Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಅಭಿವೃದ್ಧಿ ಆಧಾರದಲ್ಲಿ ಚುನಾವಣೆ ಎದುರಿಸುತ್ತೇವೆ: ಶೋಭಾ ಕರಂದ್ಲಾಜೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಏ.12: ಬಿಜೆಪಿ ಅಭಿವೃದ್ಧಿಯ ಆಧಾರದಲ್ಲಿ ಧನಾತ್ಮಕ ಕಾರ್ಯಸೂಚಿಯೊಂದಿಗೆ ಚುನಾವಣೆಗೆ ಹೋಗಬೇಕು ಎನ್ನುವ ಆಶಯ ಇದೆ ಎಂದು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿಯವರ ನೇತೃತ್ವದಲ್ಲಿ ಮೂಲಸೌಕರ್ಯದ ಅಭಿವೃದ್ಧಿ, ಸಂಪರ್ಕ ಕ್ಷೇತ್ರದ ಗಮನಾರ್ಹ ಅಭಿವೃದ್ಧಿ ಬಿಜೆಪಿ ಗೆಲುವಿಗೆ ಪೂರಕ ಎಂದು ನುಡಿದರು.

ಬಡವರಿಗೆ ಅಗತ್ಯವಿರುವ ಸೌಕರ್ಯಗಳಿಗಾಗಿ ಸ್ವಾತಂತ್ರ್ಯ ಬಂದ ಏಳು ದಶಕಗಳ ನಂತರವು ಜನರು ತೊಳಲಾಡುತ್ತದ್ದ ಪರಿಸ್ಥಿತಿ ಇತ್ತು. ಜನರ ಕಷ್ಟಗಳನ್ನು ಬಗೆಹರಿಸುವಲ್ಲಿ ನರೇಂದ್ರ ಮೋದಿಜಿ ದೊಡ್ಡ ಹೆಜ್ಜೆ ಇಟ್ಟರು. ಗಾಂಧೀಜಿ ಹೇಳಿದಂತೆ ಸ್ವಚ್ಛತೆಗೆ ಆದ್ಯತೆ ಕೊಡಲಾಯಿತು ಎಂದ್ಛುವರು ವಿವರಿಸಿದರು.

ಮನೆಯಿಂದ ಸ್ವಚ್ಛತೆ ಆರಂಭವಾಗಬೇಕು. ಉತ್ತರ ಕರ್ನಾಟಕ ಪ್ರವಾಸ ಸಂದರ್ಭದಲ್ಲಿ ಮಹಿಳೆಯರು ಶೌಚಕ್ಕೆ ಹೋಗಲು ಸಂಜೆವರೆಗು ಕಾಯಬೇಕಿತ್ತು. ಇದನ್ನು ನಾವು ಸ್ವತಃ ಗಮನಿಸಿದ್ದೇನೆ. ಇಂಥ ಸಮಸ್ಯೆ ಗಮನಿಸಿದ ಮೋದಿಜಿ ಅವರು ಶೌಚಾಲಯಗಳನ್ನು ನಿರ್ಮಿಸಿ ಇದನ್ನು ಬಗೆಹರಿಸಲು ಮುಂದಾದರು. ಈ ವಿಚಾರದಲ್ಲಿ ಶೌಚಾಲಯ ನಿರ್ಮಾಣದ ಕ್ರಾಂತಿ ಮಾಡಿದರು ಎಂದು ಮೆಚ್ಚುಗೆ ಸೂಚಿಸಿದರು.

ಭರವಸೆ ಈಡೇರಿಸದ ಕಾಂಗ್ರೆಸ್ ಮುಖಂಡರು

ಕಾಂಗ್ರೆಸ್ಸಿಗರಿಗೆ ಬಡವರ ಕಷ್ಟ, ಬಡತನದ ಅರಿವೇ ಇಲ್ಲ ಎಂದು ಆರೋಪಿಸಿದ ಅವರು, ಜನರ ಮಧ್ಯೆಯಿಂದ ಬಂದ ನಾಯಕರು ಯಡಿಯೂರಪ್ಪ ಮತ್ತು ಮೋದಿಜಿ. ಅವರು, ಭರವಸೆ ಕೊಡದೆ ಜನರ ಕಷ್ಟ ಅರ್ಥ ಮಾಡಿಕೊಂಡು ಜನರಿಗೆ ಸಹಾಯ ಮಾಡುತ್ತಿದ್ದಾರೆ. ಕಾಂಗ್ರೆಸ್ ಭರವಸೆ ಕೇವಲ ಆಶ್ವಾಸನೆಯಾಗಿ ಉಳಿಯಲಿದೆ. ಕಾಂಗ್ರೆಸ್ ಆಡಳಿತ ಇರುವ ರಾಜಸ್ಥಾನ ಮತ್ತು ಛತ್ತಿಸ್‍ಘಡದಲ್ಲಿ ಕಾಂಗ್ರೆಸ್ ಮುಖಂಡರೇ ಸಿಡಿದೆದ್ದಿದ್ದಾರೆ. ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಈಡೇರಿಸದೆ ಇರುವುದೇ ಇದಕ್ಕೆ ಕಾರಣ ಎಂದು ವಿಶ್ಲೇಷಿಸಿದರು.

ಬೇರೆ ರಾಜ್ಯಗಳಲ್ಲಿ ಭರವಸೆ ಹಾಗೇ ಉಳಿದುದು ಯಾಕೆ? ಅದನ್ನು ಅನುಷ್ಠಾನಕ್ಕೆ ತರಲಿಲ್ಲವೇಕೆ? 2001ರಲ್ಲಿ ಇದೇ ರಾಜ್ಯದಲ್ಲಿ ಕೊಟ್ಟ ನಿರುದ್ಯೋಗಿ ಯುವಕರಿಗೆ 5 ಸಾವಿರ ಕೊಡುವ ಭರವಸೆ ಯಾಕೆ ಈಡೇರಿಸಲಿಲ್ಲ? ಎಂದು ಸವಾಲು ಹಾಕಿದರು. ಇದು ಕಾಂಗ್ರೆಸ್- ಬಿಜೆಪಿ ನಡುವಿನ ವ್ಯತ್ಯಾಸ ಎಂದು ತಿಳಿಸಿದರಲ್ಲದೆ, ಬಿಜೆಪಿ ನುಡಿದಂತೆ ನಡೆಯುವ ಪಕ್ಷ. 2023ರ ಚುನಾವಣೆಯಲ್ಲೂ ನಮ್ಮ ವಿಶ್ವಾಸ ಬಹುಮತದ ಅಧಿಕಾರವಾಗಿ ಪರಿವರ್ತನೆ ಆಗಲಿದೆ ಎಂದು ತಿಳಿಸಿದರು.

ಯಾವುದೇ ಯೋಜನೆ ಜಾರಿಗೆ ತರುವಾಗ ಕೆಲವೊಮ್ಮೆ ವ್ಯತ್ಯಾಸಗಳು ಆಗುತ್ತವೆ. 99.9% ಜನರಿಗೆ ಉಜ್ವಲ ಯೋಜನೆಯಿಂದ ಪ್ರಯೋಜನ ಸಿಕ್ಕಿದೆ. ಗ್ಯಾಸ್ ಇದ್ದವರಿಗೆ ಮತ್ತೆ ಗ್ಯಾಸ್ ನೀಡಿದ್ದ ಖಾಸಗಿ ಕಂಪನಿಗಳ ತಪ್ಪನ್ನು ಸರಿಪಡಿಸಲಾಗಿದೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು.

ಬಜೆಟ್‍ನಲ್ಲಿ ಹಣ ನೀಡಿ ಇಂತಹ ಕೆಲಸ ಮಾಡಿ ಎಂದು ಹೇಳಿರುವ ವ್ಯಕ್ತಿ ನಮ್ಮ ಮೋದಿಜಿ. ಜಲಜೀವನ್ ಮಿಷನ್ ಯೋಜನೆಯಡಿ ನದಿ ಮೂಲದ ಮೇಲ್ಮೈ (ಸರ್‍ಫೇಸ್) ನೀರು ನೀಡುವ ಯೋಜನೆಯನ್ನು ಮೋದಿಜಿ ಸರ್ಕಾರ ಮಾಡುತ್ತಿದೆ. ಶಾಲೆ ಮತ್ತು ಅಂಗನವಾಡಿ ಶೌಚಾಲಯಗಳಿಗೆ ಈ ಯೋಜನೆ ಮುಖ್ಯವಾಗಿ ರೂಪಿಸಲಾಗಿದೆ. ನಾವು 99% ಪ್ರಣಾಳಿಕೆಯ ಭರವಸೆಗಳನ್ನು ನಾವು ಈಡೇರಿಸಿದ್ದೇವೆ. ಕೋವಿಡ್ ಸಾಂಕ್ರಾಮಿಕದ ಕಾರಣ ಭರವಸೆ ಈಡೇರಿಸಲು ಸ್ವಲ್ಪ ತೊಡಕಾಗಿದೆ ಎಂದು ವಿವರಿಸಿದರು.

4 ಸಿಎಂ ಅಭ್ಯರ್ಥಿಗಳು:

ಕಾಂಗ್ರೆಸ್ ಪಕ್ಷದಲ್ಲಿ 4 ಮುಖ್ಯಮಂತ್ರಿ ಅಭ್ಯರ್ಥಿಗಳಿದ್ದಾರೆ. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಎಂ.ಬಿ.ಪಾಟೀಲ್ ಅವರಲ್ಲದೆ, ಮಲ್ಲಿಕಾರ್ಜುನ ಖರ್ಗೆ ಅವರೂ ಸಿಎಂ ಅಭ್ಯರ್ಥಿ ಆಗಿದ್ದಾರೆ. ಇದರ ಬಗ್ಗೆಯೇ ಜಗಳವಾಗುತ್ತಿದೆ ಎಂದು ತಿಳಿಸಿದರು.

ರಸಗೊಬ್ಬರ, ಅಡುಗೆ ಎಣ್ಣೆ, ಪೆಟ್ರೋಲಿಯಂ ಉತ್ಪನ್ನಗಳಲ್ಲಿ ಅತ್ಮನಿರ್ಭರತೆ ಸಾಧನೆ ಕಡೆಗೆ ನಾವು ಕೆಲಸ ಮಾಡುತ್ತಿದ್ದೇವೆ. ನಂದಿನಿ ಬಹಳ ಲಾಭದಲ್ಲಿರುವುದಕ್ಕೆ ಕಾರಣ ಭಾಜಪಾ ಮತ್ತು ನಂದಿನಿಗೆ ಹಣ ನೀಡುತ್ತಿರುವುದು ಕಾರಣ. ಬಿಜೆಪಿ ಸರಕಾರ 5 ರೂ ಪ್ರೋತ್ಸಾಹಧನ ನೀಡುತ್ತಿದೆ ಎಂದು ಅವರು ನುಡಿದರು.

ರಾಜ್ಯ ಮುಖ್ಯ ವಕ್ತಾರ ಎಂ.ಜಿ.ಮಹೇಶ್, ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಗೀತಾ ವಿವೇಕಾನಂದ, ವಿಧಾನಪರಿಷತ್ ಮಾಜಿ ಸದಸ್ಯ ಎಂ.ಡಿ.ಲಕ್ಷ್ಮೀನಾರಾಯಣ ಅವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ