Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮರಳಿ ಜೆಡಿಎಸ್ ಸೇರ್ಪಡೆಗೊಂಡ ವೈಎಸ್‌ವಿ ದತ್ತಾ

ಸುದ್ದಿಮೂಲ ವಾರ್ತೆ

ಚಿಕ್ಕಮಗಳೂರು, ಏ.13: ಜೆಡಿಎಸ್ ತೊರೆದು, ಕಾಂಗ್ರೆಸ್ ಟಿಕೆಟ್‌ ಇಲ್ಲದೆ ಅತಂತ್ರವಾಗಿದ್ದ ವೈ.ಎಸ್‌.ವಿ. ದತ್ತಾ ಈಗ ಮರಳಿ ಮತ್ತೆ ಜೆಡಿಎಸ್‌ ಸೇರಿದ್ದಾರೆ.

ಮಾಜಿ ಸಚಿವ ಎಚ್.ಡಿ. ರೇವಣ್ಣ ಮತ್ತು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಗುರುವಾರ ಕಡೂರು ತಾಲ್ಲೂಕಿನ ಯಗಟಿ ಗ್ರಾಮದಲ್ಲಿರುವ ದತ್ತಾ ಅವರ ಮನೆಗೆ ತೆರಳಿ ಮರಳಿ ಪಕ್ಷಕ್ಕೆ ಸೇರುವಂತೆ ಮನವೊಲಿಸಿದರು. ಅಲ್ಲದೆ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರೂ ಸಹ ದೂರವಾಣಿ ಕರೆ ಮಾಡಿ ಪಕ್ಷೇತರನಾಗಿ ಚುನಾವಣೆಗೆ ನಿಲ್ಲುವುದು ಬೇಡ, ಜೆಡಿಎಸ್‌ನಿಂದಲೇ ಸ್ಪರ್ಧಿಸುವಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ದತ್ತಾ ಮರಳಿ ಜೆಡಿಎಸ್ ಸೇರುವ ನಿರ್ಧಾರ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ರೇವಣ್ಣ, ದತ್ತಾ ಜೆಡಿಎಸ್ ಸೇರ್ಪಡೆ ಏನಿಲ್ಲ, ಜೆಡಿಎಸ್ ಅವರ ಕಳೆದ 50 ವರ್ಷದ ಮನೆ. ಅವರಿಗೆ ಅವರ ಮನೆಗೆ ಬರೋದಕ್ಕೆ ಏನಿದೆ ವಿಶೇಷ. ದೇವೇಗೌಡರೇ ಹೇಳಿದ ಮೇಲೆ ಎಲ್ಲಾ ಮುಗಿಯಿತು. ಈಗಾಗಲೇ ಟಿಕೆಟ್ ಘೋಷಣೆ ಮಾಡಲಾದ ಅಭ್ಯರ್ಥಿ ಧನಂಜಯ್ ಅವರನ್ನ ಕರೆಯಿಸಿ ದೇವೇಗೌಡರು ಮಾತನಾಡುತ್ತಾರೆ. ಜೆಡಿಎಸ್ ಗೆಲ್ಲಬೇಕು, ಕಾರ್ಯಕರ್ತರು ಉಳಿಯಬೇಕು ಎಂದು ಹೇಳಿದ್ದಾರೆ.

ದತ್ತಾ ಜೆಡಿಎಸ್‌ ಪಕ್ಷದಿಂದಲೇ ಏ.18ರಂದು ಕಡೂರು ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡುತ್ತಾರೆ. ದತ್ತಾ ನಾಮಪತ್ರ ಸಲ್ಲಿಕೆ ವೇಳೆ ದೇವೇಗೌಡರೇ ಬಂದು ಪಕ್ಕದಲ್ಲಿ ಕುಳಿತಿರುತ್ತಾರೆ. ನೀವು ಯಾರೂ ದತ್ತಾ ಅವರ ಕೈಬಿಡಬಾರದು ಎಂದು ರೇವಣ್ಣ ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ನೀವು ಬೇರೆ ಯೋಚನೆ ಮಾಡಬೇಡಿ. ದೇವೇಗೌಡರ ಮಾತನ್ನ ನಾನು, ದತ್ತಾ, ನೀವು ಎಲ್ಲಾ ಪಾಲಿಸಬೇಕು. ದತ್ತಾ ಅವರನ್ನು ಶಾಸಕರನ್ನಾಗಿ ಮಾಡಲೇಬೇಕು ಎಂದು ದೇವೇಗೌಡರು ಹೇಳಿದ್ದಾರೆ. ಇದು ನಮ್ಮ ಮನೆಯ ಚುನಾವಣೆ ಎಂದು ನಾವೆಲ್ಲರೂ ಮಾಡುತ್ತೇವೆ. ನಮಗೆ ಹೊಳೆನರಸೀಪುರ-ಕಡೂರು ಬೇರೆ ಬೇರೆ ಅಲ್ಲ. ನಾನು ದತ್ತಾ ಜೊತೆ ಇರುತ್ತೇನೆ ಎಂದು ರೇವಣ್ಣ ವಿಶ್ವಾಸದ ಮಾತುಗಳನ್ನಾಡಿದರು.

ದೇವೇಗೌಡರ ಮಾತಿಗೆ ಬೆಲೆ ಕೊಡುತ್ತೇನೆ:

'ಪಕ್ಷೇತರವಾಗಿ ಸ್ಪರ್ಧಿಸುವುದು ಬೇಡ ಎಂದು ದೇವೇಗೌಡರು ನನಗೆ ಹೇಳಿದ್ದಾರೆ. ಹಾಗಾಗಿ ಅವರ ಮಾತಿಗೆ ಬೆಲೆ ಕೊಡುತ್ತೇನೆ. ಕಾರ್ಯಕರ್ತರ ಅಭಿಪ್ರಾಯವನ್ನೂ ಪಡೆದಿದ್ದೇನೆ. ಎಲ್ಲರ ಸಮ್ಮತಿಯೊಂದಿಗೆ ಜೆಡಿಎಸ್ ಸೇರಿದ್ದು, 18ರಂದು ನಾಮಪತ್ರ ಸಲ್ಲಿಸಲಿದ್ದೇನೆ,' ಎಂದು ದತ್ತಾ ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ