Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲೇಖಕಿ, ಸಂಶೋಧಕಿ ರೋಹಿಣಿ ಅವರಿಗೆ ವಿಜಯ ದಬ್ಬೆ ಪ್ರಶಸ್ತಿ

ಸುದ್ದಿಮೂಲ ವಾರ್ತೆ
ಮೈಸೂರು, ಮೇ 24:  ಮೈಸೂರಿನ ಸಮತಾ ಅಧ್ಯಯನ ಕೇಂದ್ರ ಸ್ಥಾಪಿಸಿರುವ 2023ನೇ ಸಾಲಿನ ಪ್ರತಿಷ್ಠಿತ ಡಾ.ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿಗೆ ಲೇಖಕಿ, ಸಂಶೋಧಕಿ ಬಿ.ಎಂ.ರೋಹಿಣಿ ಅವರ 'ವೇಶ್ಯಾವಾಟಿಕೆಯ ಕಥೆ-ವ್ಯಥೆ’  ಸಂಶೋಧನಾ ಕೃತಿಯನ್ನು ಆಯ್ಕೆ ಮಾಡಲಾಗಿದೆ

ಈ ಪ್ರಶಸ್ತಿಗೆ 2019 – 2022 ರ ಅವಧಿಯಲ್ಲಿ ಮಹಿಳೆಯರಿಂದ ಪ್ರಕಟವಾದ ‘ವಿಮರ್ಶೆ ಮತ್ತು ಸಂಶೋಧನಾ ಕೃತಿಗಳನ್ನು’ ಆಹ್ವಾನಿಸಲಾಗಿತ್ತು. 46 ಲೇಖಕಿಯರು ತಮ್ಮ ಕೃತಿಗಳನ್ನು ಕಳುಹಿಸಿದ್ದರು. ಅವುಗಳನ್ನು ಅವಲೋಕಿಸಿದ ಡಾ.ಎಂ.‌ ಉಷಾ, ಡಾ.ಸೆಲ್ವಕುಮಾರಿ ಮತ್ತು ಡಾ.ಆರ್.ಸುನಂದಮ್ಮ ಅವರನ್ನೊಳಗೊಂಡ  ಆಯ್ಕೆ ಸಮಿತಿಯು ಸಂಶೋಧನೆಯ ವಸ್ತು, ವ್ಯಾಪ್ತಿ, ವಿಷಯ ಮತ್ತು ಒಳನೋಟಗಳನ್ನು ಪರಿಗಣಿಸಿ ರೋಹಿಣಿಯವರ ಕೃತಿಯನ್ನು ಆಯ್ಕೆ ಮಾಡಿದೆ. 25,000 ರೂ. ನಗದು ಬಹುಮಾನ, ಫಲಕವನ್ನು ಪ್ರಶಸ್ತಿ ಒಳಗೊಂಡಿದೆ.

ಎಪ್ಪತ್ತೊಂಬತ್ತರ ಹರೆಯದಲ್ಲೂ  ಓದು, ಸಂಶೋಧನೆ, ಸಂಘಟನೆ, ಸಮಾಲೋಚನೆಗಳಲ್ಲಿ ಕ್ರಿಯಾಶೀಲರಾಗಿರುವ ರೋಹಿಣಿಯವರನ್ನು ಹಲವು‌ ಸಂಘ ಸಂಸ್ಥೆಗಳು‌ ಗೌರವಿಸಿವೆ. ಸಮತಾ ಅಧ್ಯಯನ ‌ಕೇಂದ್ರವು ವಿಜಯಾ ದಬ್ಬೆ  ಹೆಸರಿನಲ್ಲಿ ಸ್ಥಾಪಿಸಿರುವ ಪ್ರಶಸ್ತಿಯನ್ನು ಮೊದಲನೆಯ ವರ್ಷವೇ ಈ ಹಿರಿಯಕ್ಕನಿಗೆ ನೀಡಲು ಹೆಮ್ಮೆ ಪಡುತ್ತದೆ.

ಜೂನ್  1ರಂದು ಮೈಸೂರಿನಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಕೇಂದ್ರದ ಅಧ್ಯಕ್ಷೆ ಡಾ. ಸಬಿಹಾ ಭೂಮಿಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ