ಸುದ್ದಿಮೂಲ ವಾರ್ತೆ
ಹೊಸಕೋಟೆ, ಜು 23 : ದೇಶದಲ್ಲಿ ಪ್ರತಿಯೊಬ್ಬರಿಗೂ ಪ್ರತಿಯೊಂದು ವಿಚಾರದಲ್ಲೂ ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳಲು ಕಾನೂನಿದ್ದು, ಅದರ ಬಳಕೆಯನ್ನು ನಾವೇ ಮಾಡಿಕೊಳ್ಳಬೇಕು ಎಂದು ಜೆಎಂಎಫ್ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಅರುಣ್ ಕುಮಾರ್.ಜಿ ತಿಳಿಸಿದರು.
ತಾಲೂಕಿನ ಕುಂಬಳಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ
ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಡೆದ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣೆ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಫೋಕ್ಸೋ ಕಾಯ್ದೆ ಪ್ರತಿ ಹಂತದಲ್ಲೂ ಹೆಣ್ಣು ಮಕ್ಕಳ ಹಿತಾಸಕ್ತಿಯನ್ನು ಕಾಪಾಡಲಿದೆ. ಪೋಕ್ಸೋ ಕಾಯ್ದೆ ಸಾಕಷ್ಟು ಬಲಿಷ್ಠವಾಗಿದ್ದರೂ ಕೂಡ ಸಾಕಷ್ಟು ಪೋಕ್ಸೋ ಪ್ರಕರಣಗಳು ವರದಿಯಾಗುತ್ತಿವೆ. ಪ್ರಕರಣ ತಡೆಗಟ್ಟಲು ಹಾಗೂ ದೌರ್ಜನಕ್ಕೊಳಗಾದ ಮಕ್ಕಳಿಗೆ ಸೂಕ್ತ ರಕ್ಷಣೆ ಪಡೆಯಲು ಕಾಯ್ದೆ
ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಜೆಎಂಎಎಫ್ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾ. ಬಸವರಾಜ್ ಜಿ ಸನದಿ ಮಾತನಾಡಿ, ಮನುಷ್ಯನ ರಕ್ಷಣೆಗಾಗಿ ಹಲವಾರು ಕಾನೂನುಗಳಿದ್ದರೂ ಕೂಡ ಕಾಲಕ್ಕೆ ಹಾಗೂ ಸಂದರ್ಭಕ್ಕೆ ತಕ್ಕಂತೆ ಬದಲಾಗುತ್ತವೆ. ಆ ಕಾನೂನುಗಳ ಬಗ್ಗೆ ಅರಿವು ಮೂಡಿಸುವ ದೃಷ್ಠಿಯಿಂದ ಸರ್ಕಾರದ ಆದೇಶದಂತೆ ಶಾಲೆಗಳಿಗೆ ತೆರಳಿ ಕಾನೂನು ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದೆವೆ. ಮಕ್ಕಳು ಎಂತಹ ಸಂದಿಗ್ದ ಪರಿಸ್ಥಿತಿಯಲ್ಲೂ ತಮ್ಮನ್ನು ತಾವು ರಕ್ಷಿಸಿಕೊಳ್ಳುವುದನ್ನು ಕರಗತ ಮಾಡಿಕೊಂಡಿರಬೇಕು. ಮೊದಲು ದೈಹಿಕವಾಗಿ, ಮಾನಸಿಕವಾಗಿ ಸದೃಡರಾಗಿರಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು ಕೂಡ ಮಕ್ಕಳಿಗೆ ಶಿಕ್ಷಣದ ಜೊತೆಗೆ ವೃದ್ದಿಸಬೇಕು ಎಂದರು.
ವಕೀಲರ ಸಂಘದ ಅಧ್ಯಕ್ಷ ಎಂ.ವೆಂಕಟಸ್ವಾಮಿ, ಉಪಾಧ್ಯಕ್ಷ ಕೆ.ನಾಗರಾಜ್, ಪ್ರ.ಕಾರ್ಯದರ್ಶಿ ಎಂ.ವಿ.ನವೀನ್ ಕುಮಾರ್, ಜಂಟಿ ಕಾರ್ಯದರ್ಶಿ ಟಿ.ಕೆ.ಮುನಿರಾಜು, ಖಜಾಂಚಿ ರವಿಕುಮಾರ್, ಸಂಪನ್ಮೂಲ ವ್ಯಕ್ತಿ ಅನಿತಾ ನಾಗರಾಜ್, ಮುಖ್ಯ ಶಿಕ್ಷಕಿ ಅನಸೂಯಮ್ಮ, ದೈಹಿಕ ಶಿಕ್ಷಕ ರಾಜೇಶ್, ಸಹ ಶಿಕ್ಷಕಿಯರಾದ ವಿದ್ಯಾ, ಆಶಾ,ಪುಷ್ಪರಾಣಿ, ಸುವರ್ಣ ಹಾಜರಿದ್ದರು.