Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭ್ರಷಾಚಾರ ರಹಿತ ಆಡಳಿತ ನೀಡುತ್ತೇವೆ: ರಾಹುಲ್‌ಗಾಂಧಿ

ಸುದ್ದಿಮೂಲ ವಾರ್ತೆ

ಬೆಂಗಳೂರು, ಮೇ 20: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿ ಅಧಿಕಾರಕ್ಕೆ ತಂದಿದ್ದೀರಿ. ಇದಕ್ಕೆ ಚ್ಯುತಿ ಬಾರದಂತೆ ರಾಜ್ಯದಲ್ಲಿ ಭ್ರಷ್ಟಾಚಾರ ರಹಿತ ಬಡವರ ಮತ್ತು ಪ್ರೀತಿಪರ ಸರ್ಕಾರ ನೀಡುವುದಾಗಿ ಕಾಂಗ್ರೆಸ್ ಮುಖಂಡ ರಾಹುಲ್‌ಗಾಂಧಿ ಘೋ‍ಷಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಬಳಿಕ ಮಾತನಾಡಿ, ನೀವೆಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಬಹುದೊಡ್ಡ ಬಹುಮತ ನೀಡಿದ್ದೀರಿ. ಕಳೆದ ಐದು ವರ್ಷಗಳಲ್ಲಿ ಎದುರಾದ ಸಮಸ್ಯೆಗಳನ್ನು ನಾವು ಕಂಡಿದ್ದೇವೆ.

ಕಾಂಗ್ರೆಸ್ ಪಕ್ಷಕ್ಕೆ ಯಾಕೆ ಇಷ್ಟು ದೊಡ್ಡ ಗೆಲುವು ಸಿಕ್ಕಿದೆ ಎಂದು ಮಾಧ್ಯಮಗಳಲ್ಲಿ ವಿಶ್ಲೇಷಣೆ ನೋಡಿದ್ದೀರಿ. ಅನೇಕರು ಅನೇಕ ಬಗೆಯ ವಿಶ್ಲೇಷಣೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಈ ಗೆಲವು ಸಿಗಲು ಕಾರಣ ಎಂದರೆ ಕಾಂಗ್ರೆಸ್ ಪಕ್ಷ ರಾಜ್ಯದ ಬಡವರು, ರೈತರು, ಕಾರ್ಮಿಕರು, ಶೋಷಿತರು, ದಲಿತರ ಬೆನ್ನಿಗೆ ನಿಂತಿರುವುದು. ನಮ್ಮ ಬಳಿ ಸತ್ಯ ಹಾಗೂ ಬಡ ಜನರಿದ್ದರು. ಬಿಜೆಪಿ ಬಳಿ ಹಣ, ಅಧಿಕಾರ, ಪೊಲೀಸ್ ಅಧಿಕಾರಿಗಳು ಎಲ್ಲವೂ ಇತ್ತು. ಅವರ ಈ ಎಲ್ಲಾ ಶಕ್ತಿಗಳನ್ನು ಕರ್ನಾಟಕದ ಜನ ಮಣಿಸಿದ್ದಾರೆ.

ಜನ ಅವರ ಭ್ರಷ್ಟಾಚಾರ, ದ್ವೇಷವನ್ನು ಮಣಿಸಿದ್ದೀರಾ. ಈ ಚುನಾವಣೆಯಲ್ಲಿ ರಾಜ್ಯದ ಜನ ದ್ವೇಷವನ್ನು ಒಡೆದೋಡಿಸಿ ಪ್ರೀತಿ ಸಾಮರಸ್ಯಕ್ಕೆ ಗೆಲುವು ತಂದುಕೊಟ್ಟಿದ್ದಾರೆ. ದ್ವೇಷದ ಮಾರುಕಟ್ಟೆಯಲ್ಲಿ ಕರ್ನಾಟಕದ ಜನ ಪ್ರೀತಿ ಸಾಮರಸ್ಯದ ಅಂಗಡಿ ತೆರೆದಿದ್ದಾರೆ.

ಕಳೆದ ಐದು ವರ್ಷಗಳಿಂದ ನೀವು ಭ್ರಷ್ಟಾಚಾರ ನೋಡಿದ್ದೀರಿ. ನಾವು ನಿಮಗೆ ಐದು ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ್ದೆವು. ಗೃಹಲಕ್ಷ್ಮೀ ಯೋಜನೆ ಮೂಲಕ ಪ್ರತಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ಪ್ರೋತ್ಸಾಹಧನ, ಗೃಹಜ್ಯೋತಿ ಮೂಲಕ ಪ್ರತಿ ತಿಂಗಳು 200 ಯೂನಿಟ್ ವಿದ್ಯುತ್ ಉಚಿತ, ಅನ್ನಭಾಗ್ಯ ಯೋಜನೆ ಮೂಲಕ ಬಡ ಕುಟುಂಬದ ಪ್ರತಿ ಸದಸ್ಯರಿಗೆ ತಲಾ 10 ಕೆ.ಜಿ ಅಕ್ಕಿ ಪ್ರತಿ ತಿಂಗಳು ಉಚಿತ, ಯುವನಿಧಿ ಮೂಲಕ ಪದವೀಧರ ನಿರುದ್ಯೋಗ ಯುವಕರಿಗೆ ಪ್ರತಿ ತಿಂಗಳು 3 ಸಾವಿರ, ಡಿಪ್ಲೋಮಾ ಪದವೀಧರರಿಗೆ 1500 ರೂ. ನಿರುದ್ಯೋಗ ಭತ್ಯೆ. ನಂತರ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಸಂಚಾರ ವ್ಯವಸ್ಥೆ. ನಾವು ಸುಳ್ಳು ಆಶ್ವಾಸನೆ ನೀಡುವುದಿಲ್ಲ.

ಕೊಟ್ಟ ಮಾತನ್ನು ನಾವು ಉಳಿಸಿಕೊಳ್ಳುತ್ತೇವೆ. ನುಡಿದಂತೆ ನಡೆಯುತ್ತೇವೆ. ಮುಂದಿನ ಕೆಲವೇ ಗಂಟೆಗಳಲ್ಲಿ ರಾಜ್ಯದ ನೂತನ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಈ ಐದೂ ಗ್ಯಾರಂಟಿ ಯೋಜನೆಗಳು ಕಾನೂನು ರೂಪಪಡೆದು ಜಾರಿಗೆ ಬರಲಿದೆ. ನಾವು ಹೇಳಿದ್ದನ್ನು ಮಾಡಿ ತೋರಿಸುತ್ತೇವೆ.

ಸರ್ಕಾರದ ಆದ್ಯತೆ ರೈತರು, ಕಾರ್ಮಿಕರು, ಸಣ್ಣ ವ್ಯಾಪಾರಿಗಳು, ಯುವಕರ ಹಿತ ಕಾಪಾಡಿ ಅವರ ಭವಿಷ್ಯ ಭದ್ರಗೊಳಿಸುವುದಾಗಿದೆ. ನಾವು ರಾಜ್ಯದಲ್ಲಿ ಭ್ರಷ್ಟಾಚಾರಮುಕ್ತ ಸರ್ಕಾರ ನೀಡುತ್ತೇವೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪ್ರೀತಿ ಹಾಗೂ ಶಕ್ತಿ ನೀಡಿರುವ ರಾಜ್ಯದ ಎಲ್ಲಾ ಜನರಿಗೆ ಧನ್ಯವಾದ ತಿಳಿಸುತ್ತೇನೆ. ಈ ಸರ್ಕಾರ ರಾಜ್ಯದ ಜನರ ಸರ್ಕಾರ, ನಿಮ್ಮ ಸರ್ಕಾರ. ಈ ಸರ್ಕಾರ ಮನಪೂರ್ವಕವಾಗಿ ನಿಮಗಾಗಿ ದುಡಿಯಲಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ