Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮತದಾನ ಪ್ರಮಾಣವನ್ನು ಹೆಚ್ಚಸಲು ಅರಿವು ಕಾರ್ಯಕ್ರಮಕ್ಕೆ ಸೂಚನೆ: ವೈ.ಎಸ್.ಪಾಟೀಲ

ತುಮಕೂರು.ಏ.5: ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಪಾಲಿಕೆ ವ್ಯಾಪ್ತಿಯಲ್ಲಿ ಶೇ.100ರಷ್ಟು ಮತದಾನವಾಗಬೇಕು. ಈ ಹಿನ್ನೆಲೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸಲು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.


ಪಾಲಿಕೆ ಸಭಾಂಗಣದಲ್ಲಿ ಬುಧವಾರ ಜರುಗಿದ ಸ್ವೀಪ್ ಸಮಿತಿ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯ ವಾರ್ಡುಗಳಲ್ಲಿ ತಪ್ಪದೆ ಮತದಾನ ಮಾಡುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಏರ್ಪಡಿಸಬೇಕು. ಹಿಂದಿನ ಚುನಾವಣೆಯಲ್ಲಿ ಮತದಾನ ಪ್ರಮಾಣ ಕಡಿಮೆ ಆಗಿರುವ ವಾರ್ಡುಗಳಿಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು. ಅಧಿಕಾರಿಗಳು ಹಿಂದಿನ ಚುನಾವಣೆಯಲ್ಲಿ ಮತದಾನ ಕಡಿಮೆಯಾಗಲು ಕಾರಣವನ್ನು ಕಂಡುಕೊಳ್ಳಬೇಕು. ಮತದಾನ ಮಾಡುವ ಮತಗಟ್ಟೆಯ ಮಾಹಿತಿ ಕೊರತೆಯಿಂದ ಅಥವಾ ಮತಗಟ್ಟೆ ದೂರವಿದೆ ಎಂದು ಕೆಲವು ಮತದಾರರು ಮತದಾನದಿಂದ ತಪ್ಪಿ ಹೋಗುವ ಸಾಧ್ಯತೆ ಇರುತ್ತದೆ. ಈ ನಿಟ್ಟಿನಲ್ಲಿ ಪ್ರತಿ ಮನೆಗಳಿಗೆ ಭೇಟಿ ನೀಡಿ ಮತದಾರರ ಚೀಟಿಯನ್ನು ವಿತರಿಸಿ ಮತಗಟ್ಟೆಗಳ ಮಾಹಿತಿಯನ್ನು ಮತದಾರರಿಗೆ ನೀಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.


ಬೆಂಗಳೂರು ಮತ್ತಿತರ ಪ್ರದೇಶಗಳಿಗೆ ಉದ್ಯೋಗ, ವ್ಯಾಸಂಗಕ್ಕಾಗಿ ತೆರಳಿರುವ 18 ವರ್ಷ ಮೇಲ್ಪಟ್ಟ ಕುಟುಂಬ ಸದಸ್ಯರನ್ನು ಮತದಾನ ದಿನದಂದು ಸ್ವಗ್ರಾಮಕ್ಕೆ ಬಂದು ಮತ ಚಲಾಯಿಸುವ ಬಗ್ಗೆ ಸ್ಥಳೀಯ ಮತದಾರರಿಗೆ ತಿಳಿ ಹೇಳಬೇಕು.


ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ: ಕೆ. ವಿದ್ಯಾಕುಮಾರಿ ಮಾತನಾಡಿ, ಪ್ರತಿ ದಿನ ಬೆಳಿಗ್ಗೆ ಕಸದ ವಾಹನಗಳಲ್ಲಿ ಜಾಗೃತಿ ಗೀತೆಗಳ ಮೂಲಕ ಮತದಾನ ಮಾಡುವ ಬಗ್ಗೆ ನಾಗರಿಕರಲ್ಲಿ ಅರಿವು ಮೂಡಿಸಬೇಕು. ಅಲ್ಲದೆ ಮತದಾನ ಜಾಗೃತಿ


ಮೂಡಿಸುವ ಬಗ್ಗೆ ಬೀದಿ ನಾಟಕ, ಸಂಗೀತ ಕಾರ್ಯಕ್ರಮಗಳ ಮೂಲಕ ಮತದಾರರನ್ನು ಸೆಳೆಯಬೇಕು ಎಂದು ಸಲಹೆ ನೀಡಿದರು.


ಪಾಲಿಕೆ ಆಯುಕ್ತ ಹೆಚ್.ವಿ.ದರ್ಶನ್ ಮಾತನಾಡಿ, 18 ವರ್ಷ ಮೇಲ್ಪಟ್ಟ ಯುವ ಮತದಾರರಿಂದ ಮತದಾನ ಜಾಗೃತಿ ಸಂದೇಶವನ್ನು


ವಿಡಿಯೋ ಚಿತ್ರೀಕರಣ ಮಾಡಿ ವಿಡಿಯೋ ತುಣುಕನ್ನು ಹಂಚಿಕೊಳ್ಳುವುದರಿAದ ಯುವ ಮತದಾರರನ್ನು ಮತದಾನ ಮಾಡುವತ್ತ ಸೆಳೆಯಬಹುದು ಎಂದು ಸಲಹೆ ನೀಡಿದರು.


ಪಾಲಿಕೆ ಉಪ ಆಯುಕ್ತೆ(ಕಂದಾಯ) ಸುಮತಿ, ಕೌಶಲ್ಯಾಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ತೋಟಗಾರಿಕೆ ಉಪನಿರ್ದೇಶಕ ರಘು, ರೇಷ್ಮೆ


ಉಪನಿರ್ದೇಶಕ ಬಾಲಕೃಷ್ಣಪ್ಪ, ಡಾ: ರಕ್ಷಿತ್, ಪಾಲಿಕೆ ಚುನಾವಣಾ ಶಾಖೆಯ ನಾಗಭೂಷಣ್, ಜಿಲ್ಲಾ ಪಂಚಾಯತಿ ಇಂಜಿನಿಯರ್ ಶ್ರೀನಿವಾಸ್,


ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ