Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾರಕಿಹೊಳಿ ಮನವೊಲಿಕೆಗೆ ವಿಜಯೇಂದ್ರ ಕಸರತ್ತು

ಸುದ್ದಿಮೂಲ ವಾರ್ತೆ

ಬೆಂಗಳೂರು, ನ.23: ಬಿಜೆಪಿ ನಾಯಕತ್ವದ ವಿರುದ್ಧ ಅಸಮಾಧಾನಗೊಂಡಿರುವ ಶಾಸಕ ರಮೇಶ್‌ ಜಾರಕಿಹೊಳಿ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭೇಟಿ ನೀಡಿ ಉಪಹಾರ ಸಭೆ ನಡೆಸಿದರು. ಈ ಮೂಲಕ ಅಸಮಾಧಾನಗೊಂಡಿರುವ ಪಕ್ಷದ ನಾಯಕರ ಮನವೊಲಿಕೆಗೆ ಕಸರತ್ತು ಆರಂಭಿಸಿದ್ದಾರೆ.

ಸದಾಶಿವನಗರದ ರಮೇಶ್ ಜಾರಕಿಹೊಳಿ‌ ನಿವಾಸಕ್ಕೆ ಬೆಳಗ್ಗೆ ವಿಜಯೇಂದ್ರ ಅವರು ಭೇಟಿ ನೀಡಿದ್ದು, ಈ ವೇಳೆ ವಿಜಯೇಂದ್ರಗೆ ಜಾರಕಿಹೊಳಿ ಅವರು, ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು. ಬಳಿಕ ಇಬ್ಬರೂ ಒಟ್ಟಿಗೆ ಕುಳಿತು ಉಪಾಹಾರ ಸೇವಿಸಿದರು.

ವಿಜಯೇಂದ್ರ ನೇಮಕ ಹಾಗೂ ವಿಪಕ್ಷ ನಾಯಕ ಸ್ಥಾನವನ್ನು ಉತ್ತರ ಕರ್ನಾಟಕಕ್ಕೆ ಕೊಡದ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಅಸಮಾಧಾನ ವ್ಯಕ್ತಪಡಿಸಿದ್ದರು.

ಬಳಿಕ ಮಾತನಾಡಿದ ವಿಜಯೇಂದ್ರ, ರಮೇಶ್ ಜಾರಕಿಹೊಳಿ ಅವರ ನಡೆ ಬಗ್ಗೆ ಹಲವು ರೀತಿಯಲ್ಲಿ ಚರ್ಚೆ ನಡೆಯುತ್ತಿತ್ತು. ಕೆಲವು ಸಲ ಅವರು ಅಸಮಾಧಾನ ತೋಡಿಕೊಂಡಿದ್ದರು. ಎಲ್ಲರನ್ನೂ ಪಕ್ಷದಲ್ಲಿ ಜೊತೆಗೆ ಕರೆದೊಯ್ಯುವುದು ನನ್ನ ಜವಾಬ್ದಾರಿ. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಭೇಟಿ ಮಾಡಿ ಅರ್ಧ ಗಂಟೆ ಚರ್ಚೆ ಮಾಡಿದ್ದೇನೆ. ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗಬೇಕು. ಪಕ್ಷದಲ್ಲಿ ಸಹಕಾರ ಕೊಡುತ್ತೇನೆಂದು ಹೇಳಿದ್ದಾರೆಂದು ಎಂದರು.

ಪಕ್ಷದ ಹಿರಿಯರು ಏನೇ ಹೇಳಿಕೆ ಕೊಟ್ಟರೂ ಅದನ್ನು ಗಂಭೀರವಾಗಿ ಪರಿಗಣಿಸುವೆ. ಅವರೆಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವೆ. ಯಾರು ಏನೇ ಹೇಳಿಕೆ ಕೊಟ್ಟರೂ ಅದನ್ನು ಅಪಾರ್ಥ ಮಾಡಿಕೊಳ್ಳದೆ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯಾಧ್ಯಕ್ಷನಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

ಇವತ್ತು ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಸುಮಾರು 30 ನಿಮಿಷ ಮಾತನಾಡಿದ್ದೇನೆ. ಕೆಲವು ನೋವುಗಳನ್ನೂ ತೋಡಿಕೊಂಡಿದ್ದಾರೆ ಎಂದರಲ್ಲದೆ, ರಾಷ್ಟ್ರೀಯ ನಾಯಕರು, ವರಿಷ್ಠರು ಕೊಟ್ಟ ಜವಾಬ್ದಾರಿ ನಿರ್ವಹಿಸುತ್ತೇನೆ. ಎಲ್ಲರೂ ಜೊತೆಯಾಗಿ ನರೇಂದ್ರ ಮೋದಿಜೀ ಅವರ ಕೈಯನ್ನು ಬಲಪಡಿಸುತ್ತೇವೆ ಎಂದು ತಿಳಿಸಿದರು.

ನಂತರ ರಮೇಶ್ ಜಾರಕಿಹೊಳಿ ಮಾತನಾಡಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಮತ್ತು ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡಲು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿರುವುದಾಗಿ ಸ್ಪಷ್ಟಪಡಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ