Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತದಾನ ಅಮೂಲ್ಯ, ತಪ್ಪದೆ ಮತದಾನ ಮಾಡಿ : ಡಾ. ಆರ್.ಎಲ್.ದೀಪಕ್

ಸುದ್ದಿಮೂಲ ವಾರ್ತೆ

ಬೆಂಗಳೂರು,ಏ.22:ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕಡ್ಡಾಯ ಮತದಾನ ಮಾಡಲು ಮತದಾರರಿಗೆ ಜಾಗೃತಿ ಮೂಡಿಸಲು ಬಿಬಿಎಂಪಿ ವತಿಯಿಂದ ಸತ್ವಾ ಅಪಾರ್ಟ್ ಮೆಂಟ್ ಮತ್ತು ರಹೇಜ ಅಪಾರ್ಟ್ ಮೆಂಟ್ ನಿವಾಸಿಗಳ ಜೊತೆಯಲ್ಲಿ ಮತದಾನ ಜಾಗೃತಿ ಸಭೆ ಮತ್ತು ಪಟ್ಟೇಗಾರಪಾಳ್ಯದಲ್ಲಿ ಸೆಂಟ್ ಪಾಲ್ಸ್ ಬಿಎಡ್ ಕಾಲೇಜು ವಿದ್ಯಾರ್ಥಿಗಳ ಜೊತೆಯಲ್ಲಿ ಜಾಥ ಕಾರ್ಯಕ್ರಮ ನಡೆಸಲಾಯಿತು.



ಈ ವೇಳೆ ವಲಯ ಆಯುಕ್ತರಾದ ಡಾ. ಆರ್.ಎಲ್.ದೀಪಕ್ ರವರು ಮಾತನಾಡಿ, ದೇಶದಲ್ಲಿ ಪ್ರತಿಯೊಬ್ಬ ನಾಗರಿಕರಿಗೆ ಮತ ಚಾಲಾಯಿಸಲು ಅವಕಾಶ ನೀಡಿದ್ದು, ಮತದಾನ ಮಾಡುವುದು ಅತ್ಯಮೂಲ್ಯವಾದುದ್ದಾಗಿದೆ. ಆದ್ದರಿಂದ ಎಲ್ಲಾ, ಮತದಾರರು ತಪ್ಪದೇ ಮತದಾನ ಮಾಡಿ ಎಂದು ಕೋರಿದರು.

ಉತ್ತಮ ಜನಪ್ರತಿನಿಧಿ ಆಯ್ಕೆ ಮಾಡಲು ಕಡ್ಡಾಯವಾಗಿ ಮತದಾನ ಮಾಡಬೇಕು. ಆದ್ದರಿಂದ ಎಲ್ಲಾ ಯುವ ಮತದಾರರು ಮತದಾನದ ಪ್ರಾಮುಖ್ಯತೆಯನ್ನು ಅರಿತು ಮತದಾನ ಮಾಡಲು ಕೋಡಿದರು.

ಜಂಟಿ ಆಯುಕ್ತರಾದ ಲೋಕನಾಥ್ ರವರು ಮಾತನಾಡಿ, ಭಾರತ ದೇಶದ ಪ್ರಜೆಗಳಾದ ತಮಗೆ ಚುನಾವಣೆ ಆಯೋಗ ತಾವುಗಳು ಮತದಾನ ಮಾಡಲು ಬೇಕಾದ ಮತದಾರ ಪಟ್ಟಿ, ಮತದಾನ ಮಾಡಲು ಬೂತ್ ವ್ಯವಸ್ಥೆ ಹಾಗೂ ನಿರ್ಭಿತಿಯಿಂದ ಮತದಾನ ಮಾಡಲು ಸೂಕ್ತ ಭದ್ರತೆ ವ್ಯವಸ್ಥೆ ಮಾಡಲಾಗಿದೆ ಎಂದರು.

ಒಂದು ಮತದಿಂದ ಬದಲಾವಣೆ ತರಲು ಸಾಧ್ಯ. ಸಂವಿಧಾನ ನೀಡಿರುವ ಮತದಾನ ಹಕ್ಕುನ್ನು ಎಲ್ಲರೂ ತಪ್ಪದೆ ಚಲಾಯಿಸಿ. 80ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ವಿಕಲಚೇತನರಿಗೆ ಮನೆಯಿಂದ ಮತದಾನ ನೀಡಲು ಅವಕಾಶ ನೀಡಲಾಗಿದೆ. ಮೇ 10ರಂದು ಪ್ರತಿಯೊಬ್ಬ ಮತದಾರರು ವೋಟ್ ಮಾಡಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿ ಹಿಡಿಯಿರಿ ಎಂದು ಹೇಳಿದರು.

ಈ ವೇಳೆ ವಲಯ ಆರೋಗ್ಯಧಿಕಾರಿ ಮನೋರಂಜನ್ ಹೆಗಡೆ, ಆರೋಗ್ಯ ವೈದ್ಯಧಿಕಾರಿ ರಾಜೇಂದ್ರ, ಸಹಾಯಕ ಕಾರ್ಯಪಾಲಕ ಅಭಿಯಂತರು ಹಾಗೂ ನೋಡಲ್ ಅಧಿಕಾರಿ ಉಮೇಶ್, ಕಂದಾಯಧಿಕಾರಿ, ಅಪಾರ್ಟ್ ಮೆಂಟ್ ನಿವಾಸಿಗಳು ಮತ್ತು ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ