Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಜಾಪ್ರಭುತ್ವದಲ್ಲಿ ಮತದಾನದ ಪಾತ್ರ ದೊಡ್ಡದು - ವಸದ್

ಸುದ್ದಿಮೂಲ ವಾರ್ತೆ ರಾಯಚೂರು, ಜ.07:
ಪ್ರಜಾಪ್ರಭುತ್ವದಲ್ಲಿ ಮತದಾನದ ಪಾತ್ರ ಬಹಳ ದೊಡ್ಡದಾಗಿದ್ದು ವಿವಿಧ ಹಂತದ ಅಧಿಕಾರಿಗಳು ಅಚ್ಚುಕಟ್ಟಾಾಗಿ ಕಾರ್ಯನಿರ್ವಹಿಸುವ ಮೂಲಕ ಯಶಸ್ವಿಿಗೊಳಿಸಬೇಕೆಂದು ರಾಜ್ಯ ಸ್ವೀಪ್ ಸಮಿತಿ ನೊಡಲ್ ಅಧಿಕಾರಿ ಪಿ.ಎಸ್.ವಸದ್ ಹೇಳಿದರು.
ನಗರದ ಜಿಲ್ಲಾ ಪಂಚಾಯತಿಯ ಜಲ ನಿರ್ಮಲ ಸಭಾಂಗಣದಲ್ಲಿ ಸ್ವೀಪ್ ಮತ್ತು ಎನ್‌ವಿಡಿ ಸ್ಪರ್ಧಾ ಚಟುವಟಿಕೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಒಂದೊಂದು ಮತ ಅಭ್ಯರ್ಥಿಯ ಸೋಲು ಮತ್ತು ಗೆಲುವು ನಿರ್ಧಾರ ಮಾಡುವ ಶಕ್ತಿಿ ಇದೆ. ಮತಯಂತ್ರದ ಮೂಲಕ ಎಲ್ಲವೂ ಪಾರದರ್ಶಕವಾಗಿ ಚುನಾವಣೆ ಜರುಗುತ್ತವೆ ಎಂದರು.
ಮತದಾನದ ಸ್ಪರ್ಧೆಗಳು ವಿದ್ಯಾಾರ್ಥಿಗಳಲ್ಲಿ ಮತದಾನದ ಮಹತ್ವ ಚುನಾವಣೆಯ ಪ್ರಕ್ರಿಿಯೆಗಳನ್ನು ತಿಳಿಸಲು ಬಹಳ ಸಹಾಯಕವಾಗಿದೆ. ಶೈಕ್ಷಣಿಕ ಸಂಸ್ಥೆೆಗಳಲ್ಲಿ ಮತದಾರರ ಸಾಕ್ಷರತಾ ಕ್ಲಬ್ ಸ್ಥಾಾಪಿಸಲಾಗಿದೆ. ವಿದ್ಯಾಾರ್ಥಿಗಳಲ್ಲಿ ಸ್ವೀಪ್ ಕಾರ್ಯಕ್ರಮದ ಅಡಿಯಲ್ಲಿ ರಾಷ್ಟ್ರೀಯ ಮತದಾರ ದಿನಾಚರಣೆಯ ಅಂಗವಾಗಿ ಸ್ಪರ್ಧೆಗಳ ಆಯೋಜನೆ ಮಾಡುವ ಮೂಲಕ ಪ್ರಜಾಪ್ರಭುತ್ವದ ಆಡಳಿತ ವ್ಯವಸ್ಥೆೆಯಲ್ಲಿ ಮತದಾನದ ಪ್ರಕ್ರಿಿಯೆ, ಚುನಾವಣೆಯ ಅಂಶಗಳು ಮತ್ತು ಅದರ ಮಹತ್ವ ತಿಳಿದುಕೊಳ್ಳಲು ಇಂತಹ ಸ್ಪರ್ಧೆ ಸಹಾಯಕವಾಗಿವೆ ಎಂದು ಹೇಳಿದರು.
ಅಲ್ಲದೆ ಮಾದರಿಯ ಮತದಾರರ ಪಟ್ಟಿಿಯ ಸಿದ್ಧಪಡಿಸಲು ಮತಗಟ್ಟೆೆಯ ಅಧಿಕಾರಿಗಳು ಮಾಡಬೇಕಾದ ಕಾರ್ಯ ಚಟುವಟಿಕೆಗಳು ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಾಲಯ ಕುಲಪತಿ ಡಾ.ಎಂ. ಹನುಮಂತಪ್ಪ, ಸಹಾಯಕ ಕಾರ್ಯದರ್ಶಿ ರಾಘವೇಂದ್ರ ಕುಲಕರ್ಣಿ, ಚುನಾವಣೆ ತಹಶೀಲ್ದಾಾರ ಪರಶುರಾಮ, ಪಿಯು ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸೋಮಶೇಖರ ಹೋಕ್ರಾಾಣಿ, ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದ ನೋಡಲ್ ಅಧಿಕಾರಿ ದಂಡಪ್ಪ ಬಿರಾದಾರ ಇತರರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ