ಚಿಕ್ಕಬಳ್ಳಾಪುರ, ಜೂ.11: ಮಾಜಿ ಶಾಸಕ ಬಚ್ಚೇಗೌಡ ಅವರ ರಾಜಕೀಯ ಕುತಂತ್ರದಿಂದ ಹಾಗೂ 5 ಗ್ಯಾರಂಟಿಗಳ ಘೋಷಣೆಯಿಂದ ಕಾಂಗ್ರೆಸ್ ಗೆದ್ದಿದೆ .ಆದರೂ, ನಾವು ಜನರ ವಿಶ್ವಾಸವನ್ನು ಉಳಿಸಿಕೊಂಡಿದ್ದೇವೆ ಎಂದು ಮಾಜಿ ಸಚಿವ ಡಾ. ಕೆ ಸುಧಾಕರ್ ಅವರ ತಂದೆ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಪಿ.ಎನ್. ಕೇಶವರೆಡ್ಡಿ ಹೇಳಿದರು.
ಚಿಕ್ಕಬಳ್ಳಾಪುರ ತಾಲೂಕಿನ ಚಿಕ್ಕ ಪೈಲಗುರ್ಕಿಯ ಶ್ರೀ ಚನ್ನಕೇಶವ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ತಮ್ಮ 88ನೇ ಹುಟ್ಟುಹಬ್ಬವನ್ನು ಬಿಜೆಪಿ ಕಾರ್ಯಕರ್ತರೊಂದಿಗೆ ಆಚರಿಸಿಕೊಂಡರು.
ಬಳಿಕ ಮಾತನಾಡಿದ ಅವರು, ಡಾ. ಕೆ ಸುಧಾಕರ್ ಅವರು ತಮ್ಮದೇ ಆದ ರೀತಿಯಲ್ಲಿ ಸೇವೆಯನ್ನು ಮಾಡಿದ್ದಾರೆ. ಕ್ಷೇತ್ರದ ಜನ 75 ಸಾವಿರಕ್ಕೂ ಅಧಿಕ ಮತ ನೀಡಿದ್ದಾರೆ. ಆದರೆ, ಚುನಾವಣೆಯಲ್ಲಿ ಮಾಜಿ ಶಾಸಕ ಕೆ.ಪಿ ಬಚ್ಚೇಗೌಡರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ಹಾಕಿ ಎಂದು ಹೇಳಿದ ಪರಿಣಾಮದಿಂದಾಗಿ ನಾವು ಸೋತಿದ್ದೇವೆ ಎಂದು ಆರೋಪಿಸಿದರು.
ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಅಕ್ಕಿ ದೊರೆಯುತ್ತದೆ ಎಂದು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ ಅದು ಸಹ ನಾವು ಸೋಲಲು ಕಾರಣವಾಯಿತು. ಹೊರತು ಜನರ ಪ್ರೀತಿ ಕಮ್ಮಿಯಾಗಿಲ್ಲ ಮುಂದಿನ ಚುನಾವಣೆಗಳಲ್ಲಿ ಮತ್ತೊಮ್ಮೆ ಜಯ ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ ವಿ ನಾಗರಾಜ್, ಭಾಜಪ ಮುಖಂಡ ಆನಂದ್, ಗಿರೀಶ್ ಹರಿಸ್ಥಳ, ಚಿಕ್ಕಬಳ್ಳಾಪುರ ನಗರಸಭೆಯ ಮಾಜಿ ಅಧ್ಯಕ್ಷ ಡಿ.ಎಸ್.ಆನಂದರೆಡ್ಡಿ ಬಾಬು, ನಗರಸಭಾ ಸದಸ್ಯರು, ಬಿಜೆಪಿಯ ಮುಖಂಡರು ಉಪಸ್ಥಿತರಿದ್ದರು.
ಸಿಕೆಬಿಪಿ02
ಚಿಕ್ಕಬಳ್ಳಾಪುರ ತಾಲೂಕಿನ ಚಿಕ್ಕ ಪೈಲಗುರ್ಕಿಯ ಶ್ರೀ ಚನ್ನಕೇಶವ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಪಿ.ಎನ್. ಕೇಶವರೆಡ್ಡಿ ಅವರು ತಮ್ಮ 88ನೇ ಹುಟ್ಟುಹಬ್ಬವನ್ನು ಬಿಜೆಪಿ ಕಾರ್ಯಕರ್ತರೊಂದಿಗೆ ಆಚರಿಸಿಕೊಂಡರು.