ಸುದ್ದಿಮೂಲ ವಾರ್ತೆ ಬೆಂಗಳೂರು, ನ.08:
ಚಿತ್ರದುರ್ಗದ ರೇಣುಕಾಸ್ವಾಾಮಿ ಕೊಲೆ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಪವಿತ್ರಾಾಗೌಡ ಅವರ ಜಾಮೀನು ಅರ್ಜಿಯ ತೀರ್ಪಿನ ಮರುಪರಿಶೀಲನಾ ಮನವಿಯನ್ನು ಸುಪ್ರೀೀಂ ಕೋರ್ಟ್ ವಜಾ ಮಾಡಿದೆ.
ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದನ್ನು ಬದಿಗೆ ಸರಿಸಿ ಆ.14ರಂದು ಮಾಡಿರುವ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಪವಿತ್ರಾಾಗೌಡ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಆರ್.ಮಹಾದೇವನ್ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಪವಿತ್ರಾಾ ಗೌಡ, ನಟ ದರ್ಶನ್ ಸೇರಿದಂತೆ ಏಳು ಮಂದಿಗೆ ಜಾಮೀನು ಮಂಜೂರು ಮಾಡಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು 14-8-2025ರಂದು ಪುರಸ್ಕರಿಸಲಾಗಿತ್ತು. ಈ ತೀರ್ಪು ಮತ್ತು ಸಂಬಂಧಿತ ದಾಖಲೆಗಳನ್ನು ಅತ್ಯಂತ ಜಾಗರೂಕತೆಯಿಂದ ಪರಿಶೀಲಿಸಲಾಗಿದೆ. ನಮ್ಮ ಅಭಿಪ್ರಾಾಯದಲ್ಲಿ ಆ ತೀರ್ಪನ್ನು ಮರು ಪರಿಶೀಲಿಸುವ ಅಗತ್ಯವಿಲ್ಲ. ಹೀಗಾಗಿ, ಮರುಪರಿಶೀಲನಾ ಅರ್ಜಿ ವಜಾಗೊಳಿಸಲಾಗಿದೆ ಎಂದು ನ್ಯಾಾಯಾಲಯ ಆದೇಶಿಸಿದೆ.
ಆ.14ರಂದು ಸುಪ್ರೀೀಂ ಕೋರ್ಟ್ ಪೀಠವು ಹೈಕೋರ್ಟ್ ಆದೇಶ ವಿಕ್ಷಿಪ್ತ ದೋಷಗಳಿಂದ ಕೂಡಿದೆ. ಹೈಕೋರ್ಟ್ ಆದೇಶ ಅಧಿಕಾರದ ಯಾಂತ್ರಿಿಕ ಬಳಕೆಯನ್ನು ಬಿಂಬಿಸುತ್ತದೆ… ಜಾಮೀನು ಮಂಜೂರು ಮಾಡಿದರೆ ಅದು ವಿಚಾರಣೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಉಂಟಾಗಬಹುದು ಎಂದು ತೀರ್ಪು ನೀಡಿತ್ತು.
ಚಿತ್ರದುರ್ಗ ಮೂಲದ 33 ವರ್ಷದ ರೇಣುಕಸ್ವಾಾಮಿ ಅವರ ಮೃತದೇಹ 2024ರ ಜೂನ್ 9 ರಂದು ಬೆಂಗಳೂರಿನ ಸುಮನಹಳ್ಳಿಿ ಬಳಿಯ ಚರಂಡಿಯೊಂದರಲ್ಲಿ ಪತ್ತೆೆಯಾಗಿತ್ತು. ದರ್ಶನ್ ಸೂಚನೆ ಮೇರೆಗೆ ನಡೆದ ಹಲ್ಲೆಯಲ್ಲಿ ಉಂಟಾದ ಗಾಯಗಳಿಂದಾಗಿ ಅವರು ಸಾವನ್ನಪ್ಪಿಿದ್ದಾರೆ ಎಂದು ಆರೋಪಿಸಲಾಗಿತ್ತು.
ಪವಿತ್ರಾಾ ಗೌಡ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ರೇಣುಕಾಸ್ವಾಾಮಿ ಅಶ್ಲೀಲ ಸಂದೇಶ ಕಳುಹಿಸಿದ್ದ ಹಿನ್ನೆೆಲೆಯಲ್ಲಿ ದರ್ಶನ್ ಸೂಚನೆ ಮೇರೆಗೆ ಆತನನ್ನು ದರ್ಶನ್ ಸಹಚರರು ಅಪಹರಿಸಿ ಬೆಂಗಳೂರಿನ ಶೆಡ್ ಒಂದರಲ್ಲಿ ಹಲ್ಲೆ ನಡೆಸಿ ಹತ್ಯೆೆಗೈಯಲಾಗಿತ್ತು. ಖುದ್ದು ದರ್ಶನ್ ಸಹ ಹಲ್ಲೆ ನಡೆಸಿದ್ದರು ಎಂದು ಅರೋಪಿಸಲಾಗಿತ್ತು.
ಕಳೆದ ವರ್ಷ ಜೂನ್ 11 ರಂದು ದರ್ಶನ್ ಅವರನ್ನು ಬಂಧಿಸಲಾಗಿತ್ತು. ಕಳೆದ ವರ್ಷ ಅಕ್ಟೋೋಬರ್ 30ರಂದು, ವೈದ್ಯಕೀಯ ಆಧಾರದ ಮೇಲೆ ಹೈಕೋರ್ಟ್ ಅವರಿಗೆ ಆರು ವಾರಗಳ ಮಧ್ಯಂತರ ಜಾಮೀನು ನೀಡಿತ್ತು. ತರುವಾಯ, ಡಿಸೆಂಬರ್ 13, 2024 ರಂದು ದರ್ಶನ್, ಪವಿತ್ರಾಾ ಮತ್ತು ಇತರ ಐದು ಆರೋಪಿಗಳಿಗೆ ನಿಯಮಿತ ಜಾಮೀನು ದೊರೆತಿತ್ತು. ಇದೇ ಪ್ರಕರಣದಲ್ಲಿ ಈಚೆಗೆ ವಿಚಾರಣಾಧೀನ ನ್ಯಾಾಯಾಲಯವು ಪವಿತ್ರಾಾ ಗೌಡ, ನಟ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳ ವಿರುದ್ಧ ಆರೋಪ ನಿಗದಿ ಮಾಡಿದೆ.

