತಿಗೆ ಸೂಚನೆ ಗಣತಿ ಕಾರ್ಯಕ್ಕೆೆ ಚುರುಕು ನೀಡಿದ ಸಿದ್ದರಾಮಯ್ಯ

ಸುದ್ದಿಮೂಲ ವಾರ್ತೆ ಬೆಂಗಳೂರು, ಸೆ.26:
ರಾಜ್ಯಾಾದ್ಯಂತ ಈಗಾಗಲೇ ಆರಂಭವಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯ, ಸಮೀಕ್ಷೆಯ ಕೆಲಸಕ್ಕೆೆ ಚುರುಕು ನೀಡಿದರು.
ಅವರು ಇಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆೆ ಕೃಷ್ಣಾಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿ ಜಿಲ್ಲಾವಾರು ನಡೆಯುತ್ತಿಿರುವ ಸಮೀಕ್ಷೆ, ತೊಡಕುಗಳು ಮತ್ತು ಅದಕ್ಕೆೆ ಪರಿಹಾರೋಪಾಯಗಳನ್ನು ಸೂಚಿಸಿದರು.
ಸಮೀಕ್ಷೆ ಕಾರ್ಯ ರಾಜ್ಯಾಾದ್ಯಂತ ಆರಂಭವಾಗಿದ್ದು, ಆರಂಭದಲ್ಲಿ ಕೆಲವು ತಾಂತ್ರಿಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ಈಗ ಎಲ್ಲಾ ತಾಂತ್ರಿಿಕ ಸಮಸ್ಯೆೆಗಳನ್ನು ಬಗೆಹರಿಸಲಾಗಿದೆ. ಇಂದಿನಿಂದ ಸಮೀಕ್ಷೆ ಕಾರ್ಯ ಚುರುಕುಗೊಳಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಮುಂದೆ ಸಮೀಕ್ಷೆ ಕಾರ್ಯಕ್ಕೆೆ ಯಾವುದೇ ತಾಂತ್ರಿಿಕ ತೊಂದರೆಗಳು ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ತಾಂತ್ರಿಿಕ ತೊಂದರೆಗಳು ಎದುರಾದರೆ ತಕ್ಷಣ ಅದನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಸಮೀಕ್ಷೆ ಕಾರ್ಯ ಎಲ್ಲಾ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.
ಪ್ರತಿ ದಿನ ಜಿಲ್ಲಾವಾರು ಕನಿಷ್ಠ ಶೇಕಡಾ 10ರಷ್ಟು ಸಮೀಕ್ಷೆ ಗುರಿ ಸಾಧಿಸಬೇಕು. ಪ್ರಾಾದೇಶಿಕ ಆಯುಕ್ತರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸಮೀಕ್ಷೆ ಪ್ರಗತಿಯ ಪರಿಶೀಲನೆ ನಡೆಸಬೇಕು ಮತ್ತು ಸಕ್ರಿಿಯವಾಗಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಗಣತಿದಾರರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಎಚ್ಚರಿಕೆ ನೀಡಿದರು.
143 ಕುಟುಂಬಗಳ ಸಮೀಕ್ಷೆ:
ರಾಜ್ಯದಲ್ಲಿ ಒಟ್ಟು 143 ಕೋಟಿ, 81 ಲಕ್ಷ,702 ಕುಟುಂಬಗಳ ಸಮೀಕ್ಷೆ ಕಾರ್ಯ ನಡೆಸಬೇಕಾಗಿದ್ದು, ಇದುವರೆಗೆ 2 ಕೋಟಿ, 76 ಲಕ್ಷ 016 ಕುಟುಂಬಗಳ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಲಾಗಿದೆ. ಸಮೀಕ್ಷೆ ಕಾರ್ಯಕ್ಕೆೆ ಒಟ್ಟು 1,20,728 ಗಣತಿದಾರರನ್ನು ನಿಯೋಜಿಸಲಾಗಿದೆ. ಒಟ್ಟು 1,22,085 ಗಣತಿ ಬ್ಲಾಾಕ್‌ಗಳನ್ನು ಗುರುತಿಸಲಾಗಿದೆ. ಅಕ್ಟೋೋಬರ್ 7ರ ಒಳಗಾಗಿ ಗಣತಿ ಕಾರ್ಯ ಪೂರ್ಣಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಗೌರವಧನದ ಮೊತ್ತ ಬಿಡುಗಡೆ
ಸಮೀಕ್ಷೆ ಕಾರ್ಯಕ್ಕೆೆ ನಿಯೋಜಿಸಿರುವ ಎಲ್ಲಾ ಶಿಕ್ಷಕರು ತಮಗೆ ವಹಿಸಲಾಗಿರುವ ಕಾರ್ಯವನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು. ಯಾವುದೇ ಶಿಕ್ಷಕರು ಗಣತಿ ಕಾರ್ಯಕ್ಕೆೆ ಅಸಹಕಾರ ತೋರಿಸಬಾರದು. ಇದು ಸರ್ಕಾರಿ ಕೆಲಸವಾಗಿದ್ದು, ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಬಾರದು. ನಿರ್ಲಕ್ಷ್ಯ ವಹಿಸುವ ಗಣತಿದಾರರ ಮೇಲೆ ಕ್ರಮ ಕೈಗೊಳ್ಳಬೇಕು.
ಶಿಕ್ಷಕರಿಗೆ ಗೌರವಧನದ ಬಗ್ಗೆೆ ಯಾವುದೇ ಅನುಮಾನ ಬೇಡ. ಈಗಾಗಲೇ ಗೌರವಧನವನ್ನು ಬಿಡುಗಡೆ ಮಾಡಿದ್ದೇವೆ. ಪ್ರಾಾಥಮಿಕ ಹಾಗೂ ಪ್ರೌೌಢಶಾಲಾ ಶಿಕ್ಷಕರು ಗಣತಿ ಕಾರ್ಯದಲ್ಲಿ ಸಕ್ರಿಿಯವಾಗಿ ಪಾಲ್ಗೊೊಳ್ಳಬೇಕು ಎಂದರು.
ಇದು ಕೇವಲ ಹಿಂದುಳಿದ ವರ್ಗಗಳ ಕಲ್ಯಾಾಣ ಇಲಾಖೆಯ ಸಮೀಕ್ಷೆಯಲ್ಲ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ನಿಗದಿತ ಗುರಿಯ ಪ್ರಗತಿ ಬಗ್ಗೆೆ ಪ್ರತಿ ದಿನ ಪರಿಶೀಲನೆ ನಡೆಸಬೇಕು. ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ನಿಧಾನಗತಿಯಲ್ಲಿದ್ದು, ಚುರುಕುಗೊಳಿಸಬೇಕು. ಅಗತ್ಯವಿರುವ ಕಡೆ ಅನುದಾನಿತ ಶಾಲೆಗಳ ಶಿಕ್ಷಕರ ಸೇವೆ ಪಡೆದುಕೊಳ್ಳಬೇಕು. ಜಿಲ್ಲಾ ಉಸ್ತುವಾರಿ ಸಚಿವರೊಂದಿಗೂ ಈ ಕುರಿತು ಸಂಪರ್ಕದಲ್ಲಿರಬೇಕು.
ಗುಡ್ಡಗಾಡು ಪ್ರದೇಶಗಳ ವ್ಯಾಾಪ್ತಿಿಯಲ್ಲಿ ಶಾಲೆಗಳಲ್ಲಿ ಸಮೀಕ್ಷೆ ಕೇಂದ್ರಗಳನ್ನು ಆರಂಭಿಸಲು ಅವಕಾಶ ನೀಡಲಾಗಿದೆ. ಜನರು ಕೇಂದ್ರಕ್ಕೆೆ ಬಂದು ಸಮೀಕ್ಷೆ ಕಾರ್ಯದಲ್ಲಿ ಪಾಲ್ಗೊೊಳ್ಳಬಹುದಾಗಿದೆ. ಆನ್‌ಲೈನ್ ಮೂಲಕ ಸಹ ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗಲು ಅವಕಾಶ ಕಲ್ಪಿಿಸಲಾಗಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು. ಸಮೀಕ್ಷೆ ಸಂದರ್ಭದಲ್ಲಿ ಮನೆಗಳಿಗೆ ಬೀಗ ಹಾಕಿದ್ದರೆ, ಅಂತಹ ಮನೆಗಳಲ್ಲೂ ಗಣತಿ ಕಾರ್ಯ ಮುಂದಿನ ದಿನಗಳಲ್ಲಿ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕು.
ಸಮೀಕ್ಷೆ ಕಾರ್ಯದ ಮೇಲ್ವಿಿಚಾರಣೆ ನಡೆಸಲು ಪ್ರತಿ ತಾಲೂಕಿಗೆ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಸಿಎಂ, ಜಿಲ್ಲಾ ಮಟ್ಟದಲ್ಲಿ ಯಾವುದೇ ತಾಂತ್ರಿಿಕ ತೊಂದರೆಗಳು ಎದುರಾದರೆ ಸ್ಥಳೀಯವಾಗಿ ಸಮಸ್ಯೆೆ ಬಗೆಹರಿಸಲು ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳಲ್ಲಿರುವ ಐಟಿ ತಂತ್ರಜ್ಞರ ನೆರವನ್ನು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಉಪ ಮುಖ್ಯಮಂತ್ರಿಿ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಕೆ.ಪಾಟೀಲ್, ಶಿವರಾಜ ತಂಗಡಗಿ, ಕೃಷ್ಣ ಭೈರೇಗೌಡ, ರಹೀಂ ಖಾನ್, ಭೈರತಿ ಸುರೇಶ್, ಮಧು ಬಂಗಾರಪ್ಪ, ಎನ್.ಎಸ್. ಭೋಸರಾಜು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ ನಾಯ್ಕ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿಿ, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ