ಸುದ್ದಿಮೂಲ ವಾರ್ತೆ
ಕಲಬುರಗಿ,ಮೇ13: ಜಿಲ್ಲೆಯ ಪ್ರತಿಷ್ಠಿತ ಕ್ಷೇತ್ರ, ರಾಜ್ಯದ ಗಮನ ಸೆಳೆದ ಚಿತ್ತಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಹಾಗೂ ಹಾಲಿ ಶಾಸಕ ಪ್ರಿಯಾಂಕ್ ಖರ್ಗೆ ಭರ್ಜರಿ ಜಯ ಸಾಧಿಸಿದ್ದಾರೆ.
ತಮ್ಮ ಪ್ರತಿ ಸ್ಪರ್ಧಿ ಬಿಜೆಪಿಯ ಮಣಿಕಂಠ ರಾಠೋಡ್ ವಿರುದ್ಧ 13638 ಮತಗಳ ಅಂತರದಲ್ಲಿ ಗೆಲವು ಸಾಧಿಸಿದ್ದಾರೆ.
ಶಾಸಕ ಪ್ರಿಯಾಂಕ್ ಖರ್ಗೆ 81,088 ಮತಗಳು ಪಡೆದರೆ, ಮಣಿಕಂಠ ರಾಠೋಡ್ 67,450 ಮತಗಳು ಪಡೆದಿದ್ದಾರೆ. ಅಧಿಕೃತ ಘೋಷಣೆ ಬಾಕಿ ಇದೆ.