Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯಲಹಂಕ ವಲಯದಲ್ಲಿ ಬಿಬಿಎಂಪಿಯಿಂದ ಮತದಾನ ಜಾಗೃತಿ




ಸುದ್ದಿಮೂಲ ವಾರ್ತೆ
ಬೆಂಗಳೂರು, ಏ.14: ಯಲಹಂಕ ವ್ಯಾಪ್ತಿಯ ರೈಲ್ವೆ ನಿಲ್ದಾಣ, ಆರ್.ಎಂ.ಝಡ್ ಮಾಲ್, ಪೆಟ್ರೋಲ್‌ ಬಂಕ್, ಬಸ್ ಪ್ರಯಾಣಿಕರು, ಆಟೋ ಚಾಲಕರು, ಬೀದಿ ವ್ಯಾಪಾರಿಗಳೊಂದಿಗೆ ಬಿಬಿಎಂಪಿ ವಲಯ ಜಂಟಿ ಆಯುಕ್ತೆ ಪೂರ್ಣಿಮಾ ನೇತೃತ್ವದಲ್ಲಿ ಇಂದು ಮತದಾನ ಜಾಗೃತಿ ಅಭಿಯಾನ ನಡೆಸಲಾಯಿತು.

ಮೊದಲಿಗೆ ಯಲಹಂಕ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಮತದಾನ ದಿನದ ಬ್ಯಾನರ್ ಹಾಗೂ ಜಾಗೃತಿ ಮೂಡಿಸುವ ಬಿತ್ತಿಪತ್ರಗಳನ್ನು ಪ್ರದರ್ಶಿಸುವ ಮೂಲಕ ತಪ್ಪದೆ ಮತದಾನ ಮಾಡಲು ಅರಿವು ಮೂಡಿಸಲಾಯಿತು.

ಆರ್.ಎಂ.ಝಡ್ ಮಾಲ್ ಗೆ ಬಂದಂತಹ ನಾಗರಿಕರು ಹಾಗೂ ಅಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಮತದಾನ ಮಾಡುವ ಬಗ್ಗೆ ತಿಳುವಳಿಕೆ ನೀಡಿ ಮತದಾನ ದಿನ ಎಲ್ಲರೂ ತಪ್ಪದೆ ಮತದಾನ ಮಾಡಲು ತಿಳಿಸಿದರು.

ಇನ್ನು ಯಲಹಂಕ ಎನ್.ಇ.ಎಸ್ ಬಸ್ ನಿಲ್ದಾಣದ ಬಳಿಯ ಪೆಟ್ರೋಲ್ ಬಂಕ್ ಸಿಬ್ಬಂದಿ ವರ್ಗ, ಆಟೋ ಚಾಲಕರು, ಬೀದಿ ಬದಿ ವ್ಯಾಪಾರಿಗಳು ಹಾಗೂ ಬಸ್ ನಲ್ಲಿ ಪ್ರಯಾಣಿಸುವ ಪ್ರಯಾಣಿಕರಲ್ಲಿ ಮತದಾನ ಮಾಡುವ ಬಗ್ಗೆ ಜಾಗೃತಿ ಮೂಡಿಸುವ ಜೊತೆಗೆ ಮತದಾನ ಮಾಡುವ ಬಗ್ಗೆ ಮತದಾನ ಸಂಕಲ್ಪವನ್ನು ಮಾಡಲಾಯಿತು.

ಮಾನವ ಸರಪಳಿ‌ ಮೂಲಕ ಜಾಗೃತಿ:

ಕೊಡಿಗೆಹಳ್ಳಿ ವ್ಯಾಪ್ತಿಯಲ್ಲಿ ಪೌರಕಾರ್ಮಿಕರೊಂದಿಗೆ ಮಾನವ ಸರಪಳಿಯನ್ನು ರಚಿಸಿ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ತಪ್ಪದೆ ಮತದಾನ ಮಾಡಲು ಎಲ್ಲರಲ್ಲೂ ಜಾಗೃತಿ ಮೂಡಿಸಲಾಯಿತು.

ಜಾಗೃತಿ ಕಾರ್ಯಕ್ರಮದಲ್ಲಿ ಉಪ ಆಯುಕ್ತರಾದ ಮಮತಾ, ಕಂದಾಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.






Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ