Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಈ ಬಾರಿ ಕಾಂಗ್ರೆಸ್ ನೆಲಸಮ: ಯಡಿಯೂರಪ್ಪ

ಸುದ್ದಿಮೂಲ ವಾರ್ತೆ

ಬೆಂಗಳೂರು, ಏ.21: ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದ್ದು, ಈ ಬಾರಿ ಕಾಂಗ್ರೆಸ್ ಸಂಪೂರ್ಣ ನೆಲಸಮವಾಗಲಿದೆ ಎಂದು ಬಿ.ಎಸ್.ಯಡಿಯೂರಪ್ಪ ಅವರು ಈ ಸಂದರ್ಭದಲ್ಲಿ ಹೇಳಿದರು.

ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಶಾಸಕ ಎಸ್.ಬಾಲರಾಜು ಹಾಗೂ ಅವರ ಅಪಾರ ಬೆಂಬಲಿಗರು ಇಂದು ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬಿಜೆಪಿ 135ರಿಂದ 140 ಸ್ಥಾನಗಳನ್ನು ಗೆದ್ದು, ಅಧಿಕಾರಕ್ಕೆ ಬರುವುದು ನಿಶ್ಚಿತ. ಭಾನುವಾರದಿಂದು ಚುನಾವಣಾ ಪ್ರವಾಸ ಆರಂಭವಾಗಲಿದ್ದು, ಆಗ ಯಾವ ರೀತಿ ಗಾಳಿ ಬೀಸುತ್ತಿದೆ ಎಂದು ಅರ್ಥವಾಗುತ್ತೆ ಎಂದು ಹೇಳಿದರು.

ನರೇಂದ್ರಮೋದಿ ಅವರು ಪ್ರಚಾರಕ್ಕೆ ಇಳಿದ ನಂತರ 140 ಸ್ಥಾನ ಗೆದ್ದು, ಸರ್ಕಾರ ರಚನೆ ಮಾಡುವುದರಲ್ಲಿ ಸಂಶಯವಿಲ್ಲ. ಪಕ್ಷಕ್ಕೆ ಸೇರಲು ಅನೇಕರು ತಮ್ಮನ್ನು ಭೇಟಿಯಾಗುತ್ತಿದ್ದಾರೆ. ಬಿಜೆಪಿ ತತ್ವ-ಸಿದ್ಧಾಂತ ಒಪ್ಪಿ ಬರುವುದಾದರೆ ಅಂತವರನ್ನು ಸ್ವಾಗತಿಸಲು ಸಿದ್ಧರಾಗಿದ್ದೇವೆ ಎಂದು ಯಡಿಯೂರಪ್ಪ ಹೇಳಿದರು.

ಬಾಲರಾಜು ಅವರ ಸೇರ್ಪಡೆಯಿಂದ ಚಾಮರಾಜನಗರದಲ್ಲಿ ಬಿಜೆಪಿಗೆ ಬಲ ಬಂದಿದೆ. 1999ರಲ್ಲಿ ಕೊಳ್ಳೇಗಾಲ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಬಾಲರಾಜು ಅವರು ಕೇವಲ ನಾಲ್ಕು ಸಾವಿರ ಮತಗಳ ಅಂತರದಿಂದ ಪರಾಭವಗೊಂಡಿದ್ದರು. 2004ರಲ್ಲಿ ಪಕ್ಷೇತರರಾಗಿ ಗೆಲುವು ಕಂಡಿದ್ದರು ಎಂದು ಹೇಳಿದರು.

ಎಸ್.ಬಾಲರಾಜು ಮಾತನಾಡಿ, ಅತ್ಯಂತ ಜನಪ್ರಿಯ ಪ್ರಧಾನ ನರೇಂದ್ರಮೋದಿ ಅವರು ಭಾರತವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತಿದ್ದಾರೆ. ಬಿಜೆಪಿಯಿಂದ ಈ ಹಿಂದೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಕಡಿಮೆ ಅಂತರದಿಂದ ಪರಾಭಗೊಂಡಿದ್ದ ನನಗೆ ಇದೀಗ ಮತ್ತೆ ಪಕ್ಷಕ್ಕೆ ಕೆಲಸ ಮಾಡಲು ಹೆಮ್ಮೆ ಎನಿಸುತ್ತಿದೆ. ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ, ಮಾಜಿ ಶಾಸಕ ಎಂ.ಡಿ.ಲಕ್ಷ್ಮೀ ನಾರಾಯಣ್ ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ