ಸುದ್ದಿಮೂಲ ವಾರ್ತೆ,
ಮೈಸೂರು, ಜೂ.20:ವಿದ್ಯುತ್ ದರ ಹೆಚ್ಚಳ, ಅನ್ನಭಾಗ್ಯ ಅಕ್ಕಿ ವಿತರಣೆ ವಿಳಂಬ ವಿರೋಧಿಸಿ ನಗರ ಮತ್ತು ಜಿಲ್ಲಾ ಬಿಜೆಪಿ ಕಾರ್ಯಕರ್ತರು ಮಂಗಳವಾರ ಜಿಲ್ಲಾ ಪಂಚಾಯ್ತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸಿಎಂ ಸಿದ್ದರಾಮಯ್ಯ ಅಂದರೆ ಸುಳ್ಳುಗಾರ, ಮೋಸಗಾರ ಎಂಬಿತ್ಯಾದಿ ಘೋಷಣೆಗಳನ್ನು ಕೂಗಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಶಾಸಕ ಎಲ್.ನಾಗೇಂದ್ರ ಮತ್ತು ಶಾಸಕ ಶ್ರೀವತ್ಸ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯುತು. ಈ ವೇಳೆ ಮುಖಂಡರು ಮಾತನಾಡಿ, ಕೇಂದ್ರ ಸರ್ಕಾರದ 5 ಕೆ. ಜಿ ಜೊತೆ 10 ಕೆ.ಜಿ ಸೇರಿಸಿ 15 ಕೆ ಜಿ ಅಕ್ಕಿ ಕೊಡಿ ಅದನ್ನು ಬಿಟ್ಟು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವುದನ್ನು ಬಿಡಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.