ಸುದ್ದಿಮೂಲ ವಾರ್ತೆ
ಶಿಡ್ಲಘಟ್ಟ, ಜು 31 : ದೇಶದ ಸ್ವತಂತ್ರ ಹೋರಾಟ ಹಾಗೂ ಆ ನಂತರದಲ್ಲಿ ದೇಶದ ಅಭಿವೃದ್ದಿಯಲ್ಲಿ ಪತ್ರಿಕೆಗಳ ಪಾತ್ರ ಬಹಳ ಮುಖ್ಯವಾಗಿದೆ. ನ್ಯಾಯಾಂಗ, ಶಾಸಕಾಂಗ ಹಾಗೂ ಕಾರ್ಯಾಂಗದ ಜತೆಗೂಡಿ ದೇಶದ ಪ್ರಗತಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.
ತಾಲ್ಲೂಕಿನ ಹಂಡಿಗನಾಳದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸ್ವತಂತ್ರ ಬಂದ ನಂತರ ನಾಲ್ಕೈದು ದಶಕಗಳ ಕಾಲ ಪತ್ರಿಕಾರಂಗದಲ್ಲಿ ಕಾರ್ಯನಿರ್ವಹಿಸುತ್ತಿದ್ದವರು. ಬಹಳಷ್ಟು ಕಷ್ಟ-ನಷ್ಟ ಸಾವುಗಳನ್ನು ಎದುರಿಸುವ ಸ್ಥಿತಿ ಇತ್ತು. ಆದರೆ ಇದೀಗ ಆ ಪರಿಸ್ಥಿತಿ ಇಲ್ಲ ಎಂದು ಹೇಳಿದರು.
ನಾವೆಲ್ಲರೂ ಒಪ್ಪಿಕೊಂಡಿರುವ ಸಂವಿಧಾನದ ನ್ಯಾಯಾಂಗ, ಶಾಸಕಾಂಗ ಹಾಗೂ ಕಾರ್ಯಾಂಗದೊಂದಿಗೆ ಈ ದೇಶದ ಅಭಿವೃದ್ದಿಗೆ ಪತ್ರಿಕಾ ರಂಗವೂ ಸಹ ತನ್ನದೇ ಆದ ದಾರಿಯಲ್ಲಿ ಕಾರ್ಯನಿರ್ವಹಿಸುತ್ತಾ ಅಪಾರ ಕೊಡುಗೆ ನೀಡಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷ ಹಾಗೂ ಮಾಧ್ಯಮ ಕ್ಷೇತ್ರವು ಜಾತಿ ಧರ್ಮ ಸ್ವ ಹಿತಾಸಕ್ತಿ ಬಿಟ್ಟು ಕಾರ್ಯನಿರ್ವಹಿಸುವಂತಾಗಬೇಕು, ಆಗಲೇ ಸಂವಿಧಾನ ಎಲ್ಲ ಆಶಯಗಳು ಈಡೇರಲು ಸಾಧ್ಯ. ಆ ನಿಟ್ಟಿನಲ್ಲಿ ಎಲ್ಲರೂ ತಮ್ಮ ತಮ್ಮ ಕಾರ್ಯವನ್ನು ಮಾಡೋಣ ಎಂದು ಆಶಿಸಿದರು.
ಈ ಕ್ಷೇತ್ರವು ಶೈಕ್ಷಣಿಕವಾಗಿ, ಆರೋಗ್ಯ ವಿಚಾರದಲ್ಲಿ ಸಾಕಷ್ಟು ಹಿಂದುಳಿದಿದೆ. ನಾನು ಚುನಾವಣೆ ಸಮಯದಲ್ಲಿ ಈ ಎರಡೂ ಕ್ಷೇತ್ರಗಳಿಗೆ ನಾನು ಒತ್ತು ನೀಡುವ ಭರವಸೆ ನೀಡಿದ್ದು ಈ ಕ್ಷೇತ್ರದ ಮತದಾರರು ನನ್ನ ಕೈ ಹಿಡಿದಿದ್ದಾರೆ. ಹಾಗಾಗಿ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದ ಸುಧಾರಣೆಗಾಗಿ ನಾನು ಒತ್ತು ನೀಡಲಿದ್ದು ಅಧಿಕಾರಿ ವರ್ಗ, ಸಂಘ ಸಂಸ್ಥೆಗಳು, ಸಮುದಾಯ ಹಾಗೂ ಮಾಧ್ಯಮದವರ ಸಹಕಾರ ಹೆಚ್ಚಿನ ರೀತಿಯಲ್ಲಿ ಬೇಕಿದೆ ಎಂದು ಮನವಿ ಮಾಡಿದರು.
ತಮಟೆ ಕಲಾವಿದ, ಪದ್ಮಶ್ರೀ ಪಿಂಡಿಪಾಪನಹಳ್ಳಿಯ ಡಾ. ಮುನಿವೆಂಕಟಪ್ಪ, ಕೇಂದ್ರ ಲೋಕಸೇವಾ ಆಯೋಗದ ಭಾರತೀಯ ಅರಣ್ಯ ಸೇವಾ ಪರೀಕ್ಷೆಯಲ್ಲಿ 20ನೇ ರ್ಯಾಂಕ್ ಪಡೆದ ತಲದುಮ್ಮನಹಳ್ಳಿಯ ಆಕರ್ಷ್ ಅವರ ತಂದೆ ಮುನೇಗೌಡ, ತಾಯಿ ಸೌಭಾಗ್ಯಮ್ಮ ಅವರನ್ನು ಸನ್ಮಾನಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನ ನೆರವೇರಿಸಲಾಯಿತು.
ತಾಲ್ಲೂಕು ಪಂಚಾಯಿತಿಯ ಎನ್ಆರ್ಎಲ್ಎಂ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಹಿಳಾ ಸ್ವ ಸ್ವಹಾಯ ಸಂಘಗಳ ಉತ್ಪನ್ನಗಳ ಮಾರಾಟ ಮೇಳ, ಛಾಯಾ ಚಿತ್ರಗ್ರಾಹಕ ಡಿ.ಜಿ.ಮಲ್ಲಿಕಾರ್ಜುನ್ ಅವರ ಅಂತರರಾಷ್ಟ್ರೀಯ ಪ್ರಶಸ್ತಿ ವಿಜೇತ ಛಾಯಾ ಚಿತ್ರಗಳು ಹಾಗೂ ಶಿಡ್ಲಘಟ್ಟ ದರ್ಶನ ಚಿತ್ರ ಪ್ರದರ್ಶನ ಏರ್ಪಡಿಸಲಾಗಿತ್ತು.
ಶಿಕ್ಷಕ ಕಲ್ಯಾಣ್ ಕುಮಾರ್ ಅವರ ದೇಶದ ಎಲ್ಲ ಪತ್ರಿಕೆಗಳ ವಿಶ್ವ ಕನ್ನಡ ಪತ್ರಿಕೆಗಳ ಪ್ರದರ್ಶನ ನಡೆಯಿತು. ಪತ್ರಕರ್ತ ದಿವಂಗತ ರಮೇಶ್ ಕುಟುಂಬಕ್ಕೆ ದಾನಿಗಳಿಂದ ಸಂಗ್ರಹಿಸಿದ ನೆರವನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಶಿಡ್ಲಘಟ್ಟ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವೀರಾಪುರ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಎಂ.ರಾಜಣ್ಣ, ಎಸ್ಎನ್ ಕ್ರಿಯಾ ಟ್ರಸ್ಟ್ನ ಪುಟ್ಟು ಆಂಜಿನಪ್ಪ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸಹನಾ ರಾಜೀವ್ಗೌಡ, ಕೆಪಿಸಿಸಿ ಜಿಲ್ಲಾ ಕೋಆರ್ಡಿನೇಟರ್ ರಾಜೀವ್ಗೌಡ, ಸಿಇಒ ಪ್ರಕಾಶ್ ಜಿಟಿ ನಿಟ್ಟಾಲಿ, ಜಂಟಿ ಕೃಷಿ ನಿರ್ದೇಶಕಿ ಜಾವೀದಾ ನಸೀಮಾ ಖಾನಂ, ಕೆಎಂಎಫ್ ನಿರ್ದೇಶಕ ಶ್ರೀನಿವಾಸ್ರಾಮಯ್ಯ, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎಂ.ಜಯರಾಮ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎ.ನಾಗರಾಜ್, ಬಿಜೆಪಿ ಯುವ ಮುಖಂಡ ಆನಂದ್ಗೌಡ, ಕಂಬದಹಳ್ಳಿ ಸುರೇಂದ್ರಗೌಡ, ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ, ಬೆಳ್ಳೂಟಿ ಸಂತೋಷ್, ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ್, ಬಂಕ್ ಮುನಿಯಪ್ಪ,ತಾದೂರು ರಘು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಸುನಿತಾ, ಟಿಹೆಚ್ಒ ವೆಂಕಟೇಶ್ ಇನ್ನಿತರರು ಹಾಜರಿದ್ದರು