ಸುದ್ದಿಮೂಲ ವಾರ್ತೆ ನವದೆಹಲಿ, ೆ.09:
ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಾಸ ನಿರ್ಣಯ ಮಂಡಿಸಲು ಕಾಂಗ್ರೆೆಸ್ ಸೇರಿ ಇಂಡಿಯಾ ಒಕ್ಕೂಟದ ಮೈತ್ರಿಿ ಪಕ್ಷಗಳು ಮುಂದಾಗಿವೆ.
ಪ್ರಧಾನಿ ಮೋದಿ ವಿರುದ್ಧ ಕೆಲ ಸಂಸದರು ಅನಿರೀಕ್ಷಿತ ಕೃತ್ಯ ಎಸಗಲು ಸಂಚು ರೂಪಿಸಿದ್ದರು. ಹೀಗಾಗಿ ಪ್ರಧಾನಿ ಲೋಕಸಭೆಗೆ ಬರುವುದು ಬೇಡ ಎಂದು ಹೇಳಿಕೆ ನೀಡಿದ್ದ ಆರೋಪ ಮತ್ತು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷದವರಿಗೆ ಮಾತನಾಡಲು ಅವಕಾಶ ನೀಡಲಿಲ್ಲ ಎಂಬ ಕಾರಣ ನೀಡಿ ಸ್ಪೀಕರ್ ವಿರುದ್ಧ ಅವಿಶ್ವಾಾಸ ನಿರ್ಣಯಕ್ಕೆೆ ಮುಂದಾಗಿವೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವಿಶ್ವಾಾಸ ನಿರ್ಣಯದ ಕುರಿತು ಚರ್ಚೆ ನಡೆದಿದೆ. ಇಂಡಿಯಾ ಮೈತ್ರಿಿಕೂಟದ ಭಾಗವಲ್ಲದ ತೃಣಮೂಲ ಕಾಂಗ್ರೆೆಸ್ ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳು ಇದಕ್ಕೆೆ ಸಮ್ಮತಿಸಿವೆ ಎನ್ನಲಾಗಿದೆ. ಸಂಸತ್ತಿಿನಲ್ಲಿ ಅವಿಶ್ವಾಾಸ ನಿರ್ಣಯ ಮಂಡಿಸಲು ವಿರೋಧ ಪಕ್ಷಕ್ಕೆೆ 100 ಸಂಸದರ ಸಹಿ ಅಗತ್ಯವಿದೆ.

