ಸುದ್ದಿಮೂಲ ವಾರ್ತೆ
ಬೆಂಗಳೂರು, ಜೂನ್ 10
ತುಂಗಭದ್ರಾ ಎಡದಂಡೆ ನಾಲೆಯಿಂದ ಕುಡಿಯುವ ನೀರಿನ ಅವಲಂಬಿತ ಪಟ್ಟಣಗಳಿಗೆ ನೀರಿನ ಸರಬರಾಜು ಮಾಡಲು ತಕ್ಷಣವೇ ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆ ಮಾಡಲು ಪ್ರಾದೇಶಿಕ ಆಯುಕ್ತರಿಗೆ ಸಚಿವ ಎನ್ಎಸ್ ಬೋಸರಾಜು ಅವರು ಸೂಚಿಸಿದ್ದಾರೆ.
ಈ ಕುರಿತಂತೆ ಪ್ರಾದೇಶಿಕ ಆಯುಕ್ತರೊಂದಿಗೆ ಚರ್ಚಿಸಿ. ರಾಯಚೂರು ಜಿಲ್ಲೆಯ ಸಿಂಧನೂರು ಮಾನ್ವಿ ರಾಯಚೂರು ಸೇರಿದಂತೆ ಹಲವು ಪಟ್ಟಣಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗಿದ್ದು ಹೀಗಾಗಿ ತುಂಗಭದ್ರ ಜಲಾಶಯದಿಂದ ಎಡದಂಡೆ ನಾಲೆಗೆ ನೀರು ಬಿಡುವ ಮೂಲಕ ನೀರಿನ ಸಮಸ್ಯೆ ಪರಿಹಾರ ಮಾಡಬೇಕಾಗಿದೆ ಎಂದು ಪ್ರಾದೇಶಿಕ ಆಯುಕ್ತರಿಗೆ ತಿಳಿಸಿದರು.
ಅತೀ ಶೀಘ್ರದಲ್ಲಿ ನಾಲಿಗೆ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗುವುದೆಂದು ಆಯುಕ್ತರು ತಿಳಿಸಿದರು.
ಇದಲ್ಲದೆ ನೀರಿನ ಸಂಗ್ರಹ ಸಾಮರ್ಥ್ಯ ಮತ್ತಿತರ ವಿಷಯಗಳ ಕುರಿತಂತೆ ತುಂಗಭದ್ರಾ ಜಲಾಶಯದ ಮುಖ್ಯ ಅಭಿಯಂತರ ಜೊತೆಗೆ ಸಚಿವ ಎನ್ ಎಸ್ ಬೋಸರಾಜು ಅವರು ಚರ್ಚಿಸಿ ನೀರು ಬಿಡುಗಡೆಗೆ ಬೇಕಾಗುವ ಅಗತ್ಯ ಕ್ರಮಗಳನ್ನು ಸಹ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ನಂತರ ರಾಯಚೂರು ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿ ಈ ವಿಷಯ ಅವರ ಗಮನಕ್ಕೆ ತಂದು ರಾಯಚೂರು, ಸಿಂಧನೂರು ಹಾಗೂ ವಿವಿಧ ಪಟ್ಟಣಗಳಿಗೆ ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.