ಸುದ್ದಿಮೂಲ ವಾರ್ತೆ ಬೆಂಗಳೂರು, ಡಿ.04:
ದೆಹಲಿ ಕಾರು ಸ್ಫೋೋಟ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು ಇಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೂ ಭೇಟಿ ನೀಡಿದ್ದರು.
ದೆಹಲಿ ಸ್ಪೋೋಟಕ್ಕೂ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಉಗ್ರ ಮೊಬೈಲ್ ಬಳಕೆ ಮಾಡಿರುವುದಕ್ಕೂ ಸಂಬಂಧ ಇದೆಯಾ ಎಂಬ ಅನುಮಾನದ ಮೇಲೆ ಈ ಬಗ್ಗೆೆ ಹೆಚ್ಚಿಿನ ತನಿಖೆ ನಡೆಸಲು ಎನ್ಐಎ ಅಧಿಕಾರಿಗಳು ಪರಪ್ಪನ ಅಗ್ರಹಾರಕ್ಕೆೆ ಭೇಟಿ ನೀಡಿ ತಪಾಸಣೆ ನಡೆಸಿದರು.
ಇತ್ತೀಚೆಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಉಗ್ರರು ಹಾಗೂ ರೌಡಿಶೀಟರ್ಗಳು ಮೊಬೈಲ್ ಉಪಯೋಗಿಸುತ್ತಿಿದ್ದರು ಎಂಬ ವಿಡಿಯೋ ವೈರಲ್ ಆಗಿತ್ತು. ಈ ವಿಚಾರ ಕರ್ನಾಟಕ ಸರ್ಕಾರಕ್ಕೂ ತಲೆನೋವಾಗಿತ್ತು. ಜುಹಾದ್ ಹಮೀದ್ ಶಕೀಲ್ ಮನ್ನಾಾ ಕೈಯಲ್ಲಿ ಮೊಬೈಲ್ ಇರುವ ವಿಡಿಯೋ ವೈರಲ್ ಆಗುತ್ತಿಿದ್ದಂತೆ ಎನ್ಐಎ ಅಧಿಕಾರಿಗಳು ಬೆಂಗಳೂರು ಜೈಲಿಗೆ ಭೇಟಿ ನೀಡಿ ತನಿಖೆ ನಡೆಸಿದ್ದರು.
ಈ ತನಿಖೆಯ ಸ್ವಲ್ಪ ಸಮಯದ ನಂತರ ದೆಹಲಿಯಲ್ಲಿ ಕಾರು ಬ್ಲಾಾಸ್ಟ್ ಆಗಿದೆ. ಇದೀಗ ಬೆಂಗಳೂರು ಜೈಲಿನಲ್ಲಿರುವ ಉಗ್ರನಿಗೂ ದೆಹಲಿ ಬ್ಲಾಾಸ್ಟ್ಗೂ ಸಂಬಂಧ ಇರಬಹುದು ಎಂಬ ಅನುಮಾನದ ಮೇಲೆ ಎನ್ಐಎ ಅಧಿಕಾರಿಗಳು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು ಎನ್ನಲಾಗಿದೆ.
ಈ ವೇಳೆ ಜುಹಾದ್ ಹಮೀದ್ ಶಕೀಲ್ ಮನ್ನಾಾ ವಿಚಾರಣೆಯನ್ನು ಕೂಡ ಎನ್ಐಎ ಅಧಿಕಾರಿಗಳು ನಡೆಸಿದ್ದಾರೆ. ಅಧಿಕಾರಿಗಳು ಈಗಾಗಲೇ ಹಲವು ಮಾಹಿತಿಗಳನ್ನು ಹಾಗೂ ದಾಖಲೆಗಳನ್ನು ಪಡೆದುಕೊಂಡು, ಈ ಉಗ್ರ ಜೈಲಿನಲ್ಲಿದ್ದುಕೊಂಡು ಯಾರನ್ನೆೆಲ್ಲ ಸಂಪರ್ಕಿಸಿದ್ದಾನೆ ಎಂಬ ಮಾಹಿತಿಯನ್ನು ಅಧಿಕಾರಿಗಳು ಪಡೆದುಕೊಂಡಿದ್ದಾರೆ. ಜತೆಗೆ ದೆಹಲಿ ಸ್ಫೋೋಟದ ಬಗ್ಗೆೆಯೂ ಅಧಿಕಾರಿಗಳು ಜುಹಾದ್ ಹಮೀದ್ ಶಕೀಲ್ ಮನ್ನಾಾ ಬಳಿ ವಿವರಣೆ ಪಡೆದಿದ್ದಾರೆ ಎನ್ನಲಾಗಿದೆ.

