ಸುದ್ದಿಮೂಲ ವಾರ್ತೆ
ಬೆಂಗಳೂರು, ಏ.11: ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಕೆಎಸ್ಡಿಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸದಿಂತೆ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು, ಆದೇಶವನ್ನು ಏ.15ಕ್ಕೆ ಕಾಯ್ದಿರಿಸಲಾಗಿದೆ.
ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ಸೋಮವಾರ ಮಾಡಾಳ್ ಜಾಮೀನು ಅರ್ಜಿ ವಿಚಾರಣೆಗೆ ಬಂದಿತ್ತು. ವಾದ ಮತ್ತು ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಲಾಗಿದೆ.
ಈ ಮಧ್ಯೆ ಶಾಸಕರ ಪುತ್ರ ಮಾಡಾಳ್ ಪ್ರಶಾಂತ್ ಜಾಮೀನು ಅರ್ಜಿಯನ್ನು ಸಹ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ. ಕೆಎಸ್ಡಿಎಲ್ ಟೆಂಡರ್ಗಾಗಿ ಲಂಚ ಪಡೆದ 3ನೇ ಆರೋಪಿ ಸುರೇಂದ್ರಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.