ಸುದ್ದಿಮೂಲ ವಾರ್ತೆ
ಬೆಂಗಳೂರು, ಜು.24: ಭಾರತ್ ಮಾಲಾ ಪರಿಯೋಜನೆಯಡಿ ನಿರ್ಮಿಸಲಾಗುತ್ತಿರುವ ಬೆಂಗಳೂರು-ಚೆನ್ನೈ ಎಕ್ಸ್ ಪ್ರೆಸ್ ಮಾರ್ಗದ ನಿರ್ಮಾಣ ಕಾರ್ಯ ಚುರುಕಿನಿಂದ ಸಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ತಮ್ಮ ಟ್ವೀಟ್ ಸಂದೇಶದಲ್ಲಿ ಅವರು, 1,160 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಈ ಹೆದ್ದಾರಿಯಿಂದ ಎರಡು ರಾಜ್ಯಗಳ ರಾಜಧಾನಿಗಳ ನಡುವಿನ ಪ್ರಯಾಣದ ಅವಧಿ ತಗ್ಗಲಿದೆ ಎಂದು ತಿಳಿಸಿದ್ದಾರೆ.
ಹಲವು ವಿಶೇಷತೆಗಳನ್ನು ಹೊಂದಿರುವ ಈ ಹೆದ್ದಾರಿಯು ಹೆಚ್ಚಿನ ಬಾಳಿಕೆ ಹಾಗೂ ಸದೃಢತೆಯನ್ನು ಹೊಂದುವಂತೆ ನಿರ್ಮಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ತಮ್ಮ ಟ್ವೀಟ್ ಸಂದೇಶದಲ್ಲಿ ತಿಳಿಸಿದ್ದಾರೆ.
ಕರ್ನಾಟಕ, ಆಂಧ್ರ ಪ್ರದೇಶ ಹಾಗೂ ತಮಿಳುನಾಡಿನ ಪ್ರಮುಖ ನಗರಗಳಲ್ಲಿ ಹಾದು ಹೋಗುವ ಈ ಹೆದ್ದಾರಿಯಿಂದ ಎರಡನೇ ಹಂತದ ನಗರಗಳಿಗೆ ಅನುಕೂಲವಾಗಲಿದೆ.