Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೋಲಿಯೋ ಅಭಿಯಾನಕ್ಕೆ ವಿಧಾನ ಪರಿಷತ್ ಶಾಸಕ ಚಾಲನೆ

ಸುದ್ದಿಮೂಲ ವಾರ್ತೆ ಸಿಂಧನೂರು, ಡಿ.21:
ನಗರದ ಸಾರ್ವಜನಿಕ ಆಸ್ಪತ್ರೆೆಯಲ್ಲಿ ರವಿವಾರ ವಿಧಾನ ಪರಿಷತ್ ಶಾಸಕ ಬಸನಗೌಡ ಬಾದರ್ಲಿ ಅವರು ಮಗುವಿಗೆ ಲಸಿಕೆ ಹಾಕಿ ರಾಷ್ಟ್ರೀಯ ಪಲ್‌ಸ್‌ ಪೋಲಿಯೋ ಅಭಿಯಾನಕ್ಕೆೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಆರೋಗ್ಯವಂತ ಸಮಾಜ ನಿರ್ಮಾಣವಾಗ ಬೇಕಾದರೆ ಮಕ್ಕಳು ಆರೋಗ್ಯವಂತರಾಗಿರಬೇಕು. ನಮ್ಮ ರಾಷ್ಟ್ರದಲ್ಲಿ ಪೋಲಿಯೋ ಸಂಪೂರ್ಣ ನಿರ್ಮೂಲನೆ ಆಗಿದೆ. ಮತ್ತೆೆ ಪೋಲಿಯೋ ವೈರಸ್‌ನಿಂದ ಅಂಗವೈಕಲ್ಯಕ್ಕೆೆ ಒಳಗಾಗದಂತೆ ಮುನ್ನೆೆಚ್ಚರಿಕೆಯಾಗಿ ಸಾರ್ವಜನಿಕರು ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ಬೂತ್ ಮಟ್ಟದಲ್ಲಿ ಕರೆತಂದು ಕಡ್ಡಾಾಯವಾಗಿ ಲಸಿಕೆ ಹಾಕಿಸಬೇಕೆಂದು ಹೇಳಿದರು.
ಡಿ.22ರಿಂದ 24ರ ವರೆಗೆ ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಮನೆ ಮನೆಗಳಿಗೆ ಭೇಟಿ ಕೊಟ್ಟು ಬಿಟ್ಟು ಹೋದ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುತ್ತಾಾರೆ. ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೆ ಪೋಲಿಯೊ ಹನಿ ಹಾಕಿಸುವ ಮೂಲಕ ಆರೋಗ್ಯವಂತ ಸದೃಢ ಸಮಾಜ ನಿರ್ಮಾಣ ಮಾಡಬೇಕು ಎಂದರು.
ತಾಲ್ಲೂಕು ಆರೋಗ್ಯಾಾಧಿಕಾರಿ ಡಾ.ಅಯ್ಯನಗೌಡ ಮಾತನಾಡಿ, ತಾಲ್ಲೂಕಿನ 5 ವರ್ಷದೊಳಗಿನ 45571 ಮಕ್ಕಳಿದ್ದು, 248 ಮೇಲ್ವಿಿಚಾರಕರ ತಂಡಗಳನ್ನು ರಚನೆ ಮಾಡಿದ್ದು 14 ಸಂಚಾರಿ ತಂಡಗಳನ್ನು ರಚಿಸಲಾಗಿದೆ. ಮೂರು ದಿನಗಳ ಕಾಲ ಅಂಗನವಾಡಿ, ಆಶಾ ಕಾರ್ಯಕರ್ತರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮನೆ ಮನೆಗೆ ಹೋಗಿ ಮಕ್ಕಳಿಗೆ ಪೋಲೀಯೊ ಹಾಕಲಾಗುವುದು. ಆರೋಗ್ಯ ಇಲಾಖೆ ಸಿಬ್ಬಂದಿಗೆ ಸಾರ್ವಜನಿಕರು ಸಹಕಾರ ನೀಡಿ ಪೋಲೀಯೊ ಮುಕ್ತ ತಾಲ್ಲೂಕು ನಿರ್ಮಾಣ ಮಾಡೋಣ ಎಂದರು.
ಸಾರ್ವಜನಿಕ ಆಸ್ಪತ್ರೆೆಯ ಮುಖ್ಯ ವೈದ್ಯಾಾಧಿಕಾರಿ ಡಾ.ಸುರೇಶಗೌಡ, ತಾಲ್ಲೂಕು ಶಿಶುಅಭಿವೃದ್ಧಿಿ ಯೋಜನಾಧಿಕಾರಿ ಲಿಂಗನಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಬಸಲಿಂಗಪ್ಪ, ವೈದ್ಯರಾದ ಡಾ.ಹನುಮಂತರೆಡ್ಡಿಿ, ಡಾ.ನಾಗರಾಜ ಕಾಟ್ವಾಾ, ಡಾ.ಶೃತಿ, ಡಾ.ಮಂಜುನಾಥ ಅಣ ಗೌಡರ್, ಡಾ.ಅಮ್ಜದ್ ಸೇರಿದಂತೆ ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ