Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷರಾಗಿ ವಿನಯ್ ಕುಲಕರ್ಣಿ ನೇಮಕ

ಬೆಂಗಳೂರು,ಆ.7: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಶಾಸಕ ವಿನಯ್ ಕುಲಕರ್ಣಿ ಅವರನ್ನು ನೇಮಕ ಮಾಡಲಾಗಿದ್ದು, ಇಂದು ಸಭಾದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅವರು ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರ ಸಮ್ಮುಖದಲ್ಲಿ ಅಧಿಕಾರ ವಹಿಸಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಮಹಾಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ, ಸಮಾಜದ ಸರ್ವಾಂಗೀಣ ಅಭ್ಯುದಯಕ್ಕಾಗಿ ಸಭಾದ ಎಲ್ಲ ಪದಾಧಿಕಾರಿಗಳೂ ಸಂಘಟಿತರಾಗಿ ಶ್ರಮಿಸಬೇಕು. ಸಂಘಟನಾ ಚತುರರು, ಸಮಾಜದ ಬಗ್ಗೆ ಅಪಾರ ಕಾಳಜಿ ಹೊಂದಿರುವ ವಿನಯ್ ಕುಲಕರ್ಣಿ ಅವರು ಈಗ ಸಭಾದ ಪದಾಧಿಕಾರಿಯಾಗಿದ್ದು ಹೆಚ್ಚಿನ ಬಲ ಬಂದಂತಾಗಿದೆ ಎಂದರು.

ಇಂದು ಸಮಾಜ ಕವಲು ದಾರಿಯಲ್ಲಿದೆ. ಏಕತೆ ಇದ್ದರೆ ಶಕ್ತಿ ಇರುತ್ತದೆ. ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಉಪ ಪಂಗಡಗಳೂ ಒಗ್ಗೂಡಲು ಇದು ಸಕಾಲ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಸಭಾದ ರೇಣುಕಾಪ್ರಸನ್ನ, ಸಚ್ಚಿದಾನಂದಮೂರ್ತಿ, ಶರಣು ಮೋದಿ, ಪ್ರಭಾಕರ್ ಗೌಡ ಮತ್ತಿತರ ಪದಾಧಿಕಾರಿಗಳು, ಸಮಾಜದ ಮುಖಂಡರು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ