ಸುದ್ದಿಮೂಲವಾರ್ತೆ
ಕೊಪ್ಪಳ,ಜೂ.8: ಕರ್ನಾಟಕ ಲೋಕಸೇವಾ ಆಯೋಗದಿಂದ ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಜೂನ್ 09ರಿಂದ ಜೂನ್ 11ರವರೆಗೆ ಈ ಸಾಲಿನ ದ್ವಿತೀಯ ಅಧಿವೇಶನದ ಇಲಾಖೆ ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತ 200ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಆದೇಶ ಹೊರಡಿಸಿದ್ದಾರೆ.
ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢ ಶಾಲಾ ವಿಭಾಗ) ಕೊಪ್ಪಳ ಪರೀಕ್ಷಾ ಕೇಂದ್ರದಲ್ಲಿ ದ್ವಿತೀಯ ಅಧಿವೇಶನದ ಇಲಾಖೆ ಪರೀಕ್ಷೆಗಳು ನಿಗದಿತ ದಿನಾಂಕದ ಬೆಳಿಗ್ಗೆ 9ರಿಂದ ಮಧ್ಯಾಹ್ನ 4 ಗಂಟೆಯವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ತಡೆಗಟ್ಟಲು 144ರನ್ವಯ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ವಿವಿಧ ಷರತ್ತಿಗೆ ಒಳಪಟ್ಟು ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.