ಸುದ್ದಿಮೂಲ ವಾರ್ತೆ
ಮಂಗಳೂರು, ಅ. 27 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಆರೋಪದ ಅಡಿಯಲ್ಲಿ ಮಾಜಿ ಜಿ.ಪಂ. ಸದಸ್ಯ ಶೇಖರ ಕುಕ್ಕೇಡಿ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಲೆಕ್ಷನ್ ಮಾಸ್ಟರ್ (ಸಿ.ಎಂ) ಆಫ್ ಕರ್ನಾಟಕ ಎಂದು ಬರೆದು ಸಿ.ಎಂ ಸಿದ್ದರಾಮಯ್ಯ ಅವರ ಮತ್ತು ಬೆಂಗಳೂರಿನ ಸಿ.ಎಂ ನಿವಾಸದ ಫೊಟೋವನ್ನು ಫೇಸ್ ಬುಕ್ ನಲ್ಲಿ ಶಾಸಕ ಹರೀಶ್ ಪೂಂಜ ಅವರು ಪೋಸ್ಟ್ ಮಾಡಿದ್ದರು.
ಇನ್ನು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡ, ಮಾಜಿ ಜಿ.ಪಂ. ಸದಸ್ಯ ಶೇಖರ ಕುಕ್ಕೇಡಿ ಅವರು ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಬೆಳ್ತಂಗಡಿ ಠಾಣೆಯಲ್ಲಿ ಐಪಿಸಿ 1896u/s 504, 505(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.