ಸುದ್ದಿಮೂಲ ವಾರ್ತೆ
ಬೆಂಗಳೂರು, ಜೂ.16: ಪ್ರಸಕ್ತ ಸಾಲಿನ ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿರುವ ಪರಿಶ್ರಮ ನೀಟ್ ಅಕಾಡೆಮಿಯ ವಿದ್ಯಾರ್ಥಿಗಳು ಉತ್ತಮ ರ್ಯಾಂಕ್ ಗಳಿಸುವ ಮೂಲಕ ಪ್ರತಿಷ್ಠಿತ ರಾಜ್ಯ ಹಾಗೂ ರಾಷ್ಟçಮಟ್ಟದ ವೈದೈಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಸಾಧ್ಯತೆ ಇದೆ. ವರ್ಷದಿಂದ ವರ್ಷಕ್ಕೆ ಹೆಚ್ಚು ರ್ಯಾಂಕ್ಗಳನ್ನು ಗಳಿಸುತ್ತಿದ್ದು, ಈ ವರ್ಷದ ಫಲಿತಾಂಶವೇ ಇದಕ್ಕೆ ಸಾಕ್ಷಿ.
ಸಂಸ್ಥೆಯ ಸಂಸ್ಥಾಪಕ ನಿರ್ದೇಶಕರಾದ ಪ್ರದೀಪ್ ಈಶ್ವರ್ ಅವರ ಛಲ, ಶ್ರಮ, ಬದ್ಧತೆ, ಬೋಧಕ ಸಿಬ್ಬಂದಿಗಳ ಸಹಕಾರ ಎಲ್ಲವೂ ಒಟ್ಟುಗೂಡಿ ಕೇವಲ 5 ವರ್ಷಗಳಲ್ಲಿ ಕರ್ನಾಟಕ ಅಷ್ಟೇ ಅಲ್ಲ, ದೇಶವ್ಯಾಪಿ ಉತ್ತಮ ಹೆಸರು ಗಳಿಸುತ್ತಿದೆ. ಇದಕ್ಕೆ ಕಾರಣ ಇಲ್ಲಿನ ವಿದ್ಯಾರ್ಥಿಗಳು ಈಗಾಗಲೇ ದೇಶದ ವಿವಿಧೆಡೆ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವುದು.
ಪರಿಶ್ರಮ ನೀಟ್ ಅಕಾಡೆಮಿಯ ವಿದ್ಯಾರ್ಥಿಗಳಾದ ಸೃಜನ್ ಜೆ., ಶ್ರೇಯಾ ಜಿ.ಎಸ್., ವರ್ಷಾ ಎನ್.ಜಿ., ಸೌಜನ್ಯ ಜಿ.ಎಸ್, ಸಚಿನ್ ಬಿ. ಗಡ್ಡದವರ್ ಹಾಗೂ ರಾಹುಲ್ ಕೋಣಿ ಅವರುಗಳು ಹೆಚ್ಚಿನ ಅಂಕ ಗಳಿಸುವ ಮೂಲಕ ಸಾಧನೆ ತೋರಿದ್ದಾರೆ.
ವಿದ್ಯಾರ್ಥಿಗಳ ಕಠಿಣ ಪರಿಶ್ರಮ ಹಾಗೂ ಉತ್ತಮ ಬೋಧಕ ಸಿಬ್ಬಂದಿಗಳ ಸಹಕಾರದಿಂದ ವಿದ್ಯಾರ್ಥಿಗಳ
ಸಾಧನೆ ಸಾಧ್ಯವಾಯಿತು ಎಂದು ಸಂಸ್ಥೆಯ ಸಂಸ್ಥಾಪಕ ನಿರ್ದೇಶಕರಾದ ಪ್ರದೀಪ್ ಈಶ್ವರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.