ಸುದ್ದಿಮೂಲ ವಾರ್ತೆ
ಬೆಂಗಳೂರು, ಮೇ 14: ಸಿಬಿಐ ನಿರ್ದೇಶಕರಾಗಿ ಹಿರಿಯ ಪೊಲೀಸ್ ಅಧಿಕಾರಿ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ನೇಮಕ ಮಾಡಿದ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಪ್ರಧಾನ ಮಂತ್ರಿ, ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿಯು ಪ್ರವೀಣ್ ಸೂದ್ ಅವರ ಹೆಸರನ್ನುಅಂತಿಮಗೊಳಿಸಿದೆ.
ಶನಿವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ ಮತ್ತು ವಿರೋಧ ಪಕ್ಷದ ನಾಯಕ ಕಾಂಗ್ರೆಸ್ನ ಅಧೀರ್ ರಂಜನೆ ಚೌದರಿ ಅವರನ್ನೊಳಗೊಂಡ ಸಭೆಯಲ್ಲಿ ಸಿಬಿಐ ನಿರ್ದೇಶಕ ಸ್ಥಾನಕ್ಕೆ ಪ್ರವೀಣ್ ಸೂದ್ ಅವರ ಹೆಸರನ್ನುಅಂತಿಮಗೊಳಿಸಿದೆ.
ಪ್ರಧಾನ ಮಂತ್ರಿ ಸಿಜೆಐ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸವಿತಿಯು ಎರಡು ವರ್ಷಗಳ ಅವಧಿಗೆ ಸಿಬಿಐ ನಿರ್ದೇಶಕರನ್ನುನೇಮಕ ಮಾಡಲಾಗಿದ್ದು, ಆ ಅವಧಿಯನ್ನು ಐದು ವರ್ಷಗಳಿಗೆ ವಿಸ್ತರಿಸಬಹುದು.