ಸುದ್ದಿಮೂಲ ವಾರ್ತೆ ರಾಯಚೂರು, ಡಿ.04:
ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಡಿ ಇದೇ ಡಿ.21 ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಿಕೊಂಡಿದ್ದು, ಜಿಲ್ಲೆಯಲ್ಲಿ 5 ವರ್ಷದೊಳಗಿನ 2,55,257 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು, ಗುರಿ ತಲುಪಲು ಅಗತ್ಯ ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ನಿತೀಶ್ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಡಿಸೆಂಬರ್ 04 ಗುರುವಾರ ನಗರದ ನೂತನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಾಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಾಮೀಣ ಮತ್ತು ನಗರ ಪ್ರದೇಶದ ಎಲ್ಲ ಮಕ್ಕಳಿಗೆ ಪೋಲಿಯೋ ಲಸಿಕಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಜಿಲ್ಲೆಯಲ್ಲಿನ 0-5 ವರ್ಷದೊಳಗಿನ ಯಾವುದೇ ಮಗು ಲಸಿಕೆ ಸೌಲಭ್ಯದಿಂದ ಹೊರಗುಳಿಯಬಾರದು. ವಿವಿಧ ರಾಜ್ಯಗಳಿಂದ ಉದ್ಯೋೋಗ ಅರಸಿ ಬಂದಂತಹ ಕಾರ್ಮಿಕ ಕುಟುಂಬ ಮಕ್ಕಳನ್ನೂ ಗುರುತಿಸಿ ಲಸಿಕೆ ಹಾಕಬೇಕು ಎಂದು ತಿಳಿಸಿದರು.
ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆ ವಾಹನಗಳನ್ನು ನಿಗದಿತ ಸಮಯಕ್ಕೆೆ ನಿಯೋಜಿಸಬೇಕು. ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆೆ ಯಾವುದೇ ರೀತಿಯ ತೊಂದರೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಸೂಚಿಸಿದರು.
ಈ ಕಾರ್ಯಕ್ರಮ ವ್ಯಾಾಪಕ ಪ್ರಚಾರಕ್ಕಾಾಗಿ ಶಾಲಾ ಮಕ್ಕಳಿಂದ ಜಾಥಾ ಏರ್ಪಡಿಸುವುದರ ಮೂಲಕ ಸಾರ್ವಜನಿಕರಲ್ಲಿ ಪಲ್ಸ್ ಪೋಲಿಯೋ ಲಸಿಕೆ ಕುರಿತು ಜಾಗೃತಿ ಮೂಡಿಸಬೇಕು. ಸ್ಥಳೀಯ ಸಂಸ್ಥೆೆಗಳ ವತಿಯಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮದ ಕುರಿತು ಆಡಿಯೋ ಮೂಲಕ ಕಸ ವಿಲೇವಾರಿ ವಾಹನಗಳಲ್ಲಿ ಪ್ರಚುರಪಡಿಸಬೇಕು ಎಂದು ತಿಳಿಸಿದರು.
ಗ್ರಾಾಮೀಣ ಭಾಗದ ಮಕ್ಕಳನ್ನು ಮರೆಯಬೇಡಿ: ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ ಅವರು ಮಾತನಾಡಿ, ಜಿಲ್ಲೆಯಲ್ಲಿನ ಯಾವುದೇ ಒಬ್ಬ ಮಗು ಸಹ ಲಸಿಕೆಯಿಂದ ಹೊರಗುಳಿಯಬಾರದು. ವಿಶೇಷವಾಗಿ ಗ್ರಾಾಮೀಣ ಮತ್ತು ಹೊಲಗಳಲ್ಲಿ ವಾಸಿಸುತ್ತಿಿರುವ ಮಕ್ಕಳನ್ನು ಗಮನಹರಿಸಿ ಅವರಿಗೂ ಕೂಡ ಪಲ್ಸ್ ಪೋಲಿಯೋ ಲಸಿಕೆ ನೀಡಬೇಕು. ಗ್ರಾಾಮೀಣ ಪ್ರದೇಶಗಳಲ್ಲಿ ಕೂಲಿ ಕೆಲಸಕ್ಕೆೆ ತೆರಳುವ ಕಾರ್ಮಿಕರು ತಮ್ಮ ಮಕ್ಕಳನ್ನು ಕೆಲಸದ ಸ್ಥಳಗಳಲ್ಲಿ ಕಾಣ ಸಿಗುತ್ತಾಾರೆ. ಅವರನ್ನು ಗುರುತಿಸಿ ಪ್ರತಿಯೊಂದು ಮಗುವಿಗೂ ಲಸಿಕೆ ನೀಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಾಣ ಇಲಾಖೆಯ ಅಧಿಕಾರಿ ಡಾ.ಸುರೇಂದ್ರ ಬಾಬು, ಜಿಲ್ಲಾ ಶಸಚಿಕಿತ್ಸಕ ಡಾ.ವಿಜಯಶಂಕರ್, ಜಿಲ್ಲಾ ಆರ್.ಸಿ.ಹೆಚ್.ಅಧಿಕಾರಿ ಡಾ.ನಂದಿತಾ ಎಮ್.ಎನ್, ಅಲ್ಪಸಂಖ್ಯಾಾತರ ಕಲ್ಯಾಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರವೀಣ್ ಕುಮಾರ್, ಕಾರ್ಮಿಕ ಇಲಾಖೆಯ ಜಿಲ್ಲಾ ಅಧಿಕಾರಿ ಆರತಿ, ಪರಿಶಿಷ್ಟ ಪಂಗಡಗಳ ಕಲ್ಯಾಾಣ ಇಲಾಖೆಯ ಅಧಿಕಾರಿ ಶಿವಮಾನ್ಯಪ್ಪ, ಡಬ್ಲ್ಯುಹೆಚ್ಓ ಡಾ.ಅನೀಲ್ ತಾಳಿಕೊಟೆ, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಗಣೇಶ್, ಕುಟುಂಬ ಕಲ್ಯಾಾಣ ಅಧಿಕಾರಿ ಡಾ.ಶಿವಕುಮಾರ್, ಟಿಬಿ ಅಧಿಕಾರಿ ಡಾ.ಎಂ.ಡಿ.ಸಾಜೀದ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸಯ್ಯ ಸೇರಿದಂತೆ ಆರೋಗ್ಯ ಇಲಾಖೆಯ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಭೆಯಲ್ಲಿ ಇದ್ದರು.
ಪಲ್ಸ್ ಪೋಲಿಯೋ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆ ಪಲ್ಸ್ ಪೋಲಿಯೋ ಗುರಿ ತಲುಪಲು ಅಗತ್ಯ ಕ್ರಮವಹಿಸಿ: ಜಿಲ್ಲಾಧಿಕಾರಿ ನಿತೀಶ್ ಕೆ.

