Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವ ಹೃದಯ ದಿನ : ಪತ್ರಕರ್ತರಿಗೆ ಬಿಎಲ್‌ಎಸ್‌ ತರಬೇತಿ ಕಾರ್ಯಾಗಾರ

ಸುದ್ದಿಮೂಲ ವಾರ್ತೆ

ಬೆಂಗಳೂರು,ಸೆ.23:ಹಠಾತ್‌ ಹೃದಯಾಘಾತವಾದ ಸಂದರ್ಭದಲ್ಲಿ ಕಾರ್ಡಿಯೋ ಪಲ್ಮನರಿ ರಿಸಸಿಟೇಶನ್ ಮಾಡುವುದು ಸೇರಿದಂತೆ ತುರ್ತು ಆರೋಗ್ಯ ಚಿಕಿತ್ಸೆಗಳ ಕುರಿತು ಫೋರ್ಟಿಸ್‌ ಆಸ್ಪತ್ರೆ ವತಿಯಿಂದ ಪ್ರೆಸ್‌ಕ್ಲಬ್‌ನಲ್ಲಿ 100 ಪತ್ರಕರ್ತರಿಗೆ ಬೇಸಿಕ್‌ ಲೈಫ್‌ ಸಪೋರ್ಟ್‌ ತರಬೇತಿ ಕಾರ್ಯಾಗಾರ ಆಯೋಜಿಸಿತ್ತು.

ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯ ವತಿಯಿಂದ “ವಿಶ್ವ ಹೃದಯ ದಿನ”ದ ಪೂರ್ವಭಾವಿಯಾಗಿ ಬಿಎಲ್‌ಎಸ್‌ ಪ್ರಾಯೋಗಿಕ ತರಬೇತಿಯನ್ನು ನುರಿತ ಹೃದಯತಜ್ಞರು ನೀಡಿದರು.

ಬೇಸಿಕ್ ಲೈಫ್ ಸಪೋರ್ಟ್ ಕೌಶಲ್ಯಗಳ ಬಗ್ಗೆ ಮಾತನಾಡಿದ ಎಮರ್ಜೆನ್ಸಿ ಮೆಡಿಸನ್‌ ವಿಭಾಗದ ಮುಖ್ಯಸ್ಥರಾದ ಡಾ. ಇ. ಕುಮಾರಸ್ವಾಮಿ, ಎದೆ ನೋವು, ಉಸಿರಾಟದ ತೊಂದರೆ ಅಥವಾ ಅಸ್ವಸ್ಥತೆಯಂತಹ ರೋಗಲಕ್ಷಣಗಳನ್ನು ಗುರುತಿಸುವುದು ಮತ್ತು ತಕ್ಷಣದ ಸಹಾಯವನ್ನು ಪಡೆಯುವುದು ಆ ವ್ಯಕ್ತಿಯ ಜೀವ ಉಳಿಸಲು ಹೆಚ್ಚು ಪರಿಣಾಮಕಾರಿ. ಕೆಲವರಿಗೆ ಆ ಕ್ಷಣಕ್ಕೆ ಸಿಪಿಆರ್‌ನ ಅವಶ್ಯಕತೆಯು ಬೀಳಬಹುದು. ಆದರೆ, ಬಹುತೇಕರಿಗೆ ಸಿಪಿಆರ್‌ನನ್ನು ಸರಿಯಾದ ರೀತಿಯಲ್ಲಿ ಮಾಡಲು ಬರುವುದಿಲ್ಲ. ಹೀಗಾಗಿ, ಸೂಕ್ತ ರೀತಿಯಲ್ಲಿ ಹೃದಯಾಘಾತ ವ್ಯಕ್ತಿಗೆ ಸಿಪಿಆರ್‌ ಮಾಡುವ ವಿಧಾನವನ್ನು ಪತ್ರಕರ್ತರಿಗೆ ಹೇಳಿಕೊಡಲಾಯಿತು ಎಂದರು.

ಇಂಟರ್ವೆನ್ಷನಲ್ ಕಾರ್ಡಿಯಾಲಜಿಯ ನಿರ್ದೇಶಕ ಡಾ ರಾಜ್‌ಪಾಲ್ ಸಿಂಗ್ ಮಾತನಾಡಿ, ಹೃದಯಾಘಾತ ಯಾವ ಸಂದರ್ಭದಲ್ಲಿ ಯಾರಿಗೆ ಬರಲಿದೆ ಎಂದು ಹೇಳಲು ಸಾಧ್ಯವಿಲ್ಲ. ಆದರೆ, ಎದೆ ನೋವು, ಉಸಿರಾಟದ ತೊಂದರೆ ಮತ್ತು ಅತಿಯಾದ ಆಯಾಸ ಸೇರಿದಂತೆ ಕೆಲವು ಲಕ್ಷಣಗಳು ಕಂಡು ಬಂದ ಕೂಡಲೇ ಅದನ್ನು ನಿರ್ಲಕ್ಷಿಸದೇ ವೈದ್ಯರನ್ನು ಸಂಪರ್ಕಿಸುವುದು ಮುಖ್ಯ. ಹೃದಯಾಘಾತದ ಮುನ್ನೆಚ್ಚರಿಕೆ ಅರಿಯಲು ಆಗಾಗ್ಗೇ ಇಸಿಜಿ ಪರೀಕ್ಷೆಗಳನ್ನು ಮಾಡಿಸಿಕೊಳ್ಳುವುದು, ನಿಮ್ಮ ದೇಹದ ಅಧಿಕ ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್‌ನ ಪ್ರಮಾಣ ತಿಳಿದುಕೊಳ್ಳುವುದು ಅವಶ್ಯಕ. ಇದರಿಂದ ಭವಿಷ್ಯದಲ್ಲಿ ಸಂಭವಿಸಬಹುದಾದ ಹೃದಯಾಘಾತದಿಂದ ತಪ್ಪಿಸಿಕೊಳ್ಳಬಹುದು ಎಂದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ