Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾವು ಆತ್ಮಸ್ಥೈರ್ಯ ಕಳೆದುಕೊಂಡಿಲ್ಲ, ಮತ್ತೆ ಪುಟಿದೇಳುತ್ತೇವೆ: ಬೊಮ್ಮಾಯಿ

ಸುದ್ದಿಮೂಲ ವಾರ್ತೆ

ಬೆಂಗಳೂರು, ಮೇ 18: ನಾವು ಆತ್ಮಸ್ಥೈರ್ಯ ಕಳೆದುಕೊಂಡಿಲ್ಲ. ನಾವು ಮತ್ತೆ ರಾಜ್ಯದಲ್ಲಿ ಪುಟಿದೇಳುತ್ತೇವೆ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣಾ ಫಲಿತಾಂಶದ ಆರು ದಿನಗಳ ಬಳಿಕ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ.‌ ಶಿವಕುಮಾರ್ ಆಯ್ಕೆ ಆಗಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಪ್ರಜಾಪ್ರಭುತ್ವದ ತೀರ್ಪು ಒಪ್ಪಿಕೊಳ್ಳಬೇಕಾಗುತ್ತದೆ ಎಂದರು.

ರಾಜಕಾರಣದಲ್ಲಿ ಪಾತ್ರಗಳನ್ನು ತೀರ್ಮಾನಿಸುವುದು ಜನ. ನಮಗೆ ವಿಪಕ್ಷವಾಗಿ ಜನ ತೀರ್ಮಾನ ಕೊಟ್ಟಿದ್ದಾರೆ. ಕಾಂಗ್ರೆಸ್ ಮೇಲೆ ಜನ ಬಹಳಷ್ಟು ವಿಶ್ವಾಸ ಇಟ್ಟಿದ್ದಾರೆ. ಗ್ಯಾರಂಟಿಗಳ ಮೇಲೆ ಜನರಿಗೆ ದೊಡ್ಡ ವಿಶ್ವಾಸ ಇದೆ. ಅದನ್ನು ಅವರು ಪೂರೈಸಬೇಕಾಗಿದೆ. ಪೂರೈಸುವ ವೇಳೆ ರಾಜ್ಯದ ಆರ್ಥಿಕ ಸ್ವಾಸ್ಥ್ಯ ಹಾಳಾಗದಂತೆ ನೋಡಿಕೊಳ್ಳುವುದು ಕೂಡ ಅವರ ಜವಾಬ್ದಾರಿ. ಯಾವ ರೀತಿ ನಿಭಾಯಿಸುತ್ತಾರೆ ಅಂತಾ ಕಾದು ನೋಡೋಣ ಎಂದರು.

ವಿಪಕ್ಷವಾಗಿ ನಾವು ಜವಾಬ್ದಾರಿಯಿಂದ ಕೆಲಸ ಮಾಡುವ ಅವಶ್ಯಕತೆ ಇದೆ. ನೆಲ-ಜಲ ವಿಚಾರದಲ್ಲಿ ರಾಜಕೀಯ ಬೆರೆಸದೇ ಕೆಲಸ ಮಾಡಬೇಕು. ಜನರಿಗೆ ಅನ್ಯಾಯ ಆದಾಗ ಸರ್ಕಾರಕ್ಕೆ ಎಚ್ಚರಿಕೆ ಕೊಡುವ ಕೆಲಸ ಮಾಡುತ್ತೇವೆ. 2023 ರಾಜ್ಯದ ಒಟ್ಟಾರೆ ಅಭಿವೃದ್ಧಿ ದೃಷ್ಟಿಯಿಂದ ಬಹಳ ಮಹತ್ವದ್ದು ಮತ್ತು ಸವಾಲುಗಳಿವೆ. ಕರ್ನಾಟಕದ ಸುಭಿಕ್ಷವಾಗಿರುವ ನಾಡು. ಜನ ಶಾಂತಿಯನ್ನು ಮಾನ್ಯ ಮಾಡುವಂತಹವರು. ರ‍್ನಾಟಕದ ಅಭ್ಯುದಯ ದೇಶಕ್ಕೆ ಪರಿಣಾಮ ಬೀರುತ್ತದೆ. ಈ ಆಯಾಮಗಳ ಮೇಲೆ ವಿಪಕ್ಷವಾಗಿ ನಾವು ಇರುತ್ತೇವೆ ಎಂದರು.

ನಮ್ಮ ಸೋಲಿನ ಪರಾಮರ್ಶೆ ಬೇರೆ ಬೇರೆ ಹಂತದಲ್ಲಿ ನಡೆಯುತ್ತಿದೆ. ಎರಡು ಮೂರು ದಿನಗಳಲ್ಲಿ ಶಾಸಕರ ಮತ್ತು ಪರಾಜಿತ ಅಭ್ಯರ್ಥಿಗಳ ಸಭೆ ಮಾಡುತ್ತೇವೆ. ಅದೇ ಸಭೆಯಲ್ಲಿ ವಿಪಕ್ಷ ನಾಯಕರ ತೀರ್ಮಾನ ಮಾಡುತ್ತೇವೆ. ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಇಲ್ಲ. ಕೆಲವು ಕ್ಷೇತ್ರಗಳಲ್ಲಿ ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ತಲುಪಿಸುವಲ್ಲಿ ನಾವು ಹಿಂದೆ ಬಿದ್ದಿದ್ದು, ಚುನಾವಣಾ ತಯಾರಿಯಲ್ಲಿ ಕಾಂಗ್ರೆಸ್ ಮುಂದೆ ಇದ್ದಿದ್ದು ಸೋಲಿಗೆ ಕಾರಣವಾಗಿದೆ. ನಾವು ಆತ್ಮಸ್ಥೈರ್ಯ ಕಳೆದುಕೊಂಡಿಲ್ಲ. ನಾವು ಮತ್ತೆ ರಾಜ್ಯದಲ್ಲಿ ಪುಟಿದೇಳುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ