Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲಾ ಪಂಚಾಯಿತಿ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಇಲಾಖೆ ವರ್ಗಾವಣೆ- ಮರಿತಿಬ್ಬೇಗೌಡ ಖಂಡನೆ

ಸುದ್ದಿಮೂಲ ವಾರ್ತೆ

ಮೈಸೂರು, ನ.11:ರಾಜ್ಯ ಸರ್ಕಾರ ಜಿಲ್ಲಾ ಪಂಚಾಯ್ತಿಗೆ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಇಲಾಖೆಯನ್ನು ವರ್ಗಾವಣೆಗೊಳಿಸಲು ಹುನ್ನಾರ ನಡಿಸಿದೆ. ಕೂಡಲೇ ಇಂತಹ ನಿರ್ಣಯಗಳನ್ನು ಕೈ ಬಿಡಬೇಕೆಂದು ವಿಧಾನ ಪರಿಷತ್‌ ಸದಸ್ಯ ಮರಿತಿಬ್ಬೇಗೌಡ ಆಗ್ರಹಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪದವಿ ಪೂರ್ವ ಶಿಕ್ಷಣ ಬಹಳ ದೀರ್ಘಕಾಲದಿಂದ ಪ್ರತ್ಯೇಕ ವ್ಯವಸ್ಥೆಯಲ್ಲಿ ನೀಡುತ್ತಾ ಬಂದಿದೆ. ನಮ್ಮ ಜಿಲ್ಲೆಯ ಉಪನಿರ್ದೇಶಕ ಕಾರ್ಯನಿರ್ವಹಣೆಯನ್ನು ಜಿಪಂಗೆ ವಹಿಸಿ ಜಿಪಂ ಸಿಇಒ ಅವರ ವರ್ಗಾವಣೆ ನೋಡಿಕೊಳ್ಳುವಂತೆ ಹೊಸ ಸುತ್ತೋಲೆ ಹೊರಡಿಸಿದ್ದಾರೆ. ಇದು ಅವೈಜ್ಞಾನಿಕವಾಗಿದೆ ಎಂದು ವಿರೋಧಿಸಿದರು.

ಪಂಚಾಯತ್‌ ರಾಜ್‌ ಇಲಾಖೆಯಲ್ಲಿ ಶೇ.42 ರಷ್ಟು ನೌಕರರ ಕೊರತೆಯಿದೆ. ಪಂಚಾಯತ್‌ ರಾಜ್‌ ಇಲಾಖೆಯ ಕಾರ್ಯಕ್ರಮಗಳೇ ನಿಗಧಿತ ಅವಧಿಯಲ್ಲಿ ಮಾಡಲು ಆಗುತ್ತಿಲ್ಲ. ಹೀಗಿರುವಾಗಲೇ ಶಿಕ್ಷಣ ಇಲಾಖೆ ಆಡಳಿತ ವಿಭಾಗವನ್ನು ಹೆಚ್ಚುವರಿಯಾಗಿ ನೀಡುವುದರಿಂದ ವಿಳಂಬ ನೀತಿ ಹೆಚ್ಚಳ ಆಗಲಿದೆ. ಪದವಿಪೂರ್ವ ಶಿಕ್ಷಣ ಇಲಾಖೆಗೆ ಜಡತ್ವ ಉಂಟಾಗಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸದರಿ ಸುತ್ತೋಲೆ ಬಗ್ಗೆ ವಿಧಾನಸಭೆ ಹಾಗೂ ಪರಿಷತ್‌ನಲ್ಲಿ ಚರ್ಚೆಗೆ ತಾರದೇ ಎಕಾಎಕಿ ನಿರ್ಧಾರ ಕೈಗೊಂಡಿದ್ದಾರೆ. ಇದರಿಂದ ವಿದ್ಯಾರ್ಥಿಗಳಿಗೆ ಯಾವುದೇ ಲಾಭ ಆಗುವುದಿಲ್ಲ. ಬದಲಿಗೆ ನಷ್ಟ ಹೆಚ್ಚಾಗಲಿದೆ ಎಂದರು. ಪಿಯುಸಿ ಪರೀಕ್ಷೆಗಳನ್ನು ಎಸ್‌ಎಸ್‌ಎಲ್‌ಸಿ ಪರೀಕ್ಷಾಂಗ ವಿಭಾಗಕ್ಕೆ ವಹಿಸಿದ ಮೇಲೆ ಸರಿಯಾದ ರೀತಿಯಲ್ಲಿ ಪರೀಕ್ಷೆ ನಡೆಯುತ್ತಿಲ್ಲ. ಮೌಲ್ಯ ಮಾಪನ ದರ ಭತ್ಯೆ ಮೊದಲಾದ ವ್ಯವಸ್ಥೆಗಳು ಸರಿಯಾಗಿ ಆಗುತ್ತಿಲ್ಲ ಎಂದು ಹೇಳಿದರು.

ಹೀಗೆ ವಹಿಸುವುದರಿಂದ ಗುಣಾತ್ಮಕ ಶಿಕ್ಷಣಕ್ಕೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆ ಆಗಲಿದೆ. ಈಗ ಯಾವುದೇ ಅಧಿಕಾರ ಕೊಟ್ಟಿಲ್ಲವೆಂದು ಹೇಳಿದರೂ ಶಾಸನ ಬದ್ಧ ಅಧಿಕಾರ ಕೊಡುವ ಹುನ್ನಾರ ಇದಾಗಿದೆ. ಇದನ್ನು ಯಾವುದೇ ಕಾರಣಕ್ಕೂ ಜಾರಿಗೊಳಿಸದೇ ಇಂತಹ ಸುತ್ತೋಲೆಗಳನ್ನು ವಾಪಾಸ್‌ ಪಡೆಯಬೇಕೆಂದು ಆಗ್ರಹಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್‌ ನೇತೃತ್ವದಲ್ಲಿ ಕುಸಿದಿರುವ ವಿಜ್ಞಾನ ಕಾಲೇಜಿನ ಕಟ್ಟಡ ಹೊಸ ನಿರ್ಮಾಣಕ್ಕೆ ಹಾಗೂ ಪಾರಂಪರಿಕ ಕಟ್ಟಡ ನವೀಕರಣಕ್ಕೆ 51ಕೋಟಿ ರೂ. ನೀಡಲು ಒಪ್ಪಿಗೆ ನೀಡಿದ್ದಾರೆ. 600 ಮಂದಿ ವಿದ್ಯಾರ್ಥಿನಿಯರಷ್ಟೇ ವಾಸ ಮಾಡಲು ಯೋಗ್ಯವಾಗಿರುವ ಕಟ್ಟಡವನ್ನು ಪರಿಶೀಲಿಸಿ 99 ಕೋಟಿ ರೂ. ವೆಚ್ಚದಲ್ಲಿ 2ಸಾವಿರ ವಿದ್ಯಾರ್ಥಿನಿಯರ ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಾಣಕ್ಕೆ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡ ಕಿಲಾರೆ ಜಯರಾಂ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ