ಸುದ್ದಿಮೂಲವಾರ್ತೆ
ಕೊಪ್ಪಳ ಜು 20:ಇಂದು ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಹುಲಿಹೈದರ್ ಗ್ರಾಮ ಪಂಚಾಯತಿಗೆ ಅನಿರೀಕ್ಷಿತ ಭೇಟಿ ನೀಡಿದ ಮುಖ್ಯ ಕಾರ್ಯನಿರ್ವಧಿಕಾರಿ ರಾಹುಲ್ ರತ್ನಂ ಪಾಂಡೆಯ ಗ್ರಾಮ ಪಂಚಾಯತಿಯ ಬಾಪೂಜಿ ಸೇವ ಕೇಂದ್ರಕ್ಕೆ ಭೇಟಿ ನೀಡಿ ಗೃಹಲಕ್ಷ್ಮಿ ಯೋಜನೆಯ ಅರ್ಜಿಗಳನ್ನು ನೋಂದಾಯಿಸುವ ಕುರಿತು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ಮತ್ತು ಅಂಗನವಾಡಿ ಕಾರ್ಯಕರ್ತರಿಗೆ ಫಲಾನುಭವಿಗಳ ಪಟ್ಟಿ ಪಡೆದು ಅವರನ್ನು ಸಂಪರ್ಕಿಸಿ ಅರ್ಜಿಗಳನ್ನು ನೋಂದಾಯಿಸಲು ಸೂಚಿಸಿದರು.
ಈ ಸಂದರ್ಭದಲ್ಲಿ ಕನಕಗಿರಿ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರ ಮಗಳಾದ ಚಂದ್ರಶೇಖರ್ ಬಿ ಕಂದಕೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮರೇಶ್ ರಾಥೋಡ್ , ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ಸುಕನ್ಯ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.