Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ವಿಜಯೇಂದ್ರ ಜೊತೆ ಸೇರಿ ಜೋಡೆತ್ತಿನಂತೆ ದುಡಿಯುವೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ನ.18: ವಿಜಯೇಂದ್ರ ಯಡಿಯೂರಪ್ಪ ಅವರ ಜೊತೆ ಸೇರಿ ಜನರ ಸಮಸ್ಯೆ ನಿವಾರಣೆಗೆ ಮತ್ತು ಪಕ್ಷ ಸಂಘಟನೆಗೆ ಜೋಡೆತ್ತಿನಂತೆ ದುಡಿಯುವುದಾಗಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮತ್ತು ಮಾಜಿ ಸಚಿವ ಆರ್.ಅಶೋಕ್ ಅವರು ಪ್ರಕಟಿಸಿದರು.

ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ಬಳಿಕ ಮಾಜಿ ಸಚಿವ ಆರ್.ಅಶೋಕ್ ಅವರು ಇಂದು ಮೊದಲ ಬಾರಿಗೆ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನಕ್ಕೆ ಭೇಟಿ ನೀಡಿದರು. ಅವರಿಗೆ ಈ ಸಂದರ್ಭದಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರ್. ಅಶೋಕ್ ಅವರು, ಸಿದ್ದರಾಮಯ್ಯನವರಂತೆ ನಮಗೆ ಅಧಿಕಾರದ ಆಸೆ ಇಲ್ಲ. ಕಾಂಗ್ರೆಸ್ ದುರಾಡಳಿತ, ಮೋಸದ ಯೋಜನೆಗಳ ಕುರಿತು ತಿಳಿಸಿ ಜನಜಾಗೃತಿ ಮೂಡಿಸುತ್ತೇವೆ ಎಂದು ತಿಳಿಸಿದರು.

ಜಮೀರ್ ಅವರು ಕರ್ನಾಟಕದಲ್ಲಿ ಕೋಮುವಾದ ಬಿತ್ತುತ್ತಿದ್ದಾರೆ ಎಂದು ಟೀಕಿಸಿದ ಅವರು, ಹತ್ತಾರು ತಪ್ಪುಗಳನ್ನು ಕಾಂಗ್ರೆಸ್ ಸರಕಾರ ಮಾಡಿದೆ. ಬೆಳಗಾವಿ ಅಧಿವೇಶನದಲ್ಲಿ ನಾವು ಇವುಗಳ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು. ಈ ಸಾರಿ ಇನ್ನೂ ಹೆಚ್ಚು ಹೋರಾಟ ಮಾಡಲಿದ್ದೇವೆ ಎಂದರು.

ಮಂಗಳೂರು- ಉಡುಪಿಯಲ್ಲಿ ಹಿಂದೂ ಕಾರ್ಯಕರ್ತರ ಗಡೀಪಾರು ಮಾಡಿದ್ದಾರೆ. ಕಳೆದ ಬಾರಿ ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ 30-40 ಹಿಂದೂ ಕಾರ್ಯಕರ್ತರ ಕೊಲೆ ಆಗಿತ್ತು. ಟಿಪ್ಪುವಿನ ವೈಭವೀಕರಣ ನಡೆದಿತ್ತು. ಕಾಂಗ್ರೆಸ್ಸಿನ ಮತಾಂಧನಾದ ಟಿಪ್ಪು ಸಂಸ್ಕೃತಿಯನ್ನು ಪಕ್ಷ ಜನರಿಗೆ ತಿಳಿಸಲಿದೆ ಎಂದು ತಿಳಿಸಿದರು.

ಸಂಕಷ್ಟದಲ್ಲಿರುವ ರೈತರಿಗೆ ಅವರ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದರು. ಈಗಿನ ಸರಕಾರ ನಯಾಪೈಸೆ ಕೊಟ್ಟಿಲ್ಲ ಎಂದು ಆಕ್ಷೇಪಿಸಿದರು. ಈ ಸರಕಾರದ ಕಿವಿ ಹಿಂಡುವ ಕಾರ್ಯ ಮಾಡುವುದಾಗಿ ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರರ ನೇಮಕಾತಿಯಿಂದ ಕಾಂಗ್ರೆಸ್ಸಿಗರಿಗೆ ನಡುಕ ಉಂಟಾಗಿದೆ. ಇನ್ನು ಮುಂದೆ ಕಾಂಗ್ರೆಸ್ ಆಟ ನಡೆಯುವುದಿಲ್ಲ ಎಂಬ ಮಾತು ಕೇಳಿಬರಲಾರಂಭಿಸಿದೆ. ಜನರ ಸಮಸ್ಯೆ ಪರಿಹಾರಕ್ಕಾಗಿ ಹೋರಾಟ ಮಾಡಲು ಮತ್ತು ಸರಕಾರದ ಕಿವಿ ಹಿಂಡುವ ಅವಕಾಶವನ್ನು ವಿಪಕ್ಷ ನಾಯಕನಾಗಿ ನನ್ನನ್ನು ಆಯ್ಕೆ ಮಾಡುವ ಮೂಲಕ ಪಕ್ಷ ನೀಡಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಬಿಜೆಪಿ ಹೊಸದಾಗಿ ಯುವ ನಾಯಕತ್ವಕ್ಕೆ ಅವಕಾಶ ಕೊಟ್ಟಿದ್ದು, ಕಾರ್ಯಕರ್ತರಲ್ಲಿ ಹುರುಪು ತುಂಬಿದೆ. ಮತ್ತೆ ಬಿಜೆಪಿಯನ್ನು ಕರ್ನಾಟಕದಲ್ಲಿ ಸಮರ್ಥವಾಗಿ ಕಟ್ಟುವ ದೃಷ್ಟಿಯಿಂದ ಕೇಂದ್ರದ ನಾಯಕರು, ಲೋಕಸಭಾ ಸದಸ್ಯರು, ಶಾಸಕರು, ಕಾರ್ಯಕರ್ತರು ತೀರ್ಮಾನ ಮಾಡಿ ವಿಜಯೇಂದ್ರರನ್ನು ಆಯ್ಕೆ ಮಾಡಿದ್ದಾರೆ. ಇದರಿಂದ ರಾಜ್ಯದಲ್ಲಿ ಸಂಚಲನ ಉಂಟಾಗಿದೆ ಎಂದು ವಿಶ್ಲೇಷಿಸಿದರು.

ಉಳಿದ ಶಾಸಕರ ಜೊತೆ ಒಗ್ಗಟ್ಟಾಗಿ ಮುಂದಿನ ಅಧಿವೇಶನದಲ್ಲಿ ಕೆಲಸ ಮಾಡಲಿದ್ದೇನೆ. ಬೆಳಿಗ್ಗೆ ನಾನು ಬಸವರಾಜ ಬೊಮ್ಮಾಯಿ, ಡಾ. ಅಶ್ವತ್ಥನಾರಾಯಣ್ ಅವರನ್ನು ಭೇಟಿ ಮಾಡಿದ್ದೇನೆ. ಎಲ್ಲರೂ ಒಂದಾಗಿ ಸತ್ತು ಹೋದ ಆಡಳಿತಕ್ಕೆ ಚುರುಕು ಮುಟ್ಟಿಸಲಿದ್ದೇವೆ ಎಂದು ಎಚ್ಚರಿಸಿದರು.

ಯಾರು ಆಡಳಿತ ನಡೆಸುತ್ತಿದ್ದಾರೆಂದು ಗೊತ್ತಾಗುತ್ತಿಲ್ಲ. ಉಪ ಮುಖ್ಯಮಂತ್ರಿ ನಾನೇ ಶ್ಯಾಡೊ ಸಿಎಂ ಎಂದು ಎಲ್ಲ ಕಾರ್ಯಕ್ಕೆ ಅವರೇ ಮುಂದೆ ಹೋಗುತ್ತಿದ್ದಾರೆ. ಆಂತರಿಕ ಕಲಹ ನಡೆಯುತ್ತಿದೆ. ಮೊನ್ನೆ ದಾಳಿ ಆದಾಗ 100 ಕೋಟಿಗೂ ಹೆಚ್ಚು ಹಣ ಸಿಕ್ಕಿದೆ. ಕೇಳಿದರೆ ನಂದಲ್ಲ, ನಂದಲ್ಲ ಎನ್ನುತ್ತಾರೆ ಎಂದು ಟೀಕಿಸಿದರು.

ಕಾಂಗ್ರೆಸ್ ಪಕ್ಷದ್ದು ಎಟಿಎಂ ಸರಕಾರ ಎಂದು ಜನರಿಗೂ ಅರ್ಥ ಆಗಿದೆ. ದಿನವೂ ಟ್ರಾನ್ಸ್‌ಫರ್ ದಂಧೆ ನಡೆಯುತ್ತಿದೆ. ಕಾಂಗ್ರೆಸ್‍ನದು ನೈಜ ಶೇ 40 ಕಮಿಷನ್ ಸರಕಾರ ಎಂದು ಆರೋಪಿಸಿದರು.

ಕಾವೇರಿ ವಿಷಯದಲ್ಲಿ ಹೇಳದೆ ಕೇಳದೆ ತಮಿಳುನಾಡಿಗೆ ನೀರು ಬಿಟ್ಟರು. ಮಾತೆತ್ತಿದರೆ ಕೇಂದ್ರ ಸರಕಾರ ಎನ್ನುತ್ತಾರೆ. ಸಿದ್ದರಾಮಯ್ಯನವರೇ ನಿಮ್ಮ ಸರಕಾರ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದರು. ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಕಾವೇರಿ ವಿಷಯದಲ್ಲಿ ಮೋಸ, ಅಭಿವೃದ್ಧಿಶೂನ್ಯ ಸರಕಾರ ಇಲ್ಲಿದೆ ಎಂದು ತಿಳಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಸ್. ಮುನಿರಾಜು, ಸತೀಶ್ ರೆಡ್ಡಿ, ಧೀರಜ್ ಮುನಿರಾಜು, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ತೇಜಸ್ವಿನಿಗೌಡ, ಜಿಲ್ಲಾಧ್ಯಕ್ಷರಾದ ಬಿ. ನಾರಾಯಣಗೌಡ, ಜಿ. ಮಂಜುನಾಥ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ