ಸುದ್ದಿಮೂಲ ವಾರ್ತೆ ಉಡುಪಿ, ನ.27:
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ (ನ.28) ಉಡುಪಿಯ ಶ್ರೀಕೃಷ್ಣ ಮಠಕ್ಕೆೆ ಭೇಟಿ ನೀಡಲಿದ್ದು, ಅವರನ್ನು ಸ್ವಾಾಗತಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮಧ್ಯಾಾಹ್ನ 12 ಗಂಟೆಗೆ ಪ್ರಧಾನಿ ಮಠಕ್ಕೆೆ ಆಗಮಿಸಲಿದ್ದು, ಮೊದಲು ಕನಕದಾಸರಿಗೆ ಪುಷ್ಪಾಾರ್ಚನೆ ಮಾಡುವರು. ಬಳಿಕ ಕನಕನ ಕಿಂಡಿಗೆ ಹೊದಿಸಿರುವ ಚಿನ್ನದ ಕವಚ, ಸುವರ್ಣ ತೀರ್ಥ ಮಂಟಪ ಅನಾವರಣಗೊಳಿಸಲಿದ್ದಾರೆ.
ಪ್ರಧಾನಿಯನ್ನು ಪೂರ್ಣಕುಂಭ ಸ್ವಾಾಗತದೊಂದಿಗೆ ಬರಮಾಡಿಕೊಳ್ಳಲು ಕೃಷ್ಣಮಠ ಸಕಲ ರೀತಿಯಲ್ಲೂ ಸಜ್ಜಾಾಗಿದೆ. ಪ್ರಧಾನಿ ರೋಡ್ ಶೋ ಮೂಲಕ ಆದಿ ಉಡುಪಿಯಿಂದ ಕೃಷ್ಣಮಠಕ್ಕೆೆ ಬರಲಿದ್ದು, ಶ್ರೀಕೃಷ್ಣ ಮುಖ್ಯಪ್ರಾಾಣ ದೇವರ ಹಾಗೂ ಸುವರ್ಣ ಪಾದುಕೆಯ ದರ್ಶನ ಪಡೆಯಲಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಪರ್ಯಾಯ ಶ್ರೀಗಳು, ಸರ್ವಜ್ಞ ಪೀಠ, ಗೋಶಾಲೆ ದರ್ಶನ ಮಾಡಿದ ಬಳಿಕ ಅವರು ಗೀತಾಮಂದಿರಕ್ಕೆೆ ಭೇಟಿ ನೀಡುವರು. ಅಲ್ಲಿ ಲಘು ಉಪಹಾರ ಸೇವಿಸುವರು. ನಂತರ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊೊಂಡು ಲಕ್ಷ ಕಂಠ ಗೀತಾ ಕಾರ್ಯಕ್ರಮದ ಅಂಗವಾಗಿ ಭಗವದ್ಗೀತೆಯ 18ನೇ ಅಧ್ಯಾಾಯದ ಕೊನೆಯ ಕೆಲವು ಶ್ಲೋೋಕಗಳನ್ನು ಪಠಿಸಲಿದ್ದಾರೆ ಎಂದು ತಿಳಿಸಿದರು.
ಬಿಗಿ ಪೊಲೀಸ್ ಭದ್ರತೆ: ಪ್ರಧಾನಿ ಭೇಟಿ ಹಿನ್ನೆೆಲೆಯಲ್ಲಿ ಉಡುಪಿಯಾದ್ಯಂತ ಪೊಲೀಸ್ ಸರ್ಪಗಾವಲು ನಿಯೋಜಿಸಲಾಗಿದೆ. ಅಂದಾಜು 3000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.

