Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದೇಶಿ ಪ್ರವಾಸಿಗರಿಗೆ ಗುಲಾಬಿ ನೀಡಿ ಸ್ವಾಗತ

ಸುದ್ದಿಮೂಲ ವಾರ್ತೆ

ಮೈಸೂರು, ಸೆ.27:ನಗರದ ಅರಮನೆ ಆವರಣದಲ್ಲಿ ಬುಧವಾರ ವಿಶ್ವ ಪ್ರವಾಸೋದ್ಯಮ ದಿನವನ್ನು ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಪ್ರವಾಸೋದ್ಯಮ ಇಲಾಖೆ, ಅರಮನೆ ಮಂಡಳಿ, ಮೈಸೂರು ಟ್ರಾವೆಲ್ಸ್ ಅಸೋಸಿಯೇಷನ್ ಮತ್ತು ಮೈಸೂರು ಹೋಟೆಲ್ ಅಸೋಸಿಯೇಷನ್ ಸಹಯೋಗದಲ್ಲಿ ಏರ್ಪ ಡಿಸಿದ್ಧ ಕಾರ್ಯಕ್ರಮದಲ್ಲಿ ಅರಮನೆ ದಕ್ಷಿಣ ದ್ವಾರದಲ್ಲಿ ಪ್ರವಾಸಿಗರನ್ನು ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಿ ಬಾನೋತ್ ಗುಲಾಬಿ ಹೂ ನೀಡಿ, ಆತ್ಮೀಯವಾಗಿ ಬರಮಾಡಿಕೊಂಡರು.

ಬೆಳಗ್ಗೆ 10 ರಿಂದ ನಾನಾ ಕಲಾತಂಡಗಳೊಂದಿಗೆ ಪ್ರವಾಸಿಗರನ್ನು ಸ್ವಾಗತಿಸಲಾಯಿತು. ಅವರಿಗೆ ಮೈಸೂರು ಪಾಕ್‌ ವಿತರಿಸಲಾಯಿತು. ವಿದೇಶಿಗರು ಸೇರಿದಂತೆ ಸುಮಾರು 50 ಪ್ರವಾಸರಿಗರು ಈ ವೇಳೆ ಹಾಜರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರು, ಮೈಸೂರು ವಿಶ್ವ ಭೂಪಟದಲ್ಲಿ ಪ್ರವಾಸೋದ್ಯಮ ಕೇಂದ್ರವಾಗಿ ಗುರುತಿಸಿಕೊಂಡಿದ್ದು ಮೈಸೂರು ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಪುಲವಾದ ಅವಕಾಶಗಳಿವೆ ಎಂದು ಅವರು ತಿಳಿಸಿದರು.

ಯುನೆಸ್ಕೋ ಪಾರಂಪರಿಕ ತಾಣವಾಗಿ ಸೋಮನಾಥಪುರ ದೇವಸ್ಥಾನವನ್ನು ಅಂಗೀಕರಿಸಿದೆ. ಮೈಸೂರು ಪ್ರವಾಸೋದ್ಯಮ ಬಗ್ಗೆ ಪ್ರವಾಸಿಗರಿಗೆ ಇನ್ನೂ ಹೆಚ್ಚು ಅರಿವು ಮೂಡಿಸಬೇಕು ಎಂದು ಅವರು ತಿಳಿಸಿದರು.

ಮುಂದಾಲೋಚನೆಯಿಂದ ಮೈಸೂರು ರಾಜರು ದೊಡ್ಡ ರಸ್ತೆಗಳು ನಿರ್ಮಾಣ ಮಾಡಿದ್ದಾರೆ. ಮೈಸೂರಿನಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನಕಾರಿಯಿಂದ ದೇಶದ ಅಭಿವೃದ್ಧಿ ಪ್ರವಾಸೋದ್ಯಮ ಕ್ಷೇತ್ರವಾಗಿ ಮಾಡಬಹುದು ಎಂದು ತಿಳಿಸಿದರು.

ಮೇಯರ್ ಶಿವಕುಮಾರ್ ಅವರು ಮೆರವಣಿಗೆಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಜಿಪಂ ಸಿಇಓ ಕೆ.ಎಂ.ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಪ್ರವಾಸೋದ್ಯಮ ಜಂಟಿ ನಿರ್ದೇಶಕಿ ಎಂ.ಕೆ. ಸವಿತಾ ಮೈಸೂರು ಹೋಟೆಲ್ ಅಸೋಸಿ ಯೇಷನ್ ಅಧ್ಯಕ್ಷ ಸಿ.ನಾರಾಯಣಗೌಡ, ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ರಾಘವೇಂದ್ರ ಹಾಗೂ ಇತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ