ಸುದ್ದಿಮೂಲ ವಾರ್ತೆ ಬೆಂಗಳೂರು, ಡಿ.23:
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋೋತ್ಸವ ಜನವರಿ 29 ರಿಂದ ೆಬ್ರವರಿ 6ರ ವರೆಗೆ ನಡೆಯಲಿದೆ ಎಂದು ಮುಖ್ಯಮಂತ್ರಿಿ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದಲ್ಲಿ ಅಂತಾರಾಷ್ಟ್ರೀಯ ಚಲನ ಚಿತ್ರೋೋತ್ಸವ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸಿಎಂ ಸುದ್ದಿಗೋಷ್ಟಿಿಯಲ್ಲಿ ಮಾತನಾಡಿದರು.
ಕನ್ನಡ ಮತ್ತು ಇತರೆ ಭಾಷೆಗಳ ಭಾರತೀಯ ಚಿತ್ರಗಳೂ ಸೇರಿ ಒಟ್ಟಾಾರೆ 60ಕ್ಕೂ ಹೆಚ್ಚು ದೇಶಗಳ 400ಕ್ಕೂ ಹೆಚ್ಚು ಸಿನಿಮಾಗಳು ಪ್ರದರ್ಶನಗೊಳ್ಳಲಿವೆ ಹಿರಿಯ ಚಲನಚಿತ್ರ ಕಲಾವಿದ ಪ್ರಕಾಶ್ ರಾಜ್ ಅವರನ್ನು 17ನೇ ಅಂತಾರಾಷ್ಟ್ರೀಯ ಚಲನಚಿತ್ರೋೋತ್ಸವದ ರಾಯಭಾರಿಯಾಗಿ ಆಯ್ಕೆೆ ಮಾಡಲಾಗಿದೆ. ಅಂತಾರಾಷ್ಟ್ರೀಯ ಚಲನಚಿತ್ರೋೋತ್ಸವದ ಉದ್ಘಾಾಟನೆ ವಿಧಾನಸೌಧದ ಮುಂಭಾಗದ ಭವ್ಯ ಮೆಟ್ಟಿಿಲುಗಳ ಮೇಲೆ ನಡೆಯಲಿದೆ. ಈ ಬಾರಿಯ ಚಲನಚಿತ್ರೋೋತ್ಸವದಲ್ಲಿ ಮಹಿಳಾ ಸಬಲೀಕರಣ ಕುರಿತ ಥೀಮ್ ಇರಲಿದೆ ಎಂದರು.
ರಾಜಾಜಿನಗರದ ಲುಲುಮಾಲ್ನಲ್ಲಿರುವ ಸಿನಿ ಪೋಲಿಷನ್ 11 ಸ್ಕ್ರೀನ್ಗಳಲ್ಲಿ ಚಿತ್ರೋೋತ್ಸವದ ಚಲನಚಿತ್ರಗಳ ಪ್ರದರ್ಶನ ನಡೆಯಲಿದೆ. ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋೋತ್ಸವದಲ್ಲಿ ಏಷಿಯನ್, ಭಾರತೀಯ ಮತ್ತು ಕನ್ನಡ ಸಿನಿಮಾ ಸ್ಪರ್ಧಾತ್ಮಕ ವಿಭಾಗಗಳಿಗೆ ಚಲನಚಿತ್ರಗಳ ಅರ್ಜಿ ಸಲ್ಲಿಕೆ ಪ್ರಕ್ರಿಿಯೆ ಆರಂಭವಾಗಿದ್ದು, ಇದಕ್ಕೆೆ ಉತ್ತಮ ಸ್ಪಂದನೆ ಸಿಕ್ಕಿಿದೆ. ಈ ಮೂರು ಸ್ಪರ್ಧಾ ವಿಭಾಗಗಳಿಗೆ ಇದುವರೆಗೆ 110ಕ್ಕೂ ಹೆಚ್ಚು ಚಲನಚಿತ್ರಗಳು ಸಲ್ಲಿಕೆಯಾಗಿವೆ. ಚಲನಚಿತ್ರಗಳ ಸ್ಪರ್ಧಾತ್ಮಕ ವಿಭಾಗಗಳ ಅರ್ಜಿ ಸಲ್ಲಿಸಲು ಡಿಸೆಂಬರ್ 31, 2025 ಕಡೆಯ ದಿನ ಎಂದು ಮಾಹಿತಿ ನೀಡಿದರು.

