ಸುದ್ದಿಮೂಲ ವಾರ್ತೆ ಸಿಂಧನೂರು, ಡಿ.26:
ಜ-3 ರಂದು ತಾಲೂಕಿನ ಸಿದ್ದಪರ್ವತ ಅಂಬಾಮಠದ ಅಂಬಾದೇವಿ ಜಾತ್ರಾಾ ಮಹೋತ್ಸವ ನಡೆಯಲಿದ್ದು, ಈ ಜಾತ್ರಾಾ ಮಹೋತ್ಸವದಲ್ಲಿ ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರು ಆಗಮಿಸುತ್ತಿಿರುವ ಹಿನ್ನೆೆಲೆಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕೆ.ನಿತೀಶ್ ಅವರು ಅಂಬಾಮಠಕ್ಕೆೆ ಭೇಟಿ ನೀಡಿ ಸಿದ್ಧತೆಗಳ ಪರೀಶೀಲಿಸಿದರು.
ಬಳಿಕ ಅಧಿಕಾರಿಗಳ ಸಭೆ ನಡೆಸಿ, ಮುಖ್ಯಮಂತ್ರಿಿ ಸಿದ್ದರಾಮಯ್ಯ ಭೇಟಿ ಹಾಗೂ ಅಂಬಾಮಠ ಜಾತ್ರಾಾ ಮಹೋತ್ಸವದ ಸಿದ್ಧತೆಗಳ ಕುರಿತು ಸಮಗ್ರವಾಗಿ ಚರ್ಚಿಸಿದರು. ಅಂಬಾಮಠದ ಜಾತ್ರಾಾ ಮಹೋತ್ಸವಕ್ಕೆೆ ಅಂತಾರಾಜ್ಯ ಸೇರಿ ರಾಜ್ಯದ ವಿವಿಧ ಭಾಗಗಳಿಂದ 4 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆ ಇದೆ ಯಾವುದೇ ಅಡಚಣೆಗಳು ಉಂಟಾಗದಂತೆ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಈ ವೇಳೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ಕಟ್ಟುನಿಟ್ಟಾಾಗಿ ಸೂಚನೆ ನೀಡಿದರು.
ಆರೋಗ್ಯ ಕೇಂದ್ರಗಳನ್ನು ತೆರೆಯಿರಿ:
ಜಾತ್ರಾಾ ಸ್ಥಳ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ, ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆೆ, ಅಗತ್ಯವಿರುವ ಕಡೆಗಳಲ್ಲಿ ಆರೋಗ್ಯ ಶಿಬಿರಗಳು ಮತ್ತು ಪ್ರಾಾಥಮಿಕ ಚಿಕಿತ್ಸೆೆ ಕೇಂದ್ರಗಳ ಸ್ಥಾಾಪನೆ ಮಾಡುವಂತೆ ತಾಲೂಕಾ ಆರೋಗ್ಯಾಾಧಿಕಾರಿಗೆ ಸೂಚಿಸಿದರು.
ಭಕ್ತರಿಗೆ ಯಾವುದೇ ಆರೋಗ್ಯ ಸಮಸ್ಯೆೆಗಳು ಎದುರಾಗದಂತೆ ಆರೋಗ್ಯ ಇಲಾಖೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು. ಬಂದೂಬ್ತ್ ಕಲ್ಪಿಿಸಿ: ಜಾತ್ರಾಾ ಮಹೋತ್ಸವದ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆೆ ಕಾಪಾಡುವಲ್ಲಿ ಪೊಲೀಸ್ ಇಲಾಖೆ ಪ್ರಮುಖ ಪಾತ್ರ ವಹಿಸಬೇಕು. ಜನಸಂದಣಿ ನಿಯಂತ್ರಣ, ವಾಹನ ಸಂಚಾರ ವ್ಯವಸ್ಥೆೆ, ತುರ್ತು ಪರಿಸ್ಥಿಿತಿಗಳಿಗೆ ತಕ್ಷಣ ಸ್ಪಂದಿಸುವ ವ್ಯವಸ್ಥೆೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕೆಂದು ಜಿಲ್ಲಾಧಿಕಾರಿ ಕೆ.ನಿತೀಶ್ ಸೂಚಿಸಿದರು.
ಸಭೆಯಲ್ಲಿ ತಹಶೀಲ್ದಾಾರ ಅರುಣ ದೇಸಾಯಿ, ದೇವಸ್ಥಾಾನ ಮೇಲ್ವಿಿಚಾರಣಾ ಸಮಿತಿ ಅಧ್ಯಕ್ಷ ರಂಗನಗೌಡ ಗೊರೇಬಾಳ, ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರಶೇಖರ, ನಗರಸಭೆ ಪೌರಾಯುಕ್ತ ಪಾಂಡುರಂಗ ಇಟಗಿ ಹಾಗೂ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.
ಜ.3 ರಂದು ಅಂಬಾದೇವಿ ಜಾತ್ರಾಮಹೋತ್ಸವ ಸಿಎಂ ಆಗಮನ ಪೂರ್ವಸಿದ್ಧತೆ ಪರೀಶಿಲಿಸಿದ

