Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟೆಕ್ ಸಮ್ಮಿಟ್ ನಲ್ಲಿ ಗಮನಸೆಳೆದ ತಾರೆ ಜಮೀನ್ ಪರ್ ನ ಸಂಚಾರಿ ತಾರಾಲಯ 

ಸುದ್ದಿಮೂಲ ವಾರ್ತೆ

ಬೆಂಗಳೂರು,ನ,29 : ಬೆಂಗಳೂರು ಟೆಕ್ ಸಮ್ಮಿಟ್ ನಲ್ಲಿ ಸಂಚಾರಿ ವ್ಯವಸ್ಥೆ ಮೂಲಕ ಶಾಲೆಯ ಬಾಗಿಲಿಗೆ ತಾರಾಲಯ ಕೊಂಡೊಯ್ಯುತ್ತಿರುವ ತಾರೆ ಜಮೀನ್ ಪರ್ ಸಂಸ್ಥೆಯು ಆಯೋಜಿಸಿರುವ ಚಂದ್ರಯಾನ - 3 ಪೆವಿಲಿಯನ್ ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ.



ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಟೆಕ್ ಸಮ್ಮಿಟ್ ನಲ್ಲಿ ಇದು ತಂತ್ರಜ್ಞರ ಹಾಗೂ ಸಾರ್ವಜನಿಕರ ಗಮನ ಸೆಳೆಯುತ್ತಿದೆ. ಇದಕ್ಕಾಗಿ ಜಿಯೋಡೆಸಿಕ್ ಡೋಮ್ ಪ್ಲಾನಿಟೋರಿಯಮ್ ಅಳವಡಿಸಲಾಗಿದ್ದು ವಿಆರ್ ತಂತ್ರಜ್ಞಾನದ ಮೂಲಕ ಚಂದ್ರಯಾನದ ಅಭೂತಪೂರ್ವ ಅನುಭೂತಿಯನ್ನು ಇದು ನೀಡುತ್ತಿದೆ.

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ ಈ ಪೆವಿಲಿಯನ್ ಗೆ ಚಾಲನೆ ನೀಡಿದರು.

ತಾರೆ ಜಮೀನ್ ಪರ್ ಸಂಸ್ಥೆಯ ಸಂಸ್ಥಾಪಕ ದಿನೇಶ್ ಬಾದಗಂಡಿ ನೇತೃತ್ವದಲ್ಲಿ ಚಂದ್ರಯಾನ 3 ಮಾದರಿ ಅಳವಡಿಸಲಾಗಿದೆ. ದಿನೇಶ್ ಬಾದಗಂಡಿ ಮೂಲತಃ ಗ್ರಾಮೀಣ ಪ್ರದೇಶದವರಾಗಿದ್ದು, ಪ್ರಿಸ್ಟೀಜಿಯಸ್ ಎಲೆವೇಟ್100 ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಜ್ಯ ಸರ್ಕಾರದ ಶಾಲೆಗಳಲ್ಲಿ ಅಧ್ಯಯನ ಮಾಡುತ್ತಿರುವವರಲ್ಲಿ ಸಕಾರಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಶಾಲಾ ವಿದ್ಯಾರ್ಥಿಗಳಿಗಾಗಿ ತಾರೆ ಜಮೀನ್ ಪರ್ ಸಂಚಾರಿ ಪ್ರಯೋಗಾಲಯದ ಪರಿಕಲ್ಪನೆಯನ್ನು ರೂಪಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ದಿನೇಶ್ ಬಾದಗಂಡಿ, ರಾಜ್ಯದ ಮೂಲೆ ಮೂಲೆಗಳಲ್ಲಿ ತಾರಾಲಯ ಸಂಚರಿಸಿ 21 ಲಕ್ಷ ಗ್ರಾಮೀಣ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿದೆ. ಸಾಂಪ್ರದಾಯಿಕ ವಿಧಾನಗಳನ್ನು ಮೀರಿ ಈ ಸಂಸ್ಥೆಯು “ಮೇಕ್ ಇನ್ ಕರ್ನಾಟಕ” ನೀತಿಗೆ ಸಾಕ್ಷಿಯಾಗಿದ್ದು, ಇದಕ್ಕೆ ಅನುಗುಣವಾಗಿ ಅರೆ ಶಾಶ್ವತ ಜಿಯೋಡೆಸೆಕ್ ಗುಮ್ಮಟವನ್ನು ಅನಾವರಣಗೊಳಿಸಿದೆ. ಇದರಿಂದ ತಾರಾಲಯದ ವೆಚ್ಚ ಶೇ 50 ರಷ್ಟು ಕಡಿಮೆ ಮಾಡಲು ಸಹಕಾರಿಯಾಗಿದೆ. ಸಾಂಪ್ರದಾಯಿಕ ತಾರಾಲಯಗಳು ಸಂವಾದಾತ್ಮಕ ಕಲಿಕೆಗೆ ಪೂರಕವಾಗಿಲ್ಲ. ಆದರೆ ಇದು ಸಂವಾದಾತ್ಮಕ ಕಲಿಕೆಗೆ ಸಹಕಾರಿಯಾಗಿದೆ ಎಂದು ಹೇಳಿದರು.

ಜಾಯ್ ಸ್ಟಿಕ್ ಮತ್ತು ಕೀಬೋರ್ಡ್ ಬಳಕೆಯ ಮೂಲಕ ಬಳಕೆದಾರರು ಆಕಾಶಕಾಯಗಳನ್ನು ನಿರ್ವಹಿಸಬಹುದು ಮತ್ತು ಅನ್ವೇಷಿಸಬಹುದು. ಚಂದ್ರಯಾನವನ್ನು ಮುನ್ನಡೆಸುವುದು, ಬಾಹ್ಯಾಕಾಶದಲ್ಲಿ ನ್ಯಾವಿಗೇಟ್ ಮಾಡುವುದು ಅಥವಾ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಡಾಕಿಂಗ್ ಮಾಡುವುದು, ಡಿಜಿಟಲ್ ತಾರಾಲಯವು ಸಾಟಿಯಿಲ್ಲದ ಆಳವಾದ ಪ್ರಯಾಣದ ಅನುಭವವನ್ನು ನೀಡುತ್ತದೆ. ಇದು ತಾರೆ ಜಮೀನ್ ಪರ್ ನ ಸಾಧನೆ ಮಾತ್ರವಲ್ಲ, ನಾವೀನ್ಯತೆ ಮತ್ತು ಶಿಕ್ಷಣದ ಶಕ್ತಿಯನ್ನು ಪ್ರದರ್ಶಿಸುವ ರಾಜ್ಯಕ್ಕೆ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ