Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಬೆಂಗಳೂರು ನಗರದ ವಿವಿಧೆಡೆ ಮತದಾನ ಜಾಗೃತಿ

 

ಸುದ್ದಿಮೂಲ ವಾರ್ತೆ

ಬೆಂಗಳೂರು, ಏ.12: ಬೆಂಗಳೂರು ನಗರ ಜಿಲ್ಲಾ ಚುನಾವಣಾ ಅಧಿಕಾರಿಗಳು ಬೆಂಗಳೂರು ವ್ಯಾಪ್ತಿಯಲ್ಲಿ ಬರುವ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳಲ್ಲೂ ಸಾಕಷ್ಟು ಮತದಾನ ಜಾಗೃತಿ ಕಾರ್ಯಕ್ರಮ, ಜಾಥಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ನಾಗರಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ.



161-ಸಿ.ವಿ.ರಾಮನ್ ನಗರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ನಲ್ಲಿ ಬುಧವಾರ ಮತದಾನದ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಲಯ ಆಯುಕ್ತ ಪಿ.ಎನ್ ರವೀಂದ್ರ ಮಾತನಾಡಿ, ಕರ್ನಾಟಕ ವಿಧಾನ ಸಭಾ ಸಾರ್ವತ್ರಿಕ ಚುನಾವಣೆಯು ಮೇ-10ರಂದು ನಡೆಯಲಿದ್ದು, ಈ ಬಾರಿಯು ಚುನಾವಣಾ ಆಯೋಗವು ಮತದಾನದ ದಿನದಂದು ಖಾಸಗಿ ಸ್ವಾಮ್ಯದ ಐ.ಟಿ./ಬಿ.ಟಿ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗುತ್ತಿದೆ. ಈ ಸಂಬಂಧ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ತಾವೆಲ್ಲರೂ, ತಮ್ಮ ಕುಟುಂಬದ ಸದಸ್ಯರು ಹಾಗೂ ಅಕ್ಕ ಪಕ್ಕದ ನಿವಾಸಿಗಳಿಗೆ ಮತದಾನದ ಬಗ್ಗೆ ಅರಿವು ಮೂಡಿಸಿತಿಳಿಸಿ, ಮತದಾನದ ಕೇಂದ್ರಕ್ಕೆ ಬಂದು ಮಾಡುವಂತೆ ಮನವಿ ಮಾಡಿದರು.

ಪದ್ಮನಾಭನಗರ:

171-ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾರ್ಡ್-180 ಬನಶಂಕರಿಯಲ್ಲಿರುವ ಮತಗಟ್ಟೆಯ ಪ್ರದೇಶದಲ್ಲಿ ವಾಸವಿರುವ ಮತದಾರರಿಗೆ ಸ್ವೀಪ್ ಕಾರ್ಯಕ್ರಮದಡಿಯಲ್ಲಿ ಸ್ಥಳೀಯ ಪೊಲೀಸ್ ಸಿಬ್ಬಂದಿಗಳೊಂದಿಗೆ ಜಾಗೃತಿ ಜಾಥಾ ಮೂಲಕ ಸಾರ್ವಜನಿಕರು ಹಾಗೂ ಯುವ ಮತದಾರರು ತಪ್ಪದೇ ಮತ ಚಲಾಯಿಸಬೇಕೆಂದು ಅರಿವು ಮೂಡಿಸಲಾಯಿತು.

ಈ ವೇಳೆ ಚುನಾವಣಾಧಿಕಾರಿಯಾದ ಹರಿಶಿಲ್ಪ ಜಿ.ಆರ್, ಎಂಸಿಸಿ ನೋಡಲ್ ಅಧಿಕಾರಿಯಾದ ನಾಗಪ್ರಶಾಂತ್, ಮತದಾರರ ಪಟ್ಟಿ ನೊಂದಣಾಧಿಕಾರಿಯಾದ ನಾಗರಾಜ್.ಕೆ, ಸಹಾಯಕ ಮತದಾರರ ಪಟ್ಟಿ ನೊಂದಣಾಧಿಕಾರಿಯಾದ ರಾಜ್‌ಕುಮಾರ್ ಇನ್ನಿತರೆ ಸಿಬ್ಬಂದಿಗಳು ಭಾಗವಹಿಸಿದ್ದರು.

ಗೋವಿಂದರಾಜನಗರ:

ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023ರ ಸಂಬಂಧ ಭಾರತೀಯ ಚುನಾವಣೆ ಆಯೋಗ ಹಾಗೂ ಬಿಬಿಎಂಪಿ ಸಹಯೋಗದೊಂದಿಗೆ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಸುಮಾರು 150 ಎ.ಎಸ್.ಸಿ ಕಾಲೇಜು ಮಕ್ಕಳು ಹಾಗೂ ಅಧಿಕಾರಿಗಳು ಸಾರ್ವಜನಿಕರಿಗೆ ಚುನಾವಣೆ ಅರಿವು ಮೂಡಿಸಲು ಎ.ಎಸ್.ಸಿ ಕಾಲೇಜು ರಿಂದ ಟೋಲ್‌ಗೇಟ್ ವೃತ್ತ, ಕರಿಮಾರಿಯಮ್ಮ ದೇವಸ್ಮಾನ, ಅಜಾಜಿನಗರ ಮುಖ್ಯರಸ್ತೆ, ಡಾ.ರಾಜ್‌ಕುಮಾರ್ ಸಮುದಾಯ ಭವನ, 4ನೇ ಮುಖ್ಯರಸ್ತೆ, ರಾಜಾಜಿನಗರ 1ನೇ ಬ್ಲಾಕ್ ಹಾಗೂ ಎ.ಎಸ್.ಸಿ ಕಾಲೇಜು ಬಳಿ ಕೊನೆಗೊಳಿಸಲಾಯಿತು.

ಆರ್.ಆರ್ ನಗರ-ಯಶವಂತಪುರ:

ನಗರದ ಆರ್.ಆರ್ ನಗರ ಹಾಗೂ ಯಶವಂತಪುರ ವ್ಯಾಪ್ತಿಯಲ್ಲಿ ಮತದಾನ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಯಶವಂತಪುರ ಕ್ಷೇತ್ರದ ವಂಡರ್ ಬೆಲ್ಸ್ ಗಾರ್ಮೆಂಟ್ಸ್ ನಲ್ಲಿ ಕಾರ್ಯನಿರ್ವಹಿಸುವ 1500ಕ್ಕೂ ಕಾರ್ಮಿಕರ ಜೊತೆ ವಲಯ ಆಯುಕ್ತರಾದ ರೆಡ್ಡಿ ಶಂಕರ ಬಾಬು ರವರು ಮಾತನಾಡಿ, ಮೇ 10 ರಂದು ಮತದಾನ ನಡೆಯಲಿದ್ದು, ಆ ದಿನ ಎಲ್ಲಾ ಕಾರ್ಮಿಕರಿಗೆ ರಜೆ ನೀಡಲಾಗುತ್ತದೆ. ಆ ದಿನ ಎಲ್ಲರೂ ತಪ್ಪದೆ ಮತದಾನ ಮಾಡಲು ಕೋರಿದರು.

ಆರ್.ಆರ್. ನಗರದ ಸ್ವಸಹಾಯ ಗುಂಪುಗಳ 300 ಮಂದಿಗೂ ಹೆಚ್ಚು ಮಹಿಳೆಯರ ಜೊತೆ ಮತದಾನ ಜಾಗೃತಿಯ ಬಗ್ಗೆ ಅರಿವು ಮೂಡಿಸಿ ತಪ್ಪದೆ ಮತದಾನ ಮಾಡಲು ಮನವಿ ಮಾಡಲಾಯಿತು.

ಈ ವೇಳೆ ವಲಯ ಜಂಟಿ ಆಯುಕ್ತರಾದ ನಾಗರಾಜ್, ಕಂದಾಯ ಅಧಿಕಾರಿಗಳು ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ