ರಾಷ್ಟ್ರಪತಿ ಅಭಿನಂದಿಸಿದ ಸಿದ್ದರಾಮಯ್ಯ
ಸುದ್ದಿಮೂಲ ವಾರ್ತೆ
ನವದೆಹಲಿ, ಜೂ.21: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸೌಹಾರ್ದ ಭೇಟಿ ಮಾಡಿದರು.
ಮುಖ್ಯಮಂತ್ರಿಯಾದ ಬಳಿಕ ಇದೇ ಪ್ರಥಮ ಬಾರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ವಸತಿ, ವಕ್ಫ್, ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಹಾಗೂ ನಗರ ಅಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ರವರು ಉಪಸ್ಥಿತರಿದ್ದರು