ಸುದ್ದಿಮೂಲ ವಾರ್ತೆ ರಾಯಚೂರು, ಜ.01:
ರಾಜ್ಯದ ಲೋಕಾಯುಕ್ತ ಗೌರವಾನ್ವಿಿತ ನ್ಯಾಾಯಮೂರ್ತಿ ಬಿ.ಎಸ್. ಪಾಟೀಲ್ ಅವರು ಜನವರಿ 07ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಹಮ್ಮಿಿಕೊಂಡ ನಿಮಿತ್ತ ಪೂರ್ವಭಾವಿ ಸಿದ್ಧತಾ ಸಭೆಯು ಜಿಲ್ಲಾಧಿಕಾರಿ ನಿತೀಶ್ ಕೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ನೂತನ ಜಿಲ್ಲಾಡಳಿತ ಭವನದಲ್ಲಿ ಜನವರಿ 1ರಂದು ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ಗೌರವಾನ್ವಿಿತ ಲೋಕಾಯುಕ್ತರ ಪ್ರವಾಸ ಕಾರ್ಯಕ್ರಮವು ಜಿಲ್ಲೆಯಲ್ಲಿ ಅಚ್ಚುಕಟ್ಟಾಾಗಿ ನಡೆಯಬೇಕು. ಯಾವುದೇ ಗೊಂದಲಗಳಿಗೆ ಮತ್ತು ಲೋಪಗಳಿಗೆ ಅವಕಾಶವಿರದ ಹಾಗೆ ಅಧಿಕಾರಿಗಳು ಜವಾಬ್ದಾಾರಿಯಿಂದ ಕಾರ್ಯನಿರ್ವಹಿಸಬೇಕು.
ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ಕಚೇರಿಯಲ್ಲಿದ್ದು ಕಾರ್ಯನಿರ್ವಹಿಸಬೇಕು. ಕಚೇರಿಯಲ್ಲಿ ಶಿಸ್ತು ಮತ್ತು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಸಭೆಯಲ್ಲಿ ಪಾಲಿಕೆಯ ಆಯುಕ್ತ ಜುಬಿನ್ ಮೊಹಪಾತ್ರ, ಅಪರ ಜಿಲ್ಲಾಧಿಕಾರಿ ಶಿವನಾಂದ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

