Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಂದ್ರನ ಸನಿಹದ ಫೋಟೊ ಕಳುಹಿಸಿದ ವಿಕ್ರಮ್ ಲ್ಯಾಂಡರ್

ಸುದ್ದಿಮೂಲ ವಾರ್ತೆ

ಬೆಂಗಳೂರು,ಆ.21: ಚಂದ್ರಯಾನ-3 ಗಗನನೌಕೆಯು ಚಂದ್ರನ ಸನಿಹದಿಂದ ಫೋಟೋಗಳನ್ನು ಕ್ಲಿಕ್ಕಿಸಿದೆ. ವಿಕ್ರಮ್ ಲ್ಯಾಂಡರ್ ತೆಗೆದ ಈ ಫೋಟೋಗಳನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದೆ.

ಲ್ಯಾಂಡರ್ ಹಜಾರ್ಡ್ ಡಿಟೆಕ್ಷನ್ ಆಂಡ್ ಅವಾಯಿಡೆನ್ಸ್ ಕ್ಯಾಮೆರಾ ಎಲ್‌ಎಚ್‌ಡಿಎಸಿ ಮೂಲಕ ಈ ಚಿತ್ರಗಳನ್ನು ಸೆರೆಹಿಡಿಯಲಾಗಿದೆ. ಈ ಕ್ಯಾಮೆರಾ ಸುರಕ್ಷಿತ ಲ್ಯಾಂಡಿಂಗ್ ಪ್ರದೇಶವನ್ನು ಪತ್ತೆಹಚ್ಚಲು ನೆರವಾಗಲಿದೆ. ಬಂಡೆಗಳು ಅಥವಾ ಆಳವಾದ ಕಂದಕಗಳಿಲ್ಲದ ಸ್ಥಳದಲ್ಲಿ ಇಳಿಯದೇ ನೋಡಿಕೊಳ್ಳಲು ಇದು ಸಹಕಾರಿಯಾಗಿದೆ.

ಚಂದ್ರನ ಕಕ್ಷೆಯಲ್ಲಿ ಸಿಂಕ್ರೊನಸ್ ಆಗಿ ತಿರುಗುವಿಕೆಯಿಂದಾಗಿ ಚಿತ್ರಗಳಲ್ಲಿ ಸೆರೆಹಿಡಿಯಲಾದ ಮತ್ತೊಂದು ಭಾಗ ಭೂಮಿಗೆ ಕಾಣಿಸುವುದೇ ಇಲ್ಲ. ಇದೀಗ ಇಸ್ರೋದ ಕ್ಯಾಮೆರಾ ಆ ಭಾಗದ ಚಿತ್ರಗಳನ್ನು ತೆಗೆದಿದೆ. ಇದೇ ಬುಧವಾರ ಚಂದ್ರಯಾನ 3 ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದ ಭಾಗದಲ್ಲಿ ಇಳಿಯಲಿದೆ.

ಇದು ಯಶಸ್ವಿಯಾದರೆ ಚಂದ್ರನ ಮೇಲೆ ಲ್ಯಾಂಡರ್ ಇಳಿಸಿದ ಜಗತ್ತಿನ ನಾಲ್ಕನೇ ದೇಶವೆಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಲಿದೆ. ಈಗಾಗಲೇ ಅಮೆರಿಕ, ರಷ್ಯಾ ಮತ್ತು ಚೀನಾ ದೇಶಗಳು ಈ ಕೀರ್ತಿಗೆ ಪಾತ್ರವಾಗಿವೆ. ಈವರೆಗೂ ಯಾವುದೇ ದೇಶ ತನ್ನ ಗಗನ ಯಾನವನ್ನು ದಕ್ಷಿಣ ಧ್ರುವದ ಸಮೀಪ ಇಳಿಸಿಲ್ಲ. ಭಾರತ ಯಶಸ್ವಿಯಾದರೆ ಮೊದಲನೇ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗುತ್ತದೆ.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ