Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಧಿಕಾರಿಗಳಿಗೆ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮ ಮಾಹಿತಿ ಹಕ್ಕು ಕಾಯ್ದೆ ಜನಪರ, ಪ್ರಬಲ ಕಾಯ್ದೆಯಾಗಿದೆ : ಆಯುಕ್ತ ಬಿ. ವೆಂಕಟ ಸಿಂಗ್

ಸುದ್ದಿಮೂಲ ವಾರ್ತೆ ಕೊಪ್ಪಳ, ೆ.21:
ಮಾಹಿತಿ ಹಕ್ಕು ಕಾಯ್ದೆೆ ಜನಪರ ಮತ್ತು ಪ್ರಬಲ ಕಾಯ್ದೆೆಯಾಗಿದ್ದು, ಪಾರದರ್ಶಕ ಆಡಳಿತ ವ್ಯವಸ್ಥೆೆ ಜಾರಿಗೊಳಿಸುವಲ್ಲಿ ಪ್ರಮುಖವಾಗಿ ಕಾರ್ಯನಿರ್ವಹಿಸುತ್ತದೆ. ಸಾರ್ವಜನಿಕ ಸೇವೆಯಲ್ಲಿರುವವರಿಗೆ ಮಾಹಿತಿ ಹಕ್ಕು ಕಾಯ್ದೆೆಯು ರಕ್ಷಣೆಯೂ ಹೌದು, ಎಚ್ಚರಿಕೆಯೂ ಹೌದು ಎಂದು ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತ ಬಿ. ವೆಂಕಟ ಸಿಂಗ್ ಹೇಳಿದರು.
ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ೆ.21ರಂದು ಕೊಪ್ಪಳ ಜಿಲ್ಲೆಯ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆೆಯ ಕುರಿತು ಹಮ್ಮಿಿಕೊಂಡಿದ್ದ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮದ ಉದ್ಘಾಾಟನೆ ನೆರವೇರಿಸಿ ಅವರು ಮಾತನಾಡಿದರು.
ಮಾಹಿತಿ ಹಕ್ಕು ಕಾಯ್ದೆೆಯ ಮುಖ್ಯ ಉದ್ದೇಶ ಸರ್ಕಾರದ ಆಡಳಿತದಲ್ಲಿ ಸಾರ್ವಜನಿಕರು ಭಾಗವಹಿಸುವುದಾಗಿದೆ. ಸರಕಾರದ ಯೋಜನೆ ಕುರಿತು ಸಾರ್ವಜನಿಕರು ಮಾಹಿತಿ ಪಡೆಯಲು ಈ ಕಾಯ್ದೆೆಯಡಿ ಅವಕಾಶವಿದೆ. ಇದರಿಂದ ಜನರಿಗೆ ಸರ್ಕಾರದ ಯೋಜನೆಗಳ ಮಾಹಿತಿ ತಿಳಿಯುವುದರ ಜೊತೆಗೆ ಆಡಳಿತದಲ್ಲಿ ಪಾರದರ್ಶಕತೆ ತರಬಹುದಾಗಿದೆ. ಈ ಕಾಯ್ದೆೆ ಬಂದು 20 ವರ್ಷಗಳಾದರೂ ಬಹಳಷ್ಟು ಅಧಿಕಾರಿಗಳಿಗೆ ಕಾಯ್ದೆೆ ಅನುಷ್ಠಾಾನದಲ್ಲಿ ಮಾಹಿತಿ ಕೊರತೆ ಇದೆ. ಹಾಗಾಗಿ ಜಿಲ್ಲಾ ಮತ್ತು ತಾಲ್ಲೂಕು ಹಾಗೂ ಗ್ರಾಾಮ ಪಂಚಾಯತಿ ಮಟ್ಟದ ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆೆ ಕುರಿತ ಪುಸ್ತಕ ಎಲ್ಲರಿಗೂ ತಲುಪಿಸುವ ಕೆಲಸ ಮಾಡಬೇಕು ಎಂದು ಹೇಳಿದರು.
ಕಲ್ಬುರ್ಗಿ ಪೀಠ ಆರಂಭವಾದ ಬಳಿಕ 16640 ಪ್ರಕರಣ ದಾಖಲಾಗಿ ಇಲ್ಲಿಯವರೆಗೆ 10,423 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ತಾವು ಈ ಕಲಬುರಗಿ ಪೀಠದ ಮಾಹಿತಿ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ 3 ತಿಂಗಳ ಅವಧಿಯಲ್ಲಿ 1,400 ಪ್ರಕರಣಗಳನ್ನು ವಿಚಾರಣೆ ಮಾಡಿ 605 ಪ್ರಕರಣಗಳನ್ನು ವಿಲೇವಾರಿ ಮಾಡಿದ್ದು, 6,655 ಪ್ರಕರಣಗಳು ಇನ್ನೂ ವಿಲೇವಾರಿಗೆ ಬಾಕಿ ಇದ್ದು, ಆದ್ಯತೆ ಮೇರೆಗೆ ಸೋಮವಾರದಿಂದ ಶುಕ್ರವಾರ ಅರ್ಜಿಗಳನ್ನು ವಿಲೇವಾರಿ ಮಾಡಲಾಗುತ್ತಿಿದೆ ಎಂದು ಅವರು ತಿಳಿಸಿದರು.
ಕೊಪ್ಪಳ ಜಿಲ್ಲೆಯಲ್ಲಿ 764 ಪ್ರಕರಣಗಳು ಬಾಕಿ ಇವೆ. ಕಲ್ಯಾಾಣ ಕರ್ನಾಟಕದ ಜಿಲ್ಲೆಗಳಲ್ಲಿ ರಾಯಚೂರು ಜಿಲ್ಲೆಯಲ್ಲಿ ಅತಿ ಹೆಚ್ಚು ಮತ್ತು ಬೀದರ ಜಿಲ್ಲೆಯಲ್ಲಿ ಅತಿ ಕಡಿಮೆ ಪ್ರಕರಣಗಳು ಇವೆ. ಇದುವರೆಗೂ ದ್ವಿಿತೀಯ ಮೇಲ್ಮನವಿ ವಿಚಾರಣೆಗೆ ಅರ್ಜಿದಾರರು ಹಾಗೂ ಅಧಿಕಾರಿಗಳು ಬೆಂಗಳೂರಿಗೆ ಹೋಗಬೇಕಿತ್ತು. ಆದರೆ ೆಬ್ರವರಿಯಿಂದ ಆಯೋಗದ ಕಲಬುರಗಿ ಪೀಠದಲ್ಲಿ ದ್ವಿಿತೀಯ ಮೇಲ್ಮನವಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಿಸಲಾಗಿದ್ದು, ಕಲ್ಯಾಾಣ ಕರ್ನಾಟಕದ ಎಲ್ಲ 7 ಜಿಲ್ಲೆಗಳ ಜನರಿಗೆ ಇದರಿಂದ ಅನುಕೂಲವಾಗಲಿದೆ ಎಂದು ಅವರು ಹೇಳಿದರು.
ಕರ್ನಾಟಕ ರಾಜ್ಯ ಮಾಹಿತಿ ಆಯೋಗ ಬೆಂಗಳೂರು ಪೀಠದ ರಾಜ್ಯ ಮಾಹಿತಿ ಆಯುಕ್ತ ಡಾ. ಹರೀಶಕುಮಾರ ಅವರು ಮಾತನಾಡಿ, ಆರ್.ಟಿ.ಐ ಅಡಿ ಸ್ವೀಕೃತವಾಗುವ ಅರ್ಜಿಗಳ ಪೈಕಿ ಗ್ರಾಾಮೀಣಾಭಿವೃದ್ಧಿಿ ಮತ್ತು ಪಂಚಾಯತ್ ರಾಜ್, ಕಂದಾಯ ಮತ್ತು ಲೋಕೋಪಯೋಗಿ ಇಲಾಖೆಗಳ ಅರ್ಜಿಗಳೇ ಹೆಚ್ಚಾಾಗಿವೆ. ಇದರಲ್ಲಿ ಶೇ.30 ರಷ್ಟು ಅರ್ಜಿಗಳು ಗ್ರಾಾಮ ಪಂಚಾಯಿತಿಗಳಿಗೆ ಸಂಬಂಧಿಸಿದ ಮಾಹಿತಿ ಒಳಗೊಂಡಿವೆ. ಇತ್ತೀಚಿಗೆ ಪೊಲೀಸ್ ಇಲಾಖೆಯಲ್ಲಿಯೂ ಅರ್ಜಿಗಳು ಸ್ವೀಕೃತವಾಗುತ್ತಿಿದ್ದು, ಮಾನವ ಹಕ್ಕುಗಳ ಉಲ್ಲಂಘನೆ ಸಂದರ್ಭದಲ್ಲಿ 24 ಗಂಟೆಯೊಳಗೆ ಮಾಹಿತಿ ನೀಡಬೇಕು. ಕಾಯ್ದೆೆಯನ್ನು ಸಮರ್ಪಕವಾಗಿ ಅನುಷ್ಠಾಾನ ಮಾಡುವ ಮೂಲಕ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆೆಯನ್ನು ಮತ್ತಷ್ಟು ಗಟ್ಟಿಿಗೊಳಿಸಲು ಎಲ್ಲಾ ಅಧಿಕಾರಿಗಳು ಶ್ರಮಿಸಬೇಕು ಎಂದು ಹೇಳಿದರು.
ಕರ್ನಾಟಕ ರಾಜ್ಯ ಮಾಹಿತಿ ಆಯೋಗ ಬೆಂಗಳೂರು ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಬದ್ರುದ್ದೀನ್ ಕೆ. ಅವರು ಮಾತನಾಡಿ, ಅಧಿಕಾರಿಗಳು ಇಲಾಖೆಗೆ ಸಂಬಂಧಿಸಿದ ಮಾಹಿತಿಯನ್ನು ಕಾಯ್ದೆೆಯ 4(1)(ಎ) ಮತ್ತು 4(1)(ಬಿ)ಯಲ್ಲಿ ವಿಂಗಡಿಸಿ, ಇಲಾಖೆಯ ವೆಬ್‌ಸೈಟ್‌ಗೆ ಅಪ್ಲೋೋಡ್ ಮಾಡಿ. ಇದರಿಂದ ಶೇ.80 ರಷ್ಟು ಕೆಲಸ ಹಾಗೂ ಒತ್ತಡ ಕಡಿಮೆಯಾಗುತ್ತದೆ. ಮಾಹಿತಿ ಹಕ್ಕಿಿಗೆ ಸಂಬಂಧಿಸಿದ ಅರ್ಜಿ ಕುರಿತು ಯಾವುದೇ ಅಲಕ್ಷ್ಯ ಅಥವಾ ಅನಗತ್ಯ ವಿಳಂಬ ಮಾಡಬೇಡಿ. ಇಲಾಖೆಗಳ ಮೇಲಧಿಕಾರಿಗಳು ಪ್ರತಿ ಮೂರು ತಿಂಗಳಿಗೊಮ್ಮೆೆ ಅಧೀನ ಕಚೇರಿಯ ಪರಿಶೀಲನೆ ನಡೆಸಿ, ಯಾವುದೇ ಅರ್ಜಿ ಬಾಕಿ ಇರದಂತೆ ಖಚಿತಪಡಿಸಿಕೊಳ್ಳಿಿ ಎಂದು ಅವರು ಹೇಳಿದರು.
ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಾಳ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಾಧಿಕಾರಿ ಡಾ. ರಾಮ್ ಎಲ್. ಅರಸಿದ್ಧಿಿ, ಅಪರ ಜಿಲ್ಲಾಧಿಕಾರಿ ಸಿದ್ರಾಾಮೇಶ್ವರ, ಜಿ.ಪಂ ಉಪಕಾರ್ಯದರ್ಶಿ ಟಿ.ಕೃಷ್ಣಮೂರ್ತಿ ಸೇರಿದಂತೆ ಮತ್ತಿಿತರರು ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ